ಎಲ್‌ಕೆಜಿ ಪ್ರವೇಶಕ್ಕೆ 4 ವರ್ಷ ವಯಸ್ಸು ಕಡ್ಡಾಯ..!

Published : May 05, 2023, 01:30 AM IST
ಎಲ್‌ಕೆಜಿ ಪ್ರವೇಶಕ್ಕೆ 4 ವರ್ಷ ವಯಸ್ಸು ಕಡ್ಡಾಯ..!

ಸಾರಾಂಶ

ಈ ಸಾಲಿನಿಂದ ಎಲ್‌ಕೆಜಿಗೆ ದಾಖಲಾಗುವ ಮಕ್ಕಳು 2025-26ಕ್ಕೆ 1ನೇ ತರಗತಿಗೆ ದಾಖಲಾಗಲಿದ್ದಾರೆ. ಹಾಗಾಗಿ ಆ ವೇಳೆಗೆ ಮಕ್ಕಳ ದಾಖಲಾತಿಗೆ ವಯಸ್ಸಿನ ಸಮಸ್ಯೆ ಆಗಬಾರದು ಎಂಬ ಉದ್ದೇಶದಿಂದ ಇದೀಗ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರವೇಶಕ್ಕೂ ಇಲಾಖೆ ವಯೋಮಿತಿ ನಿಗದಿಪಡಿಸಿದೆ.

ಬೆಂಗಳೂರು(ಮೇ.05):  ರಾಜ್ಯದ ಶಾಲೆಗಳಲ್ಲಿ ಒಂದನೇ ತರಗತಿಗೆ ಮಕ್ಕಳನ್ನು ದಾಖಲಿಸಲು ಕಡ್ಡಾಯವಾಗಿ 6 ವರ್ಷ ವಯಸ್ಸು ತುಂಬಿರಬೇಕೆಂಬ ನಿಯಮ 2025-6ನೇ ಸಾಲಿನಿಂದ ಜಾರಿಯಾಗಲಿರುವ ಹಿನ್ನೆಲೆಯಲ್ಲಿ ಪ್ರಸಕ್ತ 2023-24ನೇ ಸಾಲಿನಿಂದ ಎಲ್‌ಕೆಜಿಗೆ ಮಕ್ಕಳನ್ನು ದಾಖಲಿಸಲು ಬರುವ ಜೂನ್‌ 1ಕ್ಕೆ ಕಡ್ಡಾಯವಾಗಿ 4 ವರ್ಷ ತುಂಬಿರಬೇಕೆಂದು ಶಿಕ್ಷಣ ಇಲಾಖೆ ಆದೇಶಿಸಿದೆ.

ಈ ಸಾಲಿನಿಂದ ಎಲ್‌ಕೆಜಿಗೆ ದಾಖಲಾಗುವ ಮಕ್ಕಳು 2025-26ಕ್ಕೆ 1ನೇ ತರಗತಿಗೆ ದಾಖಲಾಗಲಿದ್ದಾರೆ. ಹಾಗಾಗಿ ಆ ವೇಳೆಗೆ ಮಕ್ಕಳ ದಾಖಲಾತಿಗೆ ವಯಸ್ಸಿನ ಸಮಸ್ಯೆ ಆಗಬಾರದು ಎಂಬ ಉದ್ದೇಶದಿಂದ ಇದೀಗ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರವೇಶಕ್ಕೂ ಇಲಾಖೆ ವಯೋಮಿತಿ ನಿಗದಿಪಡಿಸಿದೆ.

ಉಡುಪಿ: ಮಣಿಪಾಲ್ ಸ್ಕೂಬಾ ಸ್ಕೂಲ್ ಮತ್ತು ಮರೇನಾ ಬೌಲ್ಡರ್ ಉದ್ಘಾಟನೆ

‘ಶಿಕ್ಷಣ ಹಕ್ಕು ಕಾಯ್ದೆ-2009’ ಮತ್ತು ‘ಕಡ್ಡಾಯ ಶಿಕ್ಷಣ ನಿಯಮ’ದಂತೆ ಈಗಾಗಲೇ ಆದೇಶಿಸಿರುವಂತೆ 2025-26ನೇ ಸಾಲಿನಿಂದ 1ನೇ ತರಗತಿ ದಾಖಲಾತಿಗೆ ಮಗುವಿಗೆ 6 ವರ್ಷ ತುಂಬಿರಬೇಕೆಂಬ ನಿಯಮದಲ್ಲಿ ಯಾವುದೇ ಕಾರಣಕ್ಕೂ ಬದಲಾವಣೆ ಇರುವುದಿಲ್ಲ. ಹಾಗಾಗಿ ಈ ಸಾಲಿನಿಂದ ಎಲ್‌ಕೆಜಿಗೆ ಮಕ್ಕಳನ್ನು ದಾಖಲಿಸುವ ಪೋಷಕರು 4 ವರ್ಷ ವಯಸ್ಸು ಪೂರ್ಣಗೊಂಡಿರುವ ಮಕ್ಕಳನ್ನು ಮಾತ್ರ ಎಲ್‌ಕೆಜಿಗೆ ದಾಖಲಿಸಬೇಕು. ಆಗ ಮಾತ್ರ ಅವರು 1ನೇ ತರಗತಿಗೆ ಪ್ರವೇಶ ಪಡೆಯುವಾಗ ಅವರಿಗೆ 6 ವರ್ಷ ಪೂರ್ಣಗೊಳ್ಳಲಿದೆ. ಇಲ್ಲದಿದ್ದರೆ ಎಲ್‌ಕೆಜಿ, ಯುಕೆಜಿ ಮುಗಿಸಿದ್ದರೂ ವಯಸ್ಸು 6 ವರ್ಷ ಪೂರ್ಣಗೊಳ್ಳದ ಕಾರಣಕ್ಕೆ ಒಂದನೇ ತರಗತಿಗೆ ಪ್ರವೇಶ ದೊರೆಯದೆ ಸಮಸ್ಯೆ ಎದುರಿಸಬೇಕಾಗುತ್ತದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪಾಲಕರ ವಿರೋಧ:

ಶಿಕ್ಷಣ ಇಲಾಖೆ ಎಲ್‌ಕೆಜಿಗೆ 4 ವರ್ಷದ ವಯೋಮಿತಿ ನಿಗದಿಪಡಿಸಿರುವುದಕ್ಕೆ ಪೋಷಕರ ವಲಯ ಅಸಮಾಧಾನ ವ್ಯಕ್ತವಾಗಿದೆ. ಇಲಾಖೆಯ ಈ ನಿರ್ಧಾರ ಅವೈಜ್ಞಾನಿಕ. ಜೂನ್‌ 1ಕ್ಕೆ ನಿಗದಿತ ವಯಸ್ಸು ತುಂಬಲು ಒಂದು ದಿನ ಕಡಿಮೆ ಇದ್ದರೂ ಅಂತಹ ಮಕ್ಕಳಿಗೆ ಪ್ರವೇಶ ಸಿಗುವುದಿಲ್ಲ. ಇದರಿಂದ ಮಕ್ಕಳು ಇನ್ನೂ ಒಂದು ವರ್ಷ ಶಿಕ್ಷಣದಿಂದ ವಂಚಿತರಾಗಬೇಕಾಗುತ್ತದೆ. ಇದರ ಬದಲು ಈ ಹಿಂದೆ ಇದ್ದಂತೆ ಎಲ್‌ಕೆಜಿ ದಾಖಲಾತಿಗೆ 3 ವರ್ಷ 10 ತಿಂಗಳಿಂದ 4 ವರ್ಷ 10 ತಿಂಗಳು, 1ನೇ ತರಗತಿಗೆ 5 ವರ್ಷ 10 ತಿಂಗಳಿಂದ 6 ವರ್ಷ 10 ತಿಂಗಳವರೆಗೆ ವಯೋಮಾನ ಸಡಿಲಿಕೆಯ ಅವಕಾಶ ನೀಡಿದರೆ ಒಳ್ಳೆಯದು ಎಂದಿದ್ದಾರೆ.

PREV
Read more Articles on
click me!

Recommended Stories

ಬರೋಬ್ಬರಿ 22 ಖಾಸಗಿ ಕಾಲೇಜುಗಳನ್ನು ಮುಚ್ಚಲು ನಿರ್ಧರಿಸಿದ ಮಂಗಳೂರು ವಿಶ್ವವಿದ್ಯಾಲಯ! ಕಾರಣವೇನು?
ರಾಜ್ಯದಲ್ಲಿ 6675 ಏಕೋಪಾಧ್ಯಾಯ ಶಾಲೆ!