ಉಪನ್ಯಾಸಕ ಹುದ್ದೆಗೆ ಕಡ್ಡಾಯವಾಗಿರೋ ನೆಟ್ ಪರೀಕ್ಷೆಗೆ ಅರ್ಜಿ ಆಹ್ವಾನ

Published : Sep 01, 2019, 02:59 PM IST
ಉಪನ್ಯಾಸಕ ಹುದ್ದೆಗೆ ಕಡ್ಡಾಯವಾಗಿರೋ ನೆಟ್ ಪರೀಕ್ಷೆಗೆ ಅರ್ಜಿ ಆಹ್ವಾನ

ಸಾರಾಂಶ

ಉಪನ್ಯಾಸಕ ಹುದ್ದೆಗೆ ಕಡ್ಡಾಯವಾಗಿರುವ ಯುಜಿಸಿ ನೆಟ್ ಪರೀಕ್ಷೆಗೆ ಅರ್ಜಿ ಆಹ್ವಾನ| ಅರ್ಜಿ ಸಲ್ಲಿಕೆ ದಿನಾಂಕವನ್ನು ಪ್ರಕಟಿಸಿದ ಎನ್​ಟಿಎ|ನೆಟ್‌ ಪರೀಕ್ಷೆ ಬೇಕಾದ ಅರ್ಹತೆಗಳೇನು? ಮುಂದೆ ಓದಿ. 

ನವದೆಹಲಿ, (ಸೆ.01): ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ(ಎನ್​ಟಿಎ), 2019 ಸಾಲಿನ ಯುಜಿಸಿ ರಾಷ್ಟ್ರೀಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯ ಅರ್ಜಿ ಸಲ್ಲಿಕೆಗೆ ಪ್ರಕಟಣೆ ಹೊರಡಿಸಿದೆ.

ಸೆಪ್ಟೆಂಬರ್ 9 ರಿಂದ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 9 ಅರ್ಜಿ ಸಲ್ಲಿಸಲು ಕಡೇ ದಿನವಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು  ಎನ್​ಟಿಎ ಅಧಿಕೃತ ವೆಬ್​ಸೈಟ್​ (ntanet.nic.in)ನಲ್ಲಿ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಜಾಬ್ಸ್‌ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ 800 ರು., ಹಿಂದುಳಿದ ವರ್ಗ, ಇಡಬ್ಲ್ಯುಎಸ್​ ಅಭ್ಯರ್ಥಿಗಳಿಗೆ 400 ರು. ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 200 ರು. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. 

ಶೈಕ್ಷಣಕ ಅರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಕನಿಷ್ಠ ಶೇ.55 ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. 

ಸ್ನಾತಕೋತ್ತರ ಪದವಿಯ ಮೊದಲ ವರ್ಷ ಪೂರ್ಣಗೊಳಿಸಿರುವವರು, ಫಲಿತಾಂಶಕ್ಕೆ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಎನ್​ಟಿಎ ವೆಬ್​ಸೈಟ್​​ನಲ್ಲಿ ಪರಿಶೀಲಿಸಬಹುದು.

ಪರೀಕ್ಷೆ ದಿನಾಂಕ: ಡಿಸೆಂಬರ್ 2 ರಿಂದ 6 ವರೆಗೆ ದೇಶಾದ್ಯಂತ ನಿಗದಿತ ಕೇಂದ್ರಗಳಲ್ಲಿ ಆನ್​ಲೈನ್ ಪರೀಕ್ಷೆ ನಡೆಯಲಿದೆ. ಡಿಸೆಂಬರ್ 31 ರಂದು ಫಲಿತಾಂಶ ಪ್ರಕಟವಾಗಲಿದೆ. 

PREV
click me!

Recommended Stories

20 ಮಕ್ಕಳಿಗೆ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಧಾನ, ಇಬ್ಬರು ಮಕ್ಕಳಿಗೆ ಮರಣೋತ್ತರ ಪ್ರಶಸ್ತಿ ಕೊಟ್ಟಿದ್ಯಾಕೆ?
ಸೆರೆಬ್ರಲ್ ಪಾಲ್ಸಿ ನರದ ಸಮಸ್ಯೆ ಇದ್ದರೂ ಎಲ್ಲವನ್ನು ಮೆಟ್ಟಿನಿಂತು ಮೊದಲ ಪ್ರಯತ್ನದಲ್ಲೇ UPSC ಪಾಸಾದ ಮನ್ವೇಂದ್ರ!