ದ್ವಿತೀಯ ಪಿಯು ಪರೀಕ್ಷೆಯ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಶುಕ್ರವಾರ ಬೆಳಗ್ಗೆ 10 ಗಂಟೆಗೆ ಮಲ್ಲೇಶ್ವರದಲ್ಲಿರುವ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಲಾಗುವುದು.
ಬೆಂಗಳೂರು(ಏ.21): ಮಾರ್ಚ್‌ನಲ್ಲಿ ನಡೆಸಿದ್ದ 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶವನ್ನು ಇಂದು(ಶುಕ್ರವಾರ) ಬೆಳಗ್ಗೆ 10 ಗಂಟೆಗೆ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ. ತನ್ಮೂಲಕ ನಿರೀಕ್ಷೆಗಿಂತ ಎರಡು ವಾರದ ಮೊದಲೇ ಫಲಿತಾಂಶ ಪ್ರಕಟಿಸುತ್ತಿದೆ.
ದ್ವಿತೀಯ ಪಿಯು ಪರೀಕ್ಷೆಯ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಶುಕ್ರವಾರ ಬೆಳಗ್ಗೆ 10 ಗಂಟೆಗೆ ಮಲ್ಲೇಶ್ವರದಲ್ಲಿರುವ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಲಾಗುವುದು. 11 ಗಂಟೆಯ ವೇಳೆಗೆ ವಿದ್ಯಾರ್ಥಿಗಳು https://karresults.nic.in/ ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು ಎಂದು ಕೆಎಸ್‌ಇಎಬಿ ಅಧ್ಯಕ್ಷ ಡಾ.ರಾಮಚಂದ್ರನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
10,12ನೇ ತರಗತಿ ಶಿಕ್ಷಣದಲ್ಲಿ ಭಾರೀ ಬದಲಾವಣೆ: ಆರ್ಟ್ಸ್, ಕಾಮರ್ಸ್, ಸೈನ್ಸ್ ಬದಲು ಮಿಶ್ರ ವಿಷಯಗಳು
ಮಾ.9ರಿಂದ 29ರವರೆಗೆ ಪರೀಕ್ಷೆ ನಡೆಸಲಾಗಿತ್ತು. ಏ.4ರಿಂದ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿತ್ತು. ಕೇವಲ 15 ದಿನಗಳಲ್ಲಿ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದೆ. ಮಂಡಳಿಯು ಮೇ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಿತ್ತು. ಆದರೆ, ಅಂದುಕೊಂಡಿದ್ದ ಅವಧಿಗೂ ಮೊದಲೇ ಮೌಲ್ಯಮಾಪನ ಕಾರ್ಯ ಪೂರ್ಣವಾಗಿರುವುದರಿಂದ ಫಲಿತಾಂಶ ಪ್ರಕಟವಾಗುತ್ತಿದೆ.