
ಬೆಂಗಳೂರು: ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿ ಪ್ರತಿ ಜಿಲ್ಲೆ ಮತ್ತು ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಂಕ ಪಡೆದ ತಲಾ ಮೂವರು ವಿದ್ಯಾರ್ಥಿಗಳಿಗೆ ‘ಗುಣಮಟ್ಟ ಭರವಸೆ ಮತ್ತು ವಿದ್ಯಾರ್ಥಿ ಪ್ರೇರಣಾ ಉಪ ಕ್ರಮ’ ಕ್ರಿಯಾ ಯೋಜನೆಯಡಿ ಪ್ರತಿ ವಿದ್ಯಾರ್ಥಿಗೂ ₹50 ಸಾವಿರ ನಗದು ಪುರಸ್ಕಾರ ನೀಡಲು ಸರ್ಕಾರ ಆದೇಶಿಸಿದೆ.
ಇದುವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರತಿ ಜಿಲ್ಲೆ ಮತ್ತು ತಾಲ್ಲೂಕು ಎರಡೂ ಹಂತದಲ್ಲಿ ಅತಿ ಹೆಚ್ಚು ಅಂಕ ಪಡೆದ ತಲಾ ಮೂವರು ಮಕ್ಕಳಿಗೆ ಇದೇ ಯೋಜನೆಯಡಿ ಲ್ಯಾಪ್‌ಟಾಪ್ ನೀಡಲಾಗುತ್ತಿತ್ತು. ಇದನ್ನು 2024-25ನೇ ಸಾಲಿನಿಂದ ನಗದು ಪುರಸ್ಕಾರವಾಗಿ ಬದಲಾವಣೆ ಮಾಡಿಲು ಸರ್ಕಾರದ ಸೂಚನೆಯಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಶಾಲಾ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿತ್ತು.
ಇದಕ್ಕೆ ಒಪ್ಪಿಗೆ ನೀಡಿರುವ ಇಲಾಖೆಯು, ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ ಪ್ರತಿ ಜಿಲ್ಲೆ ಮತ್ತು ಪ್ರತಿ ತಾಲ್ಲೂಕಿನ ತಲಾ ಮೂವರಂತೆ ಒಟ್ಟು 785 ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ರು. ನಗದು ಪುರಸ್ಕಾರ ನೀಡಲು ಆದೇಶಿಸಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣ ಓದದ ರಾಜ್ಯಪಾಲರ ವಿರುದ್ಧ ರಾಜ್ಯಾದಂತ ವಿವಿಧೆಡೆ ಕಾಂಗ್ರೆಸ್ ಧರಣಿ
ಕಳೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರು ಇದಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದ್ದರು. ಅದರಂತೆ ಎಲ್ಲಾ ಪ್ರತಿಭಾನ್ವಿತ ಮಕ್ಕಳ ಆಧಾರ್ ಸಂಖ್ಯೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ನಗದು ಪುರಸ್ಕಾರವನ್ನು ಮಂಡಳಿಯ ನಿಧಿಯಿಂದ ನೇರ ನಗದು ವರ್ಗಾವಣೆ(ಡಿಬಿಟಿ) ಆದೇಶಿಸಿದೆ.
ಇದನ್ನೂ ಓದಿ: Bike Taxi: ಇನ್ಮುಂದೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಅಧಿಕೃತ: ಹೈಕೋರ್ಟ್‌ನಿಂದ ಮಹತ್ವದ ಆದೇಶ