10, 12ನೇ ತರಗತಿ ವಾರ್ಷಿಕ ಪರೀಕ್ಷೆಗಳು ಮೇಗೆ ಮುಂದೂಡಿಕೆ

Kannadaprabha News   | Asianet News
Published : Nov 20, 2020, 09:23 AM IST
10, 12ನೇ ತರಗತಿ ವಾರ್ಷಿಕ ಪರೀಕ್ಷೆಗಳು ಮೇಗೆ ಮುಂದೂಡಿಕೆ

ಸಾರಾಂಶ

10 ಹಾಗೂ 12 ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯನ್ನು ಮುಂದಿನ ಮೇ ತಿಂಗಳಿಗೆ ಮುಂದೂಡಿಕೆ ಮಾಡಲಾಗಿದೆ   2ನೇ ಹಂತದ ಸೋಂಕಿನ ಭೀತಿಯ ನಡುವೆಯೇ ಈ ನಿರ್ಧಾರ ಕೈಗೊಳ್ಳಲಾಗಿದೆ. 

ಮುಂಬೈ (ನ.20): ಶಾಲಾ-ಕಾಲೇಜುಗಳ ಪುನಾರಂಭದ ಬಳಿಕ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಕೊರೋನಾ ಹೆಚ್ಚುತ್ತಿರುವ ಮತ್ತು 2ನೇ ಹಂತದ ಸೋಂಕಿನ ಭೀತಿಯ ನಡುವೆಯೇ ಮಹಾರಾಷ್ಟ್ರ ಮತ್ತು ಗುಜರಾತ್‌ ರಾಜ್ಯ ಸರ್ಕಾರಗಳು ಪ್ರಸಕ್ತ ಸಾಲಿನ 10 ಮತ್ತು 12ನೇ ತರಗತಿಯ ವಾರ್ಷಿಕ ಪರೀಕ್ಷೆಗಳನ್ನು ಮುಂದೂಡಿವೆ. 

ಈ ಹಿಂದಿನ ನಿರ್ಧಾರದ ಪ್ರಕಾರ ಫೆಬ್ರವರಿ- ಮಾರ್ಚ್ ತಿಂಗಳಿನಲ್ಲಿ ವಾರ್ಷಿಕ ಪರೀಕ್ಷೆ ನಡೆಸಬೇಕಿತ್ತು. ಆದರೆ ಅದನ್ನು ಇದೀಗ ಮೇ ತಿಂಗಳಿಗೆ ಮುಂದೂಡಿವೆ.

ಈ ಎರಡು ರಾಜ್ಯ ಸರ್ಕಾರಗಳ ನಿರ್ಧಾರವನ್ನು ಇತರೆ ರಾಜ್ಯಗಳು ಕೂಡಾ ಅನಸರಿಸುವ ಸಾಧ್ಯತೆ ಇದೆ. 

ಖಾಸಗಿ ಶಾಲೆ ತೊರೆದು ಸರ್ಕಾರಿ ಶಾಲೆ ಸೇರಿದ 2 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು

ಜೊತೆಗೆ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಕೂಡಾ ಫೆಬ್ರವರಿ- ಮಾಚ್‌ರ್‍ ತಿಂಗಳಿನಲ್ಲಿ ವಾರ್ಷಿಕ ಪರೀಕ್ಷೆ ನಡೆಸುತ್ತಿದ್ದವು. ಅವು ಕೂಡಾ ಇಂಥದ್ದೇ ಹಾದಿ ತುಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಈ ಕುರಿತು ಅವು ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ.

PREV
click me!

Recommended Stories

ನಗರ ವಿವಿ ಎಡವಟ್ಟು: 400 ಎಂಕಾಂ ಸ್ಟೂಡೆಂಟ್ಸ್ ಫೇಲ್‌!
ಸರ್ಕಾರಿ ಶಾಲೆಗಳ ಆಘಾತಕಾರಿ ಬೆಳವಣಿಗೆ, ಮಕ್ಕಳ ದಾಖಲಾತಿ 17 ಲಕ್ಷ ಕುಸಿತ ನಿಜವೆಂದು ಒಪ್ಪಿಕೊಂಡ ಸರ್ಕಾರ!