ರಾಜ್ಯ ಸರ್ಕಾರ ಈ 20 ಅಂಶಗಳ ಕಾರ್ಯಕ್ರಮ ರೂಪಿಸಿ ಒಂದು ತಿಂಗಳೇ ಕಳೆದಿದೆ. ಆದರೆ, ಅವುಗಳು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಕೆಲ ಶಾಲೆ, ಕಾಲೇಜುಗಳಲ್ಲಿ ಕೆಲ ಅಂಶಗಳನ್ನು ತಕ್ಕ ಮಟ್ಟಿಗೆ ಜಾರಿಗೊಳಿಸಿದ್ದರೆ, ಇನ್ನು ಕೆಲ ಅಂಶಗಳನ್ನು ಜಾರಿಗೊಳಿಸಲು ಆಗಿಲ್ಲ. ಕೆಲ ಅಂಶಗಳು ಶಿಕಕರು, ಉಪನ್ಯಾಸಕರಿಗೆ ಹೊರೆಯಾಗುತ್ತಿದ್ದು ಅವುಗಳನ್ನು ಪುನರ್ ಪರಿಶೀಲಿಸಬೇಕೆಂಬ ಆಗ್ರಹ ವ್ಯಕ್ತವಾಗುತ್ತಿದೆ.
ಲಿಂಗರಾಜು ಕೋರಾ
ಬೆಂಗಳೂರು(ಡಿ.04): ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಕಳೆದ 22 ವರ್ಷ ಜಾರಿಗೊಳಿಸಿದ 'ವರ್ಷಕ್ಕೆ ಮೂರು ಪರೀಕ್ಷೆ'ಯಿಂದ ಫಲಿತಾಂಶ ನಿರೀಕ್ಷಿತ ಮಟ್ಟಕ್ಕೆ ಹೆಚ್ಚಾಗದ ಹಿನ್ನೆಲೆಯಲ್ಲಿ 2024-25ನೇ ಸಾಲಿನಲ್ಲಿ ಫಲಿತಾಂಶ ವೃದ್ಧಿಗೆ ರಾಜ್ಯ ಸರ್ಕಾರ ರೂಪಿಸಿರುವ 20 ಅಂಶಗಳ ಕಾರ್ಯಕ್ರಮ ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ ಎಂಬ ದೂರು ಕೇಳಿಬಂದಿದೆ.
ರಾಜ್ಯ ಸರ್ಕಾರ ಈ 20 ಅಂಶಗಳ ಕಾರ್ಯಕ್ರಮ ರೂಪಿಸಿ ಒಂದು ತಿಂಗಳೇ ಕಳೆದಿದೆ. ಆದರೆ, ಅವುಗಳು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಕೆಲ ಶಾಲೆ, ಕಾಲೇಜುಗಳಲ್ಲಿ ಕೆಲ ಅಂಶಗಳನ್ನು ತಕ್ಕ ಮಟ್ಟಿಗೆ ಜಾರಿಗೊಳಿಸಿದ್ದರೆ, ಇನ್ನು ಕೆಲ ಅಂಶಗಳನ್ನು ಜಾರಿಗೊಳಿಸಲು ಆಗಿಲ್ಲ. ಕೆಲ ಅಂಶಗಳು ಶಿಕಕರು, ಉಪನ್ಯಾಸಕರಿಗೆ ಹೊರೆಯಾಗುತ್ತಿದ್ದು ಅವುಗಳನ್ನು ಪುನರ್ ಪರಿಶೀಲಿಸಬೇಕೆಂಬ ಆಗ್ರಹ ವ್ಯಕ್ತವಾಗುತ್ತಿದೆ.
ಎಸ್‌ಎಸ್‌ಎಲ್‌ಸಿ ಉತ್ತಮ ಫಲಿತಾಂಶಕ್ಕಾಗಿ ಮಾಸ್ಟರ್ ಪ್ಲಾನ್: ಪ್ರದೀಪ್ ಈಶ್ವರ್
20 ಅಂಶಗಳ ಕಾರ್ಯಕ್ರಮದ ಪೈಕಿ ಪ್ರಮುಖವಾಗಿ ಡಿಸೆಂಬರ್ ಅಂತ್ಯದೊಳಗೆ ಎಲ್ಲ ಪಠ್ಯ ವಿಷಯಗಳ ಬೋಧನೆ ಪೂರ್ಣಗೊಳಿಸಬೇಕು. ಪ್ರತಿ ದಿನ ಶಾಲೆ/ಕಾಲೇಜು ಅವಧಿಯ ಮೊದಲು ಮತ್ತು ನಂತರ ಒಂದು ವಿಷಯಕ್ಕೆ ವಿಶೇಷ ತರಗತಿ ನಡೆಸಬೇಕು. ವಿದ್ಯಾರ್ಥಿಗಳು ಓದಿನಲ್ಲಿ ತೊಡಗುತ್ತಿರುವುದನ್ನು ಪರಿಶೀಲಿಸಲು ಪ್ರತಿ ದಿನ ಮುಂಜಾನೆ ಮತ್ತು ಸಂಜೆ ಶಿಕ್ಷಕರು 'ವೇಕ್ ಆಪ್ ಕಾಲ್' ಮಾಡಬೇಕು.
ಕಲಿಕೆಯಲ್ಲಿ ಸರಾಸರಿ, ಸರಾಸರಿಗಿಂತ ಕಡಿಮೆ ಮತ್ತು ಸರಾಸರಿಗಿಂತ ಉತ್ತಮವಾಗಿರುವ ವಿದ್ಯಾ ರ್ಥಿಗಳ ಗುಂಪುಗಳನ್ನು ಪ್ರತ್ಯೇಕವಾಗಿ ರಚಿಸಿ ಪ್ರತಿ ಶಿಕ್ಷಕರಿಗೆ ಸಮನಾಗಿ ವಿದ್ಯಾರ್ಥಿಗಳನ್ನು ದತ್ತು ನೀಡಬೇಕು. ಪ್ರತಿ 15 ದಿನಗಳಿಗೊಮ್ಮೆ ಪೋಷಕರ ಸಭೆ ಕರೆದು ಮಕ್ಕಳ ಕಲಿಕಾ ಪ್ರಗತಿ ಯನ್ನು ಒಪ್ಪಿಸಲು ಕ್ರಮ ವಹಿಸಬೇಕು ಎಂದು ಪ್ರೌಢ ಶಾಲಾ ಶಿಕ್ಷಕರು ಮತ್ತು ಪಿಯು ಕಾಲೇಜು ಉಪನ್ಯಾಸಕರಿಗೆ ಸೂಚಿಸಲಾಗಿದೆ. ಅಲ್ಲದೆ ಕಳೆದ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಜಾರಿಗೊಳಿಸಿದ್ದ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾದರಿಯನ್ನು ಅನುಸರಿಸಿ ಯಾವ್ಯಾವ ಶಾಲಾ, ಕಾಲೇಜುಗಳಲ್ಲಿ ಈ ವ್ಯವಸ್ಥೆ ಲಭ್ಯವಿದೆಯೋ ಅಲ್ಲೆಲ್ಲ ಘಟಕ ಪರೀಕ್ಷೆಗಳನ್ನು ವೆಬ್‌ಕಾಸ್ಟಿಂಗ್ ಮೂಲಕವೇ ನಡೆಸುವಂತೆ ನಿರ್ದೇಶನ ನೀಡಲಾಗಿದೆ.
ವಿದ್ಯಾರ್ಥಿಗಳ ಸಂಯೋಜನೆ:
ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳನ್ನು ಉತ್ತಮ ವಾಗಿ ಓದುವ ಅಥವಾ ಕಲಿಕಾ ಪ್ರಗತಿ ಸಾಧಿಸಿರುವ ವಿದ್ಯಾರ್ಥಿಗಳೊಂದಿಗೆ ಸಂಯೋಜಿಸಬೇಕು. ವಿದ್ಯಾರ್ಥಿಗಳಿಗೆ ದಿನ 2 ಪುಟಗಳನ್ನು ಬರೆಸುವುದು ಮತ್ತು ಗಟ್ಟಿಯಾಗಿ ಓದಿಸುವ ಅಭ್ಯಾಸ ಮಾಡಿಸ ಬೇಕು. ನಿರಂತರವಾಗಿ ಶಾಲೆಗೆ ಗೈರು ಹಾಜರಾ ಗುವ ವಿದ್ಯಾರ್ಥಿಗಳ ಕೇಸ್ ಸ್ಟಡಿ ನಡೆಸಿ ಪರಿಹಾರ ಕ್ರಮ ಕೈಗೊಳ್ಳಬೇಕು. ಪ್ರತಿ ಘಟಕವಾರು ಕಲಿಕಾ ಬಲವರ್ಧನೆಗಾಗಿ ಅಭ್ಯಾಸಪುಸ್ತಕಗಳನ್ನು ಅಭಿವೃ ದ್ಧಿಪಡಿಸಬೇಕು ಎಂದು ಇಲಾಖೆ ಸೂಚಿಸಿದೆ. ಈ ಎಲ್ಲ ಕಾರ್ಯಕ್ರಮಗಳನ್ನು ರಾಜ್ಯಾಧ್ಯಂತ ಸಮರ್ಪಕ ಅನುಷ್ಠಾನಗೊಳಿಸುವಂತೆ ಸೂಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಎಲ್ಲಾ ಜಿಲ್ಲಾ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ.
ಸಮರ್ಪಕ ಅನುಷ್ಠಾನ ಕಷ್ಟ!
ಬೆಂಗಳೂರು ಸೇರಿ ರಾಜ್ಯದ ಕೆಲ ಪ್ರೌಢ ಶಾಲೆಗಳ ಶಿಕ್ಷಕರು ಹಾಗೂ ಪಿಯು ಕಾಲೇಜುಗಳ ಉಪನ್ಯಾಸಕರನ್ನು ಮಾತನಾಡಿಸಿದಾಗ, ಫಲಿತಾಂಶ ಉತ್ತಮಗೊಳಿಸಲು ನಾವು ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ. ಇದರ ಜೊತೆಗೆ ಸರ್ಕಾರ 20 ಅಂಶಗಳ ಕಾರ್ಯಕ್ರಮ ನೀಡಿದೆ. ಅವುಗಳಲ್ಲಿ ಸಾಧ್ಯವಾದಷ್ಟು ಅಂಶಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೇವೆ. ಆದರೆ, ನಿತ್ಯ ಶಾಲಾರಂಭಕ್ಕೆ ಮೊದಲು ಹಾಗೂ ಮುಕ್ತಾಯದ ಬಳಿಕ ಒಂದು ವಿಶೇಷ ತರಗತಿ ನಡೆಸುವುದು, ಮಕ್ಕಳಿಗೆ ವೇಕ್ ಅಪ್ ಕಾಲ್ ಮಾಡುವಂಥ ಅಂಶಗಳ ಸಮರ್ಪಕ ಅನುಷ್ಠಾನ ಕಷ್ಟ ಎನ್ನುತ್ತಾರೆ.
ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಶ್ರಮಿಸಿ: ಸಚಿವ ಮಧು ಬಂಗಾರಪ್ಪ ಸೂಚನೆ
ಇಲಾಖೆಯ 20 ಅಂಶಗಳ ಕಾರ್ಯಕ್ರಮಗಳಿಗೆ ನಮ್ಮ ಆಕ್ಷೇಪ ಇಲ್ಲ. ಆದರೆ ಕೆಲ ಅಂಶಗಳು ಅವೈಜ್ಞಾನಿಕ ಹಾಗೂ ಶಿಕ್ಷಕರಿಗೆ ತೀವ್ರ ಹೊರೆಯಾಗುವಂಥವು. ಈ ಕಾರ್ಯಕ್ರಮ ಅನುಷ್ಠಾನಕ್ಕೂ ಮುನ್ನ ಸಂಬಂಧಪಟ್ಟವರೊಂದಿಗೆ ಸರ್ಕಾರ ಚರ್ಚಿಸಬೇಕಿತ್ತು ಎಂದು ರಾಜ್ಯ ಪಿಯು ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ಕೆ.ಎನ್.ನಿಂಗೇಗೌಡ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲೇನಿದೆ?
• ಡಿಸೆಂಬರ್ ಒಳಗೆ ಪಠ್ಯ ಬೋಧಿಸಿ, ವಿದ್ಯಾರ್ಥಿಗಳಿಗೆ ಮುಂಜಾನೆ ವೇಕ್ ಅಪ್ ಕಾಲ್ ಕೊಡೋಕು
• ಕಲಿಕಾ ಮಟ್ಟದ ಆಧಾರದಲ್ಲಿ ವಿದ್ಯಾರ್ಥಿಗಳ ಗುಂಪು ರಚಿಸಿ ಶಿಕ್ಷಕರು ದತ್ತು ಪಡೆಯಬೇಕು
• ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಉತ್ತಮವಾಗಿ ಓದುವ ಮಕ್ಕಳೊಂದಿಗೆ ಸಂಯೋಜಿಸಬೇಕು
• 15 ದಿನಕ್ಕೊಮ್ಮೆ ಪೋಷಕರ ಸಭೆ ನಡೆಸಿ ಮಕ್ಕಳ ಕಲಿಕಾ ಪ್ರಗತಿ ಒಪ್ಪಿಸಲು ಕ್ರಮಕೈಗೊಳ್ಳಬೇಕು