ಕೊರೋನಾ ಹೆಚ್ಚಳ;  6 ರಿಂದ 9ನೇ ತರಗತಿ ಬಂದ್

By Suvarna NewsFirst Published Apr 1, 2021, 10:42 PM IST
Highlights

ಕೊರೋನಾ ಪ್ರಕರಣಗಳಲ್ಲಿ ಏರಿಕೆ/ ರಾಜ್ಯ ಸರ್ಕಾರದಿಂದ ಮತ್ತೊಂದು ಕ್ರಮ/  6-9ನೇ‌ ಭೌತಿಕ ತರಗತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಲ್ಲಿಸಲಾಗಿದೆ/ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ

ಬೆಂಗಳೂರು ( ಏ. 01)  ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಿದ್ದು  ಸರ್ಕಾರ  ಮತ್ತೊಂದು ಹೆಜ್ಜೆ ಇಟ್ಟಿದೆ.  ಬೆಂಗಳೂರು ನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಪರಿಗಣಿಸಿ ಪ್ರಸ್ತುತ ನಡೆಯುತ್ತಿರುವ 6-9ನೇ‌ ಭೌತಿಕ ತರಗತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ‌ ಆದೇಶದವರೆಗೆ ನಿಲ್ಲಿಸಲಾಗುತ್ತಿದೆ.

ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್‌ಕುಮಾರ್  ಮಾಹಿತಿ ನೀಡಿದ್ದಾರೆ. . ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು, ಈ ವಯೋಮಾನದ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ‌ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 10 ನೇ ತರಗತಿಗಳು ಎಂದಿನಂತೆ ಮುಂದುರಿಯುತ್ತಿದ್ದು ಹಾಜರಾತಿ ಕಡ್ಡಾಯವಲ್ಲ ಎಂದಿದ್ದಾರೆ.

ಪರೀಕ್ಷೆಗಳ ಬಗ್ಗೆ ಸ್ಪಷ್ಟನೆ ಕೊಟ್ಟ ಸುರೇಶ್ ಕುಮಾರ್

ರಾಜ್ಯದ ಉಳಿದೆಡೆ ಪ್ರಸ್ತುತ ಇರುವ ವ್ಯವಸ್ಥೆ ಮುಂದುವರೆಯಲಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಕಳೆದ ಕೆಲ ದಿನಗಳಿಂದ ಕೊರೋನಾ ಏರಿಕೆ ಹಾದಿಯಲ್ಲೇ ಸಾಗಿದೆ. ರಾಜ್ಯ ಸರ್ಕಾರ ಕೆಲ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಿದ್ದು  ಅವನ್ನು ಜಾರಿ ಮಾಡಿದೆ. ಮಾಸ್ಕ್ ದಂಡ ಕಟ್ಟುನಿಟ್ಟಾಗಿ ಜಾರಿಯಾಗಿದೆ. 

 

click me!