ಹೊಟೇಲ್ ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹ ಧನ ಅರ್ಜಿ ಆಹ್ವಾನ: ಯಾರೆಲ್ಲಾ ಅರ್ಹರು?

By Suvarna News  |  First Published May 27, 2024, 8:33 PM IST

ಹೊಟೇಲ್ ಕಾರ್ಮಿಕರ ಮಕ್ಕಳಿಗಾಗಿ ಕರ್ನಾಟಕ ಹೊಟೇಲ್ ಕಾರ್ಮಿಕರ ಸಂಘ 2023-24 ನೇ ಸಾಲಿನ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು? ಹೇಗೆ ಅರ್ಜಿ ಸಲ್ಲಿಸಬಹುದು‌? ಈ ಎಲ್ಲಾ ಮಾಹಿತಿಗಳನ್ನು ಒಂದೊಂದಾಗಿ ನೋಡೋಣ. 


ಬೆಂಗಳೂರು (ಮೇ.27): ಹೊಟೇಲ್ ಕಾರ್ಮಿಕರ ಮಕ್ಕಳಿಗಾಗಿ ಕರ್ನಾಟಕ ಹೊಟೇಲ್ ಕಾರ್ಮಿಕರ ಸಂಘ 2023-24 ನೇ ಸಾಲಿನ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು? ಹೇಗೆ ಅರ್ಜಿ ಸಲ್ಲಿಸಬಹುದು‌? ಈ ಎಲ್ಲಾ ಮಾಹಿತಿಗಳನ್ನು ಒಂದೊಂದಾಗಿ ನೋಡೋಣ. ಅಲ್ಪ ಪ್ರಮಾಣದ ಭತ್ಯೆ, ಹೆಚ್ಚು ದುಡಿಮೆ ಇದರ ನಡುವೆಯೇ ತೇದು ಹೋಗುವ ಜೀವನ. ನಮ್ಮ ಮಕ್ಕಳ ಬದುಕೂ ನಮ್ಮಂತೆಯೇ ಕಳೆದು ಹೋಗಬಾರದು ಎಂಬುದು ಪ್ರತಿಯೊಬ್ಬ ತಂದೆ ತಾಯಿಯ ಕನಸು. 

ಇದಕ್ಕೆ ಹೊಟೇಲ್ ಉದ್ಯಮವನ್ನೇ ನೆಚ್ಚಿಕೊಂಡಿರುವ ಕಾರ್ಮಿಕ ವರ್ಗವೂ ಹೊರತಲ್ಲ. ಇವತ್ತಿನ ದುಬಾರಿ ದುನಿಯಾದಲ್ಲಿ ಉನ್ನತ ಶಿಕ್ಷಣ ಅನ್ನುವುದು ಈ ವರ್ಗಕ್ಕೆ ಬರೀ ಕನಸಷ್ಟೇ. ಈ ಕನಸು ನನಸಾಗಿಸಲು ಮುಂದಾಗಿದ್ದು ಕರ್ನಾಟಕ ಹೊಟೇಲ್ ಕಾರ್ಮಿಕರ ಸಂಘ. ಹೊಟೇಲುಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರ ಮಕ್ಕಳಿಗಾಗಿ ಪ್ರತೀ ವರ್ಷ ಪ್ರೋತ್ಸಾಹ ನೀಡುತ್ತಾ ಅವರ ವಿದ್ಯಾಭ್ಯಾಸಕ್ಕೆ ಊರುಗೋಲಾಗುತ್ತಾ ಬಂದಿದೆ. ಈ ವರ್ಷವೂ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 

Tap to resize

Latest Videos

undefined

ಪಾರಂಪರಿಕ ಔಷಧ ಪದ್ಧತಿ-ಹೆಚ್ಚಿನ ಸಂಶೋಧನೆಗೆ ಉಪ ರಾಷ್ಟ್ರಪತಿ ಜಗದೀಪ್ ಧನಕರ ಕರೆ

ಅರ್ಜಿ ಹಾಕಲು ಅರ್ಹತೆಗಳೇನು?
* ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ ಅಥವಾ ತಾಯಿ ಹೊಟೇಲ್ ಕಾರ್ಮಿಕರಾಗಿರಬೇಕು ಮತ್ತು ಏಪ್ರಿಲ್ 30, 2024ರ ಒಳಗಾಗಿ ಕಡ್ಡಾಯವಾಗಿ ಹೊಟೇಲ್ ಕಾರ್ಮಿಕ ಸಂಘದ ಐಡಿ ಕಾರ್ಡ್ ಹೊಂದಿರಬೇಕು.

* ವಿದ್ಯಾರ್ಥಿಯು 2023-24 ನೆ ಸಾಲಿನಲ್ಲಿ SSLC ಅಥವಾ PUC ಮುಗಿಸಿರಬೇಕು.

* 2023-24ನೇ ಸಾಲಿನ SSLC ಅಥವಾ ಪಿಯುಸಿಯಲ್ಲಿ ಕಡ್ಡಾಯವಾಗಿ ಕನಿಷ್ಠ 80% ಅಂಕ ಪಡೆದಿರಬೇಕು.

* ಜೂನ್ 15 ರ ಒಳಗೆ ಅರ್ಜಿ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

* ವಿದ್ಯಾರ್ಥಿಯ ಆಧಾರ್ ಕಾರ್ಡ್ ಮತ್ತು ಅಂಕಪಟ್ಟಿಯನ್ನು ಅರ್ಜಿಯ ಜೊತೆ ಕಡ್ಡಾಯವಾಗಿ ಲಗತ್ತಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ?
* 9035655406 ಅಥವಾ 9743539990 ಗೆ ವಾಟ್ಸಪ್ ಮಾಡುವ ಮೂಲಕ ಅರ್ಜಿ ಪಡೆದುಕೊಳ್ಳಬೇಕು.

* ಅರ್ಜಿಯಲ್ಲಿ ಕೇಳಿರುವ ಮಾಹಿತಿಯನ್ನು ತುಂಬಿಸಿ.

* ಒಂದು ಇತ್ತೀಚಿನ ಭಾವಚಿತ್ರ, ಆಧಾರ್ ಕಾರ್ಡ್ ಮತ್ತು ಅಂಕ ಪ್ರತಿಗಳನ್ನು ಇರಿಸಿ.

ಅನಫಾ ಗ್ರಾಂಡ್, ನಂ 1353 29 ನೇ ಮುಖ್ಯ ರಸ್ತೆ, ಉತ್ತರಹಳ್ಳಿ, ಪೂರ್ಣಪ್ರಜ್ಞಾ ಬಡಾವಣೆ ಬೆಂಗಳೂರು  560061, ಈ ವಿಳಾಸಕ್ಕೆ ಕಳುಹಿಸಿ ಕೊಡಿ. ಅರ್ಜಿಗಳನ್ನು ಪರಿಗಣಿಸಿ ಆಯ್ದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

click me!