* ಭಾರತೀಯ ಪ್ರಾಥಮಿಕ ಶಾಲಾ ಶಿಕ್ಷಕರ ಒಕ್ಕೂಟ ರಾಜ್ಯ ಸರ್ಕಾರಕ್ಕೆ ಆಗ್ರಹ
* ಸರ್ಕಾರದ ಖಜಾನೆಯಿಂದ ಪ್ರತ್ಯೇಕವಾಗಿ ತಲಾ ಒಂದು ಕೋಟಿ ರು. ಪರಿಹಾರ ಒದಗಿಸಬೇಕು
* ಮೃತ ಶಿಕ್ಷಕರ ಅವಲಂಬಿತರಿಗೆ ಸರ್ಕಾರಿ ಉದ್ಯೋಗ ನೀಡಬೇಕು
ಬೆಂಗಳೂರು(ಮೇ.21): ಕೋವಿಡ್ ಸೋಂಕಿನಿಂದ ಮೃತಪಟ್ಟ ಪ್ರತಿ ಶಿಕ್ಷಕರ ಕುಟುಂಬಕ್ಕೆ ಒಂದು ಕೋಟಿ ರು. ನೀಡಬೇಕೆಂದು ಅಖಿಲ ಭಾರತೀಯ ಪ್ರಾಥಮಿಕ ಶಾಲಾ ಶಿಕ್ಷಕರ ಒಕ್ಕೂಟ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ.
ಶಿಕ್ಷಕರ ಕಲ್ಯಾಣ ನಿಧಿಯಿಂದ ಈಗಾಗಲೇ ಶಿಕ್ಷಕರಿಗೆ ಹಲವು ರೀತಿಯ ಸೌಲಭ್ಯ ದೊರೆಯುತ್ತಿದೆ. ಮೃತರ ಕುಟುಂಬಕ್ಕೆ 10 ಸಾವಿರದಿಂದ ಒಂದು ಲಕ್ಷ ರು.ವರೆಗೂ ಪರಿಹಾರ ನೀಡಲಾಗುತ್ತಿದೆ. ಕೊರೋನಾದಿಂದ ಮೃತಪಟ್ಟ ಶಿಕ್ಷಕರ ಕುಟುಂಬಕ್ಕೆ ಶಿಕ್ಷಕರ ಕಲ್ಯಾಣ ನಿಧಿಯಿಂದ ಸಿಗಬೇಕಾದ ಸೌಲಭ್ಯ ಸಿಕ್ಕೇ ಸಿಗುತ್ತದೆ. ಜತೆಗೆ ಸರ್ಕಾರದ ಖಜಾನೆಯಿಂದ ಪ್ರತ್ಯೇಕವಾಗಿ ತಲಾ ಒಂದು ಕೋಟಿ ರು. ಪರಿಹಾರ ಒದಗಿಸಬೇಕು. ಜತೆಗೆ ಮೃತ ಶಿಕ್ಷಕರ ಅವಲಂಬಿತರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒಕ್ಕೂಟದ ಉಪಾಧ್ಯಕ್ಷ ಬಸವರಾಜ ಗುರಿಕಾರ ಆಗ್ರಹಿಸಿದ್ದಾರೆ.
ಕೊರೋನಾ ಸಂಕಷ್ಟ: ಶಾಲಾ ಶುಲ್ಕ ಏರಿಕೆಗೆ ಬ್ರೇಕ್
ಮೃತರು ಹೊಸ ಪಿಂಚಣಿ ವ್ಯವಸ್ಥೆಗೆ ಒಳಪಟ್ಟಿದ್ದರೆ, ಅಂತಹ ಪ್ರಕರಣವನ್ನು ಹಳೇ ಪಿಂಚಣಿ ವ್ಯವಸ್ಥೆಗೆ ಪರಿವರ್ತಿಸಿ, ಕುಟುಂಬಕ್ಕೆ ಪಿಂಚಣಿ ಸೌಲಭ್ಯ ಸಿಗುವಂತೆ ಮಾಡಬೇಕು.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona