ಪಾಲಿಟೆಕ್ನಿಕ್ ಪ್ರವೇಶಾರ್ಥಿಗಳಿಗೆ ಗುಡ್ ನ್ಯೂಸ್, ದಿನಾಂಕ ವಿಸ್ತರಣೆ

Published : Sep 02, 2021, 11:52 PM IST
ಪಾಲಿಟೆಕ್ನಿಕ್ ಪ್ರವೇಶಾರ್ಥಿಗಳಿಗೆ ಗುಡ್ ನ್ಯೂಸ್, ದಿನಾಂಕ ವಿಸ್ತರಣೆ

ಸಾರಾಂಶ

* ಪಾಲಿಟೆಕ್ನಿಕ್ ಪ್ರವೇಶ; ಸೆ.20ರವರೆಗೆ ಕಾಲಾವಕಾಶ * 2021-22ನೇ ಸಾಲಿನ ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಪ್ರವೇಶ * ಎಲ್ಲ ಕಾಲೇಜಿನ ಮನವಿ ಮೇರೆಗೆ ಅವಕಾಶ * ಕೊರೋನಾ ಕಾರಣಕ್ಕೆ ಅರ್ಧದಲ್ಲೇ ನಿಂತಿದ್ದ ಶೈಕ್ಷಣಿಕ ಚಟುವಟಿಕೆಗಳು

ಬೆಂಗಳೂರು(ಸೆ. 02) 2021-22ನೇ ಸಾಲಿನ ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಮೊದಲ ಬಂದವರಿಗೆ ಆದ್ಯತೆ ನೀಡಲಾಗುತ್ತಿದ್ದು, ಈ ತಿಂಗಳ 20ರವರೆಗೆ ಪ್ರವೇಶಾವಕಾಶ ವಿಸ್ತರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಶುಲ್ಕ ಏರಿಕೆ ಕೇಳಿ ಪೋಷಕರು ಕಂಗಾಲು

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ರಾಜ್ಯದ 62 ಸರ್ಕಾರಿ, 34 ಅನುದಾನಿತ ಪಾಲಿಟೆಕ್ನಿಕ್ʼಗಳಲ್ಲಿ ಪ್ರವೇಶಾವಕಾಶವನ್ನು ಸೆ. 20ರ ಸಂಜೆ ಕಚೇರಿ ಅವಧಿವರೆಗೂ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಈ ಅವಕಾಶ ಪಡೆದುಕೊಂಡು ದಾಖಲಾಗಬೇಕು ಎಂದು ಸಚಿವರು ತಿಳಿಸಿದ್ದಾರೆ.

ಪ್ರವೇಶಾವಧಿಯನ್ನಿ ವಿಸ್ತರಣೆ ಮಾಡುವಂತೆ ಎಲ್ಲ ಪಾಲಿಟೆಕ್ನಿಕ್ʼಗಳ ಪ್ರಾಂಶುಪಾಲರು ಕೋರಿಕೆ ಸಲ್ಲಿಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

PREV
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ