1 ರಿಂದ 5ನೇ ತರಗತಿ ಪ್ರಾರಂಭಕ್ಕೆ ಕೂಡಿಬಂತು ಕಾಲ

By Suvarna NewsFirst Published Oct 16, 2021, 5:23 PM IST
Highlights

* 1 ರಿಂದ 5ನೇ ತರಗತಿವರೆಗಿನ ಶಾಲೆ ಪ್ರಾರಂಭದ ಬಗ್ಗೆ ಚರ್ಚೆ
* ಪ್ರಾಥಮಿಕ ಹಾಗೂ ಪ್ರೌಶ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರತಿಕ್ರಿಯೆ
 * ಇನ್ನೆರಡು ದಿನಗಳಲ್ಲಿ ಅಂತಿಮ ನಿರ್ಧಾರ ಪ್ರಕಟ ಸಾಧ್ಯತೆ
 

ಬೆಂಗಳೂರು, (ಅ.16): ರಾಜ್ಯದಲ್ಲಿ 1ರಿಂದ 5ನೇ ತರಗತಿವರೆಗಿನ ಶಾಲೆಗಳು (Sholls) ಯಾವಾಗ ಆರಂಭವಾಗುತ್ತವೆ ಎನ್ನುವ ಚರ್ಚೆ ಹಲವು ದಿನಗಳಿಂದ ನಡೆಯುತ್ತಿವೆ. ಇದೀಗ  1 ರಿಂದ 5ನೇ ತರಗತಿ ಪ್ರಾರಂಭಕ್ಕೆ ಕಾಲಕೂಡಿಬಂದಿದ್ದು, ಈ ಬಗ್ಗೆ ಇನ್ನೆರಡು ದಿನಗಳಲ್ಲಿ ಅಂತಿಮ ನಿರ್ಧಾರ ಪ್ರಕಟವಾಗಲಿದೆ.

ಇನ್ನು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಶ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BS Nagesh),  1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಬಗ್ಗೆ ಇನ್ನೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಸಭೆ ನಿಗದಿ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ನೀಡಿದ ಸಚಿವ ಬಿ. ಸಿ. ನಾಗೇಶ್

1 ರಿಂದ 5 ನೇ ತರಗತಿವರೆಗೆ ಶಾಲೆ ಆರಂಭಕ್ಕೆ ಶಿಕ್ಷಣ ಇಲಾಖೆ (Education Department)ತೀರ್ಮಾನ ಮಾಡಿದೆ‌. ಆದರೆ ತಾಂತ್ರಿಕ ಸಲಹಾ ಸಮಿತಿ ಏನು ಹೇಳುತ್ತದೆ ಎಂಬುದನ್ನು ನೋಡಬೇಕು. ಒಂದು ವೇಳೆ ಅವರು ಹಂತ ಹಂತವಾಗಿ ಶಾಲೆ ಆರಂಭಿಸಿ ಅಂದರೆ‌, 1 ರಿಂದ 2 ಹಾಗೂ 3 ರಿಂದ‌ 5ನೇ ತರಗತಿವರೆಗೆ ಶಾಲೆ ಆರಂಭಿಸುವ ಬಗ್ಗೆ ನಿರ್ಧಾರ ಮಾಡ್ತೇವೆ‌. ಒಂದು ವೇಳೆ ಈ ರೀತಿ ನಿರ್ಧಾರ ಆದರೂ ಸಮಯ ಜಾಸ್ತಿ ತೆಗೆದುಕೊಳ್ಳುವುದಿಲ್ಲ‌ ಎಂದರು.

ಸದ್ಯಕ್ಕೆ ಇದುವರೆಗೂ ಶಾಲೆ ಆರಂಭಿಸುವ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಲಹೆ ಪಡೆದಿಲ್ಲ. ಸಿಎಂ ಸಭೆಗೆ ಸಮಯ ಕೊಟ್ಟ ಕೂಡಲೇ, ತಜ್ಞರಿಂದ ಅಭಿಪ್ರಾಯ ಪಡೆಯುತ್ತೇವೆ. ಆ ನಂತರ ಶಾಲೆ ಆರಂಭಿಸುವ ಬಗ್ಗೆ ಅಂತಿಮ ನಿರ್ಧಾರ ಮಾಡ್ತೇವೆ. ಈಗಾಗಲೇ ಶಾಲೆ ಆರಂಭಕ್ಕೆ ಶಿಕ್ಷಣ ಇಲಾಖೆ ಎಲ್ಲಾ ರೀತಿಯ ಸಿದ್ದತೆ ನಡೆಸಿದೆ ಎಂದು ಅವರು ತಿಳಿಸಿದ್ದಾರೆ.

ಭಗವಂತನ ಅನುಗ್ರಹದಿಂದ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ. ಹಲವಾರು ಜಿಲ್ಲೆಯಲ್ಲಿ ಪಾಸಿಟಿವಿಟಿ ಶೂನ್ಯ ಪ್ರಮಾಣದಲ್ಲಿದೆ. ಹೀಗಾಗಿ ತಜ್ಞರ ಅಭಿಪ್ರಾಯದಂತೆ ದಸರಾ (Dasara) ಮುಗಿದ ತಕ್ಷಣವೇ ಶಾಲೆಗಳು ಆರಂಭಿಸುತ್ತೇವೆ. ಜತೆಗೆ ದಸರಾ ಮುಗಿದ ತಕ್ಷಣ ಬಿಸಿಯೂಟ (midday meal) ಆರಂಭವಾಗಲಿದೆ ಎಂದು ಈ ಮೊದಲು ಸಚಿವರು ಹೇಳಿಕೆ ನೀಡಿದ್ದರು.

ಆಯಾ ಜಿಲ್ಲೆಯ ಅಧಿಕಾರಿಗಳು ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದಾರೆ. ಎಲ್ಲರಿಗೂ ಶಾಲೆ ಕಡ್ಡಾಯ ಮಾಡಿಲ್ಲ, ಮುಂದೆಯೂ ಕಡ್ಡಾಯ ಮಾಡಲ್ಲ. ಆನ್ಲೈನ್, ಆಫ್ ಲೈನ್ ಎರಡು ಮಾದರಿಯಲ್ಲಿ ತರಗತಿಗಳು ನಡೆಯಲಿದೆ. ಈಗ ಆರಂಭವಾಗಿರುವ ಶಾಲೆಗಳ ಹಾಜರಾತಿ ತೃಪ್ತಿಕರವಾಗಿದೆ. ಆನ್ಲೈನ್ ತರಗತಿಯಿಂದ ಕೆಳ ಗ್ರಾಮೀಣ ಮಕ್ಕಳಿಗೆ ತೊಂದರೆಯಾಗಿದೆ. ಗ್ರಾಮೀಣ ಭಾಗದಲ್ಲಿ ಹೈಸ್ಕೂಲ್ ಮಕ್ಕಳ ಹಾಜರಾತಿ ಶೇ. 90ರಷ್ಟಿದೆ ಎಂದು ಅವರು ಮಾಹಿತಿ ನೀಡಿದ್ದರು.

click me!