ದೇಶದ 8 ರಾಜ್ಯಗಳಲ್ಲಿ 12ನೇ ತರಗತಿ ಪರೀಕ್ಷೆ ರದ್ದು

By Kannadaprabha News  |  First Published Jun 4, 2021, 7:30 AM IST
  • ಕೋವಿಡ್‌ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಿಬಿಎಸ್‌ಇ, ಐಸಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದು
  • 8 ರಾಜ್ಯಗಳಲ್ಲಿ 12ನೇ ತರಗತಿ ಪರೀಕ್ಷೆ ರದ್ದುಪಡಿಸಿ ಆದೇಶ
  • ಕರ್ನಾಟಕದ ನಿರ್ಧಾರ ಇಂದು ಪ್ರಕಟ

ಲಖನೌ (ಜೂ.04): ಕೋವಿಡ್‌ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಿಬಿಎಸ್‌ಇ, ಐಸಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದು ಮಾಡಿದ ಬೆನ್ನಲ್ಲೇ, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಸರ್ಕಾರಗಳೂ ಗುರುವಾರ 12ನೇ ತರಗತಿ ಪರೀಕ್ಷೆ ರದ್ದು ಮಾಡಿ ಆದೇಶ ಹೊರಡಿಸಿದೆ. 

ಅಸ್ಸಾಂನಲ್ಲಿಯೂ ಸಹ ಈ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಶರ್ಮಾ ತಿಳಿಸಿದ್ದಾರೆ. 

Tap to resize

Latest Videos

ಸಿಬಿಎಸ್‌ಇ, ಐಸಿಎಸ್‌ಇ ಪರೀಕ್ಷೆ ರದ್ದತಿಗೆ ಸುಪ್ರೀಂ ಸಂತಸ ...

ಇದರೊಂದಿಗೆ ಒಟ್ಟು 8 ರಾಜ್ಯಗಳು 12ನೇ ತರಗತಿ ಪರೀಕ್ಷೆ ರದ್ದುಪಡಿಸಿದಂತೆ ಆಗಿದೆ. ಗುಜರಾತ್‌, ಮಧ್ಯಪ್ರದೇಶ, ಉತ್ತರಾಖಂಡ, ಹರ್ಯಾಣ, ಗೋವಾ, ರಾಜಸ್ಥಾನ ರದ್ದುಪಡಿಸಿದ ಇತರೆ ರಾಜ್ಯಗಳು.

ಕರ್ನಾಟಕದಲ್ಲಿ ಇಂದು ಅಧಿಕೃತ ನಿರ್ಧಾರ ಹೊರಬೀಳಲಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

click me!