* ಉನ್ನತ ಶಿಕ್ಷಣ ಸಚಿವರಿಗೆ ಎಐಡಿಎಸ್ಒ ಮನವಿಪತ್ರ
* ಒಂದು ತಿಂಗಳಲ್ಲಿ ಎರಡು ಸೆಮಿಸ್ಟರ್ ಪರೀಕ್ಷೆ ನಡೆಸಬಾರದು ಎಂಬುದು ವಿದ್ಯಾರ್ಥಿಗಳ ಒತ್ತಾಯ
* ನಿಲುವು ಬದಲಿಸದ ರಾಜ್ಯ ಸರ್ಕಾರ
ಬಳ್ಳಾರಿ(ಜೂ.26): ಪದವಿ ವಿದ್ಯಾರ್ಥಿಗಳಿಗೆ ಒಂದೇ ತಿಂಗಳಲ್ಲಿ ಎರಡು ಸೆಮಿಸ್ಟರ್ ಪರೀಕ್ಷೆ ನಡೆಸಬಾರದು ಎಂದು ಒತ್ತಾಯಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟ(ಎಐಡಿಎಸ್ಒ) ವತಿಯಿಂದ ಪದವಿ ಕಾಲೇಜುಗಳ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಮನವಿಪತ್ರ ಕಳಿಸಿಕೊಡಲಾಯಿತು.
ಒಂದು ತಿಂಗಳಲ್ಲಿ ಎರಡು ಸೆಮಿಸ್ಟರ್‌ಗಳ ಪರೀಕ್ಷೆ ನಡೆಸಬಾರದು ಎಂದು ಆಗ್ರಹಿಸಿ ಕಳೆದ ಒಂದು ವಾರದಿಂದ ನಡೆದ ಗೂಗಲ್ ಮೀಟ್ ಸಮೀಕ್ಷೆಯಲ್ಲಿ ಸುಮಾರು 45 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು, ಕಳೆದ ಸೆಮಿಸ್ಟರ್ ಪರೀಕ್ಷೆಯನ್ನು ಪ್ರಚಲಿತ ಸೆಮಿಸ್ಟರ್ ನಡುವೆ ಪರೀಕ್ಷೆಗಳು ನಡೆಸುವುದು ಬೇಡ ಎಂಬ ಅಭಿಪ್ರಾಯ ಮಂಡಿಸಿದ್ದಾರೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇಷ್ಟಾಗಿಯೂ ಸರ್ಕಾರ ತನ್ನ ನಿಲುವು ಬದಲಿಸಿಲ್ಲ. ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಕಳೆದ ಸೆಮಿಸ್ಟರ್ನ ಪರೀಕ್ಷೆಯನ್ನು ನಡೆಸುತ್ತೇವೆ ಎಂಬ ಅವೈಜ್ಞಾನಿಕ ಮತ್ತು ಆತಾರ್ಕಿಕವಾದ ನಿರ್ಧಾರವನ್ನು ಕೈಗೊಂಡಿದ್ದು, ಕೂಡಲೇ ಹಿಂದಕ್ಕೆ ಪಡೆಯಬೇಕು ಎಂದು ವಿದ್ಯಾರ್ಥಿ ನಾಯಕರು ಆಗ್ರಹಿಸಿದ್ದಾರೆ.
undefined
ಕೋವಿಡ್ ಸಂಕಷ್ಟದ ನಡುವೆಯೂ ನಿಲ್ಲದ ಖಾಸಗಿ ಶಾಲೆಗಳ ಡೊನೇಷನ್ ಹಾವಳಿ
ಸಂಘಟನೆಯ ಜಿಲ್ಲಾಧ್ಯಕ್ಷ ಗುರಳ್ಳಿ ರಾಜ, ಕೆ. ಈರಣ್ಣ, ಕಂಬಳಿ ಮಂಜುನಾಥ ಮತ್ತು ಸದಸ್ಯರು, ವಿದ್ಯಾರ್ಥಿಗಳು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಸರ್ಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ವೀರಶೈವ ಪದವಿ ಕಾಲೇಜಿನ ಪ್ರಾಂಶುಪಾಲರ ಮುಖಾಂತರ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಪತ್ರ ಕಳಿಸಿಕೊಡಲಾಯಿತು.