ಜೂ.18ರಂದು ನಡೆದಿದ್ದ ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆಯ ಕೀ ಉತ್ತರ ಪ್ರಕಟ

Published : Jun 19, 2020, 06:16 PM IST
ಜೂ.18ರಂದು ನಡೆದಿದ್ದ ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆಯ ಕೀ ಉತ್ತರ ಪ್ರಕಟ

ಸಾರಾಂಶ

ಬಾಕಿ ಉಳಿದ್ದ ದ್ವಿತೀಯ ಪಿಯುಸಿಯ ಇಂಗ್ಲೀಷ್ ಪರೀಕ್ಷೆ ಜೂನ್ 18ಕ್ಕೆ ಅಂತ್ಯವಾಗಿದ್ದು, ಅದರ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ.

ಬೆಂಗಳೂರು, (ಜೂನ್.19): ರಾಜ್ಯದಲ್ಲಿ ಗುರುವಾರ (ಜೂನ್ 18) ನಡೆದಿದ್ದ ದ್ವಿತೀಯ ಪಿಯುಸಿ ಆಂಗ್ಲ (ಇಂಗ್ಲೀಷ್) ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ.

ಇಂದು (ಶುಕ್ರವಾರ) ಪದವಿ ಪೂರ್ವ ಶಿಕ್ಷಣ ಇಲಾಖೆ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದು, ಕೀ ಉತ್ತರಗಳ ಕುರಿತು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. 

ದ್ವಿತೀಯ ಪಿಯು ಪರೀಕ್ಷೆಯ ಕೀ ಉತ್ತರಗಳು ಪ್ರಕಟ: ಚೆಕ್ ಮಾಡ್ಕೊಳ್ಳಿ

ವಿದ್ಯಾರ್ಥಿಗಳು, ಉಪನ್ಯಾಸಕರು ಪದವಿ ಪೂರ್ವ ಶಿಕ್ಷಣ ಇಲಾಖೆಯ ವೆಬ್‌ಸೈಟ್ ಆಕ್ಷೇಪಣೆ ಸಲ್ಲಿಸಬಹುದು ಎಂದು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.  ವೆಬ್‌ಸೈಟ್ ವಿಳಾಸ- www.puc.kar.nic.in

 ಕೊರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಾಕಿ ಉಳಿದಿದ್ದ ದ್ವಿತೀಯ ಪಿಯು ಇಂಗ್ಲೀಷ್ ಪತ್ರಿಕೆ ಪರೀಕ್ಷೆಯನ್ನು ಜೂನ್ 18ಕ್ಕೆ ನಿಗದಿಪಡಿಸಲಾಗಿತ್ತು. ಕೊರೋನಾ ಭೀತಿ ನಡುವೆಯೂ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಎದುರುನೋಡುತ್ತಿದ್ದಾರೆ.

ಇನ್ನು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಜುಲೈ ಮೊದಲ ವಾರ ಪ್ರಕಟಿಸುವುದಾಗಿ ಸ್ವತಃ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

PREV
click me!

Recommended Stories

ಪ್ರತಿಷ್ಠಿತ ಶಾಲೆಯ ಮೇಲೆ ಐಟಿ ರೈಡ್: ಕೋಟಿ ಕೋಟಿ ಹಣ ಪತ್ತೆ: ಹಣ ಎಣಿಸುವ ಯಂತ್ರ ತರಿಸಿದ ಅಧಿಕಾರಿಗಳು
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ