SSLC ರಿಸಲ್ಟ್‌ಗಾಗಿ ಕಾಯುತ್ತಿರೋ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್

By Suvarna NewsFirst Published Jul 20, 2020, 5:37 PM IST
Highlights

ಕೊರೋನಾ ಭೀತಿ ಮಧ್ಯೆಯೂ ಎಸ್ಎಸ್‌ಎಲ್‌ಸಿ ಪರೀಕ್ಷೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಇದೀಗ ವಿದ್ಯಾರ್ಥಿಗಳ ರಿಸಲ್ಟ್ ಯಾವಾಗ ಪ್ರಕಟವಾಗಲಿದೆ ಎನ್ನುವುದನ್ನ ಸಚಿವ ಸುರೇಶ್ ಕುಮಾರ್ ಮಾಹಿತಿ ಕೊಟ್ಟಿದ್ದಾರೆ.  

ಬೆಂಗಳೂರು, (ಜುಲೈ.20): ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸೋಮವಾರ ಬೆಂಗಳೂರು ನಗರದ ವಿವಿಧೆಡೆಯ 5 ಎಸ್‌ಎಸ್‌ಎಲ್ ಸಿ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿ ಮೌಲ್ಯಮಾಪನ ಪ್ರಕ್ರಿಯೆಯನ್ನು ವೀಕ್ಷಿಸಿದು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 10 ದಿನಗಳಲ್ಲಿ ರಾಜ್ಯದ ಎಲ್ಲಾ ಕೇಂದ್ರಗಳ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, 8.5 ಲಕ್ಷ ವಿದ್ಯಾರ್ಥಿಗಳ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸುವುದಾಗಿ ಸ್ಪಷ್ಟಪಡಿಸಿದರು.

ಶಾಲೆ ಪುನಾರಂಭ ಬಗ್ಗೆ ಸ್ಪಷ್ಟನೆ ಕೊಟ್ಟ ಸಚಿವ ಸುರೇಶ್ ಕುಮಾರ್

ರಾಜ್ಯಾದ್ಯಂತ 220 ಮೌಲ್ಯಮಾಪನ ಕೇಂದ್ರದಲ್ಲಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದೆ.  ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನು ಎರಡು ದಿನಗಳಲ್ಲಿ 180 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಮುಗಿಯಲಿದೆ ಎಂದರು.

ಬೆಂಗಳೂರು ಮಹಾನಗರದ 28 ಕೇಂದ್ರಗಳಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಮೌಲ್ಯಮಾಪನಕ್ಕೆ ಶೇ. 45ರಷ್ಟು ಶಿಕ್ಷಕರು ಹಾಜರಾಗಿದ್ದು, ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಮೌಲ್ಯಮಾಪನ ನಡೆಯುತ್ತಿದೆ ಎಂದು ಹೇಳಿದರು.

click me!