ಪಿಎಂಶ್ರೀ: 9 ಶಾಲೆಗಳ ಅಭಿವೃದ್ಧಿಗೆ ತಲಾ 53 ಲಕ್ಷ ಅನುದಾನ, ಸಂಸದ ಬಿ.ವೈ. ರಾಘವೇಂದ್ರ

By Kannadaprabha News  |  First Published Aug 27, 2023, 10:45 PM IST

ರಾಷ್ಟ್ರೀಯ ಶಿಕ್ಷಣ ನೀತಿ 2020ನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅನುಕೂಲವಾಗಲೆಂಬ ಉದ್ದೇಶದಿಂದ 2022-23ನೇ ಸಾಲಿನಿಂದ 2026-27ನೇ ಸಾಲಿನವರೆಗೆ ದೇಶದಾದ್ಯಂತ ಸುಮಾರು 14,700 ಶಾಲೆಗಳನ್ನು ಮೂಲಭೂತವಾಗಿ ಅಭಿವೃದ್ಧಿಪಡಿಸುವ ಸಂಕಲ್ಪದೊಂದಿಗೆ ಕೇಂದ್ರ ಸರ್ಕಾರ .27,360 ಕೋಟಿ ಅನುದಾನವನ್ನು ಕೇಂದ್ರ ಸರ್ಕಾರ ಮೀಸಲಿಟ್ಟಿದೆ: ಸಂಸದ ಬಿ.ವೈ. ರಾಘವೇಂದ್ರ 


ಶಿವಮೊಗ್ಗ(ಆ.27): ದೇಶವು ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜಾರಿಗೆ ತಂದ ‘ಪ್ರಧಾನ ಮಂತ್ರಿ ಸ್ಕೂಲ್‌ ಫಾರ್‌ ರೈಸಿಂಗ್‌ ಇಂಡಿಯಾ’ ಎನ್ನುವ ಯೋಜನೆಯಡಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ 9 ಸರ್ಕಾರಿ ಶಾಲೆಗಳನ್ನು ಪಿಎಂಶ್ರೀ ಯೋಜನೆಯಡಿ ಅಭಿವೃದ್ಧಿಪಡಿಸಲು 4.77 ಕೋಟಿ ರು. ಅನುದಾನ ಒದಗಿಸಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದು, ಇದಕ್ಕಾಗಿ ಕೇಂದ್ರ ಸರ್ಕಾರವನ್ನು ಅಭಿನಂದಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಷ್ಟ್ರೀಯ ಶಿಕ್ಷಣ ನೀತಿ 2020ನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅನುಕೂಲವಾಗಲೆಂಬ ಉದ್ದೇಶದಿಂದ 2022-23ನೇ ಸಾಲಿನಿಂದ 2026-27ನೇ ಸಾಲಿನವರೆಗೆ ದೇಶದಾದ್ಯಂತ ಸುಮಾರು 14,700 ಶಾಲೆಗಳನ್ನು ಮೂಲಭೂತವಾಗಿ ಅಭಿವೃದ್ಧಿಪಡಿಸುವ ಸಂಕಲ್ಪದೊಂದಿಗೆ ಕೇಂದ್ರ ಸರ್ಕಾರ .27,360 ಕೋಟಿ ಅನುದಾನವನ್ನು ಕೇಂದ್ರ ಸರ್ಕಾರ ಮೀಸಲಿಟ್ಟಿದೆ. ಈ ಯೋಜನೆಯಡಿ ಕರ್ನಾಟಕ ರಾಜ್ಯದ 129 ಶಾಲೆಗಳನ್ನು ಮೊದಲ ಹಂತದಲ್ಲಿ ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ ಎಂದು ಮಾಹಿತಿ ನೀಡಿದ್ದಾರೆ.

Latest Videos

undefined

ಚಿತ್ರದುರ್ಗ ಮೆಡಿಕಲ್ ಕಾಲೇಜು ಆರಂಭಕ್ಕೆ ಕಾಂಗ್ರೆಸ್ ಸರ್ಕಾರವೇ ಬರಬೇಕಾಯಿತು!

ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಿವಮೊಗ್ಗ ಜಿಲ್ಲೆಯ 8 ಹಾಗೂ ಉಡುಪಿ ಜಿಲ್ಲೆಗೆ ಮಂಜೂರಾಗಿರುವ 4 ಶಾಲೆಗಳ ಪೈಕಿ ನಮ್ಮ ಬೈಂದೂರು ವಿಧಾನಸಭಾ ಕ್ಷೇತ್ರದ 1 ಶಾಲೆ ಆಯ್ಕೆಯಾಗಿದ್ದು, ಒಟ್ಟಾರೆಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 9 ಶಾಲೆಗಳು ಆಯ್ಕೆಗೊಳಿಸಿದ್ದು, ಈ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ತಲಾ ರು. 53 ಲಕ್ಷದಂತೆ ಒಟ್ಟು .4.77 ಕೋಟಿ ಅನುದಾನವನ್ನು ಒದಗಿಸಿದೆ. ಅನುದಾನ ಪಡೆದ ಶಾಲೆಗಳ ಪಟ್ಟಿಈ ರೀತಿಯಿದೆ. ಭದ್ರಾವತಿ ತಾಲೂಕಿನ ಮೈದೊಳಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೊಸನಗರ ತಾಲೂಕಿನ ಮೇಲಿನಬೆಸಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸಾಗರ ತಾಲೂಕಿನ ಹೊನ್ನೇಸರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಶಿಕಾರಿಪುರ ತಾಲೂಕಿನ ಮಂಚಿಕೊಪ್ಪ ವಡ್ಡಿಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಶಿವಮೊಗ್ಗ ತಾಲೂಕಿನ ಹೊಸಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಶಿವಮೊಗ್ಗ ನಗರದ ಕೆ.ಆರ್‌. ಪುರಂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೊರಬ ತಾಲೂಕಿನ ಯಣ್ಣೆಕೊಪ್ಪದ ಸರ್ದಾರ್‌ ಶ್ರೀ ಮಲ್ಲಿಕಾರ್ಜುನಗೌಡರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಹಳೆಸೊರಬದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಉಡುಪಿ ತಾಲೂಕಿನ ಬೈಂದೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅನುದಾನ ನೀಡಲಾಗಿದೆ. ಎರಡನೇ ಹಂತದಲ್ಲಿ ಇನ್ನಷ್ಟು ಶಾಲೆಗಳು ಈ ಪಟ್ಟಿಗೆ ಸೇರ್ಪಡೆಗೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.

ಆಯ್ಕೆಯಾಗಿರುವ ಪ್ರತಿಯೊಂದು ಶಾಲೆಗಳಲ್ಲಿ ಮೂಲಭೂತ ಸೌಕರ್ಯ, ಬಾಲಕರ ಮತ್ತು ಬಾಲಕಿಯರ ಶೌಚಾಲಯ, ಭೋದನಾ ಸಿಬ್ಬಂದಿ ಮತ್ತು ಸಾಮರ್ಥ್ಯ ಅಭಿವೃದ್ದಿ, ಪ್ರಧಾನಮಂತ್ರಿ ಪೋಷಣ್‌ ಅಭಿಯಾನ, ಕಲಿಕಾ ಫಲಕಗಳು, ಹಸಿರು ಉಪಕ್ರಮಗಳು ಹಾಗೂ ಇತರೆ ಶಾಲಾ ಚಟುವಟಿಕೆಗಳಿಗೆ ಈ ಅನುದಾನ ಬಳಸಲಾಗುವುದು ಎಂದು ತಿಳಿಸಿದ್ದಾರೆ.

click me!