ಅತಿಥಿ ಉಪನ್ಯಾಸಕರು ಕರ್ತವ್ಯಕ್ಕೆ ಮರಳದೆ ಇದ್ದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಾಗಿದೆ. ಹಾಗಾಗಿ ಜ.1ರಂದು ಅತಿಥಿ ಉಪನ್ಯಾಸಕರು ತರಗತಿಗೆ ಹಾಜರಾಗಿರುವ ಬಗ್ಗೆ ಅಂದು ಮಧ್ಯಾಹ್ನ 2 ಗಂಟೆಯೊಳಗೆ ಇಲಾಖೆಯ ವೆಬ್‌ಸೈಟ್‌ನಲ್ಲಿ ಅಳವಡಿಸಿರುವ ಗೂಗಲ್ ಫಾರ್ಮ್‌ನಲ್ಲಿ ತಿಳಿಸುವಂತೆ ಸೂಚಿಸಿದ್ದಾರೆ.
ಬೆಂಗಳೂರು(ಡಿ.31): ಸೇವೆ ಕಾಯಮಾತಿಗಾಗಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಪದವಿ ಕಾಲೇಜು ಅತಿಥಿ ಉಪನ್ಯಾಸಕರು ಜ.1ರ ಸೋಮವಾರದಿಂದ ಬೃಹತ್ ಪಾದಯಾತ್ರೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದರೆ, ಇತ್ತ ಸರ್ಕಾರ ಜ.1ರಂದು ಆ ಉಪನ್ಯಾಸಕರು ಕರ್ತವ್ಯಕ್ಕೆ ಮರಳದಿದ್ದರೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಮುಂದಾಗಿದೆ.
ಈ ಸಂಬಂಧ ಕಾಲೇಜು ಶಿಕ್ಷಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿ, ರಾಜ್ಯದ ಎಲ್ಲಾ 430 ಸರ್ಕಾರಿ ಪದವಿ ಕಾಲೇಜುಗಳ ಪ್ರಾಂಶುಪಾಲರಿಗೆ ಪತ್ರ ಬರೆದು, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಶುಕ್ರವಾರ ಅತಿಥಿ ಉಪನ್ಯಾಸಕರ ಸಂಘಟನೆಗಳ ಪದಾಧಿಕಾರಿಗಳ ಸಭೆ ನಡೆಸಿ ಜ.1ರಿಂದ ತರಗತಿಗೆ ಹಾಜರಾಗಲು ನಿರ್ದೇಶನ ನೀಡಿದ್ದಾರೆ. ಅತಿಥಿ ಉಪನ್ಯಾಸಕರು ಕರ್ತವ್ಯಕ್ಕೆ ಮರಳದೆ ಇದ್ದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಾಗಿದೆ. ಹಾಗಾಗಿ ಜ.1ರಂದು ಅತಿಥಿ ಉಪನ್ಯಾಸಕರು ತರಗತಿಗೆ ಹಾಜರಾಗಿರುವ ಬಗ್ಗೆ ಅಂದು ಮಧ್ಯಾಹ್ನ 2 ಗಂಟೆಯೊಳಗೆ ಇಲಾಖೆಯ ವೆಬ್‌ಸೈಟ್‌ನಲ್ಲಿ ಅಳವಡಿಸಿರುವ ಗೂಗಲ್ ಫಾರ್ಮ್‌ನಲ್ಲಿ ತಿಳಿಸುವಂತೆ ಸೂಚಿಸಿದ್ದಾರೆ.
undefined
ಅತಿಥಿ ಉಪನ್ಯಾಸಕರ ಹೋರಾಟ: ವಿದ್ಯಾರ್ಥಿಗಳ ಪರದಾಟ
ಉಪನ್ಯಾಸಕರ ಸಡ್ಡು: ನಾಳೆ ಪಾದಯಾತ್ರೆ
ಸರ್ಕಾರದ ಎಚ್ಚರಿಕೆಗೆ ಸೊಪ್ಪು ಹಾಕದ ಅತಿಥಿ ಉಪನ್ಯಾಸಕರು ನಮಗೆ ಸೇವಾ ಭದ್ರತೆ ಕಲ್ಪಿಸದ ಹೊರತು ಮುಷ್ಕರ ಕೈಬಿಡುವುದಿಲ್ಲ. ಈ ಮೊದಲೇ ನಿರ್ಧರಿಸಿರುವಂತೆ ಜ.1ರಂದು ತುಮಕೂರಿನ ಸಿದ್ಧಗಂಗಾ ಮಠದಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದವರೆಗೆ ಬೃಹತ್ ಪಾದಯಾತ್ರೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ. ‘ಸಿದ್ಧಗಂಗಾ ಮಠಾಧೀಶ ಸಿದ್ದಲಿಂಗ ಸ್ವಾಮೀಜಿ ಅವರು 10 ಸಾವಿರ ಅತಿಥಿ ಉಪನ್ಯಾಸಕರ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ’ ಎಂದು ರಾಜ್ಯ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿ ಶಿವಪ್ಪ ಮಾಹಿತಿ ನೀಡಿದ್ದಾರೆ.