ಬೆಂಗಳೂರು: ಬಿಬಿಎಂಪಿ ಶಾಲೆಗಳಲ್ಲಿ ಶೇ. 68.78ರಷ್ಟು ಫಲಿತಾಂಶ

By Kannadaprabha NewsFirst Published May 10, 2024, 5:30 AM IST
Highlights

ಬಿಬಿಎಂಪಿ ನಿರ್ವಹಣೆಯ 33 ಪ್ರೌಢಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ 2,502 ವಿದ್ಯಾರ್ಥಿಗಳ ಪೈಕಿ 1,721 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಒಟ್ಟಾರೆ ಶೇಕಡ 68.78ರಷ್ಟು ಫಲಿತಾಂಶ ಪಡೆದುಕೊಂಡಿವೆ.

ಬೆಂಗಳೂರು(ಮೇ.10):  ಬಿಬಿಎಂಪಿ ನಿರ್ವಹಣೆಯ 33 ಪ್ರೌಢಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ 2,502 ವಿದ್ಯಾರ್ಥಿಗಳ ಪೈಕಿ 1,721 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಒಟ್ಟಾರೆ ಶೇಕಡ 68.78ರಷ್ಟು ಫಲಿತಾಂಶ ಪಡೆದುಕೊಂಡಿವೆ. ಕಳೆದ 2022-23ನೇ ಸಾಲಿನಲ್ಲಿ ಬಿಬಿಎಂಪಿ ಪ್ರೌಢಶಾಲೆಗಳು ಶೇ. 67.53ರಷ್ಟು ಫಲಿತಾಂಶ ಪಡೆದುಕೊಂಡಿದ್ದವು. ಈ ವರ್ಷ ಶೇ. 1.25ರಷ್ಟು ಹೆಚ್ಚಿನ ಫಲಿತಾಂಶ ಬಂದಿದೆ.

ಮತ್ತಿಕೆರೆಯ ಬಾಲಕಿಯರ ಪ್ರೌಢಶಾಲೆಯು ಶೇ. 92.78ರಷ್ಟು ಫಲಿತಾಂಶ ಪಡೆದು ಅಗ್ರಸ್ಥಾನ ಪಡೆದುಕೊಂಡಿದೆ. ಉಳಿದಂತೆ ಭೈರವೇಶ್ವರನಗರ ಪ್ರೌಢಶಾಲೆಯು ಶೇ.91.98, ಹೇರೋಹಳ್ಳಿ ಪ್ರೌಢಶಾಲೆಯು ಶೇ.90.56ರಷ್ಟು ಫಲಿತಾಂಶ ಪಡೆದು ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನ ಪಡೆದಿವೆ. 2023-24ನೇ ಸಾಲಿನಲ್ಲಿ ಒಟ್ಟು 66 ವಿದ್ಯಾರ್ಥಿಗಳು ಶೇ.85ಕ್ಕಿಂತ ಹೆಚ್ಚಿನ ಅಂಕ ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

625ಕ್ಕೆ ಒಂದು ಅಂಕ ಕಡಿಮೆ, ಸಂಸ್ಕೃತ ವಿಷಯ ಮರುಮೌಲ್ಯಮಾಪನ ಮೊರೆ; ಮೇಧಾ ಶೆಟ್ಟಿ!

ಶ್ರೀರಾಂಪುರ ಬಾಲಕಿಯರ ಪ್ರೌಢಶಾಲೆಯ ಪಿ. ಚಂದನ 625ಕ್ಕೆ 619 ಅಂಕಗಳಿಸಿ, ಬಿಬಿಎಂಪಿ ಪ್ರೌಢಶಾಲೆಯಲ್ಲಿಯೇ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಯಾಗಿದ್ದಾರೆ. ಲಗ್ಗೆರೆ ಪ್ರೌಢಶಾಲೆಯ ಟಿ.ಜೆ.ಯಶವಂತ್‌ 610 ಅಂಕ ಪಡೆದಿದ್ದಾರೆ ಎಂದು ಬಿಬಿಎಂಪಿ ಶಿಕ್ಷಣ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.

click me!