10ನೇ ತರಗತಿ ಪರೀಕ್ಷೆ ಕ್ಯಾನ್ಸಲ್, ವಿದ್ಯಾರ್ಥಿಗಳಿಗೆ ಸಿಕ್ತು ಮುಂದಿನ ಕ್ಲಾಸ್‌ಗೆ ಗ್ರೇಸ್

Published : Jun 08, 2020, 07:04 PM ISTUpdated : Jun 08, 2020, 08:19 PM IST
10ನೇ ತರಗತಿ ಪರೀಕ್ಷೆ ಕ್ಯಾನ್ಸಲ್, ವಿದ್ಯಾರ್ಥಿಗಳಿಗೆ ಸಿಕ್ತು ಮುಂದಿನ ಕ್ಲಾಸ್‌ಗೆ ಗ್ರೇಸ್

ಸಾರಾಂಶ

ಕೊರೋನಾ ಭೀತಿ ಹಿನ್ನೆಲೆಯಲ್ಲಿ ಹತ್ತನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿ, ವಿದ್ಯಾರ್ಥಿಗಳಿಗೆ ಮುಂದಿನ ಕ್ಲಾಸ್‌ಗೆ ಕಳಹಿಸುವ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಹೈದರಾಬಾದ್, (ಜೂನ್.08): ಹತ್ತನೇ ತರಗತಿಯ ಮಕ್ಕಳಿಗೆ ಯಾವುದೇ ಪರೀಕ್ಷೆ ಇಲ್ಲದೆ ಪಾಸ್ ಮಾಡಲು ನಿರ್ಧರಿಸಲಾಗಿದೆ. ಇದು ಕರ್ನಾಟಕದಲ್ಲಿ ಅಲ್ಲ. ಪಕ್ಕದ ರಾಜ್ಯ ತೆಲಾಂಗಾಣದಲ್ಲಿ ಇಂತಹದೊಂದು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಕೊರೋನಾ ವೈರಸ್ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹತ್ತನೇ ತರಗತಿ (SSLC) ಮಕ್ಕಳಿಗೆ ಯಾವುದೇ ಪರೀಕ್ಷೆ ಇಲ್ಲದೆ ಪಾಸ್ ಮಾಡಿ ತೆಲಾಂಗಾಣದ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಇಂದು (ಸೋಮವಾರ) ಘೋಷಣೆ ಮಾಡಿದ್ದಾರೆ.

ಕರ್ನಾಟಕ SSLC ಪರೀಕ್ಷೆ ವೇಳಾಪಟ್ಟಿ ಪ್ರಕಟ.

ಹತ್ತನೇ ತರಗತಿ ಮಕ್ಕಳ ಇಂಟರ್ನಲ್ ಗ್ರೇಡ್ ಆಧಾರದ ಮೇಲೆ ಅಂಕ ನೀಡಿ ಪಾಸ್ ಮಾಡಲು ತೆಲಂಗಾಣ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಇನ್ನು ಕರ್ನಾಟಕದಲ್ಲೂ ಸಹ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ರದ್ದು ಮಾಡಬೇಕೆಂಬ ಕೂಗು ಕೇಳಿಬಂದಿದ್ದವು. ಅಲ್ಲದೇ ವಕೀಲರೊಬ್ಬರು ಕೋರ್ಟ್ ಮೇಟ್ಟಿಲೇರಿದ್ದರು.

ಆದ್ರೆ, ಕೋರ್ಟ್ ಮಕ್ಕಳಿಗೆ ತೊಂದರೆಯಾಗದಂತೆ ಪರೀಕ್ಷೆ ನಡೆಸಿ ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದು, ಇದೇ ಜೂನ್ 25ರಿಂದ ಜುಲೈ 3ರ ವರೆಗೆ ಪರೀಕ್ಷೆಗಳು ನಡೆಯಲಿವೆ.

PREV
click me!

Recommended Stories

ಪ್ರತಿಷ್ಠಿತ ಶಾಲೆಯ ಮೇಲೆ ಐಟಿ ರೈಡ್: ಕೋಟಿ ಕೋಟಿ ಹಣ ಪತ್ತೆ: ಹಣ ಎಣಿಸುವ ಯಂತ್ರ ತರಿಸಿದ ಅಧಿಕಾರಿಗಳು
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ