ಪಠ್ಯಪುಸ್ತಕ ಪರಿಷ್ಕರಣೆ ಸಂದರ್ಭದಲ್ಲಿ ತಜ್ಞರ ಅಭಿಪ್ರಾಯ ಪಡೆಯಲಾಗಿದೆ. ಯಾವುದೇ ಪಕ್ಷದ ಪರ, ವಿರೋಧ ಎಂದು ಯೋಚಿಸಿಲ್ಲ. ಒಟ್ಟಾರೆ ಮಕ್ಕಳು ಏನನ್ನು ಓದಬೇಕು ಎನ್ನುವುದನ್ನು ಆಯಾ ಕ್ಷೇತ್ರದಲ್ಲಿ ನುರಿತ ತಜ್ಞರ ಜೊತೆ ಸಮಾಲೋಚನೆ ನಡೆಸಿಯೇ ಪಠ್ಯದಲ್ಲಿ ಅಳವಡಿಸಲಾಗುತ್ತಿದೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಸಾಗರ(ಜು.16): ಮಕ್ಕಳಿಗೆ ಹೊರೆಯಾಗದಂತೆ ಪುಸ್ತಕದ ಹೊರೆ ಇಳಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕ ಪರಿಷ್ಕರಣೆ ಸಂದರ್ಭದಲ್ಲಿ ತಜ್ಞರ ಅಭಿಪ್ರಾಯ ಪಡೆಯಲಾಗಿದೆ. ಯಾವುದೇ ಪಕ್ಷದ ಪರ, ವಿರೋಧ ಎಂದು ಯೋಚಿಸಿಲ್ಲ. ಒಟ್ಟಾರೆ ಮಕ್ಕಳು ಏನನ್ನು ಓದಬೇಕು ಎನ್ನುವುದನ್ನು ಆಯಾ ಕ್ಷೇತ್ರದಲ್ಲಿ ನುರಿತ ತಜ್ಞರ ಜೊತೆ ಸಮಾಲೋಚನೆ ನಡೆಸಿಯೇ ಪಠ್ಯದಲ್ಲಿ ಅಳವಡಿಸಲಾಗುತ್ತಿದೆ ಎಂದು ಹೇಳಿದರು.
13,500 ಶಿಕ್ಷಕರ ನೇಮಕಾತಿ:
undefined
ಎಲ್ಲ ಮಕ್ಕಳಿಗೆ ನಿಗದಿತ ಅವಧಿಯಲ್ಲಿ ಪಠ್ಯಪುಸ್ತಕವನ್ನು ತಲುಪಿಸಲಾಗಿದೆ. ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಬಗ್ಗೆ ಕೆಲವು ಕಡೆಗಳಲ್ಲಿ ಸಮಸ್ಯೆ ಇದೆ. ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಗಮನ ವಹಿಸಿದ್ದೇವೆ. ರಾಜ್ಯದಲ್ಲಿ 15 ಸಾವಿರ ಶಿಕ್ಷಕ ಹುದ್ದೆಗೆ ಮಂಜೂರಾತಿ ದೊರಕಿದೆ. ಸದ್ಯದಲ್ಲಿಯೇ 13,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕಾತಿಗೆ ಕ್ರಮ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಗ್ರಾಮೀಣ ಭಾಗದಲ್ಲಿ ಹಿಂದಿನ ಸರ್ಕಾರ 1ರಿಂದ 8ನೇ ತರಗತಿ ಮಕ್ಕಳಿಗೆ ವಾರಕ್ಕೆ 1 ದಿನ ಮೊಟ್ಟೆಕೊಡುವ ತೀರ್ಮಾನ ತೆಗೆದುಕೊಂಡಿತ್ತು. ನಮ್ಮ ಮುಖ್ಯಮಂತ್ರಿ ಅವರು 1ರಿಂದ 10ನೇ ತರಗತಿ ಮಕ್ಕಳಿಗೆ ವಾರಕ್ಕೆ 2 ದಿನ ಮೊಟ್ಟೆಕೊಡಲು ಸೂಚನೆ ನೀಡಿದ್ದಾರೆ. ಮೊಟ್ಟೆಸೇವಿಸದ ಮಕ್ಕಳಿಗೆ ಚಿಕ್ಕಿ ಮತ್ತು ಬಾಳೆಹಣ್ಣು ಕೊಡಲಾಗುತ್ತದೆ. ಸರ್ಕಾರಿ ಶಾಲೆಯ ಸಮಗ್ರ ಅಭಿವೃದ್ಧಿಗೆ ಬಜೆಟ್‌ನಲ್ಲಿ ಹಣ ಇರಿಸಿದ್ದು, ಅದನ್ನು ಶೀಘ್ರದಲ್ಲಿಯೇ ಅನುಷ್ಠಾನಕ್ಕೆ ತರಲಾಗುತ್ತದೆ ಎಂದು ತಿಳಿಸಿದರು.