ವಿಶ್ವವಿದ್ಯಾಲಯಗಳಿಗೆ ₹3600 ಕೋಟಿ ಅನುದಾನ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

By Kannadaprabha NewsFirst Published Feb 21, 2024, 12:00 AM IST
Highlights

ಪ್ರಧಾನಮಂತ್ರಿ ಉಷಾ ಯೋಜನೆಯಡಿ 78 ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅನುದಾನ ನೀಡಿದ್ದು, ಇಂದೇ ಅದರ ಬಿಡುಗಡೆಯಾಗಲಿದೆ. ಉಷಾ ಯೋಜನೆಯಡಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ₹ 100 ಕೋಟಿ, ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ ₹20 ಕೋಟಿ ಹಾಗೂ ಧಾರವಾಡ ವಿಶ್ವವಿದ್ಯಾಲಯಕ್ಕೆ ₹20 ಕೋಟಿ ದೊರೆಯಲಿದೆ: ಸಚಿವ ಪ್ರಹ್ಲಾದ ಜೋಶಿ

ಬೆಳಗಾವಿ(ಫೆ.21):  ಕರ್ನಾಟಕ, ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ಅನೇಕ ವಿಶ್ವವಿದ್ಯಾಲಯಗಳಿಗೆ ಕೇಂದ್ರ ಸರ್ಕಾರ ₹3600 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ಉಷಾ ಯೋಜನೆಯಡಿ 78 ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅನುದಾನ ನೀಡಿದ್ದು, ಇಂದೇ ಅದರ ಬಿಡುಗಡೆಯಾಗಲಿದೆ. ಉಷಾ ಯೋಜನೆಯಡಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ₹ 100 ಕೋಟಿ, ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ ₹20 ಕೋಟಿ ಹಾಗೂ ಧಾರವಾಡ ವಿಶ್ವವಿದ್ಯಾಲಯಕ್ಕೆ ₹20 ಕೋಟಿ ದೊರೆಯಲಿದೆ ಎಂದು ತಿಳಿಸಿದರು.

ಜಮ್ಮು- ಕಾಶ್ಮೀರ ಸೇರಿದಂತೆ ದೇಶದ ಹಲವಾರು ವಿಶ್ವವಿದ್ಯಾಲಯಗಳ ಅಭಿವೃದ್ಧಿಗಾಗಿ ಪ್ರಧಾನಮಂತ್ರಿ ಈ ಅನುದಾನ ಬಿಡುಗಡೆ ಮಾಡಿದ್ದಾರೆ. ಸಾಕ್ಷರತೆಯಿಂದ ಮಾತ್ರ ದೇಶದ ನೈಜ ವಿಕಾಸ ಸಾಧ್ಯವೆಂದು ನಂಬಿರುವ ಪ್ರಧಾನಿ ಮೋದಿ ಅವರು ದೇಶದ ವಿಶ್ವವಿದ್ಯಾಲಯಗಳಿಗೆ ಹೊಸ ಜೀವ ತುಂಬಲು ಇಂಥ ಮಹತ್ತರವಾದ ಯೋಜನೆಗೆ ಚಾಲನೆ ನೀಡಿದ್ದಾರೆ. ಭಾರತದ ಯುವ ಜನತೆಗೆ ಶಿಕ್ಷಣ ಮತ್ತು ಮೂಲಸೌಕರ್ಯವನ್ನು ಅಭಿವೃದ್ಧಿಗೊಳಿಸಿ ಭಾರತವನ್ನು ವಿಶ್ವಗುರು ಮಾಡುವ ಧ್ಯೇಯ ಪ್ರಧಾನಿಯವರದ್ದಾಗಿದೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಶಿಕ್ಷಣದಿಂದಲೇ ವಿದ್ಯಾರ್ಥಿಗಳ ಅಮೂಲ್ಯ ಜೀವನ ರೂಪಿಸಲು ಪ್ರಧಾನಿ ಹೊಸ ಹೊಸ ಯೋಜನೆಗಳನ್ನು ಹಾಕಿಕೊಂಡಿದ್ದಾರೆ ಎಂದರು.

ಶೀಘ್ರ 5800 ಹೊಸ ಬಸ್‌ ಖರೀದಿ, 9 ಸಾವಿರ ಹುದ್ದೆ ಭರ್ತಿ: ಸಚಿವ ರಾಮಲಿಂಗಾ ರೆಡ್ಡಿ

ಜಮ್ಮು ಅಭಿವೃದ್ಧಿಗೆ ಐತಿಹಾಸಿಕ ಕ್ರಮ ಜಮ್ಮು ಕಾಶ್ಮೀರ ಎಂದರೆ ಹಿಂಸಾಚಾರ, ಭಯೋತ್ಪಾದನೆಯೇ ಎಲ್ಲರ ಮನದಲ್ಲಿ ಹಾದು ಹೋಗುತ್ತಿತ್ತು. ಈಗದು ಸಂಪೂರ್ಣ ಬದಲಾಗಿದೆ. ಅಭಿವೃದ್ಧಿ ಪರ್ವ ಆರಂಭವಾಗಿದೆ. ವಿಶ್ವವಿದ್ಯಾಲಯಗಳ ಅನುದಾನ ಬಿಡುಗಡೆ ಸೇರಿದಂತೆ ಜಮ್ಮುವಿನ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಪ್ರಧಾನಿ ಮೋದಿ ಅವರು ಇಂದು ಅಲ್ಲಿಂದಲೇ ಚಾಲನೆ ನೀಡಲಿದ್ದಾರೆ. ನಾನು ಮತ್ತು ಸಂಸದೆ ಮಂಗಳಾ ಅಂಗಡಿ ಅವರು ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ನಡೆದ ನೇರಪ್ರಸಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇವೆ ಎಂದು ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.

click me!