ಪ್ಯಾರಾಮೆಡಿಕಲ್‌ ಅಲ್ಪಾವಧಿ ಕೋರ್ಸ್‌ಗೆ ಅರ್ಜಿ ಆಹ್ವಾನ

By Kannadaprabha News  |  First Published Oct 31, 2022, 11:42 PM IST

ಸಮಾಜ ಕಲ್ಯಾಣ ವತಿಯಿಂದ ಪರಿಶಿಷ್ಟಜಾತಿ ಹಾಗೂ ಪರಿಶಿಷ್ಟವರ್ಗದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಎನ್‌ಎಬಿಎಚ್‌ ಪ್ಯಾರಾಮೆಡಿಕಲ್‌ ಮತ್ತು ನಾನ್‌ ಪ್ಯಾರಾಮೆಡಿಕಲ್‌ ಅಲ್ಪಾವಧಿ ಸರ್ಟಿಫಿಕೇಟ್‌ ಕೋರ್ಸ್‌ಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 


ಕೊಪ್ಪಳ (ಅ.31): ಸಮಾಜ ಕಲ್ಯಾಣ ವತಿಯಿಂದ ಪರಿಶಿಷ್ಟಜಾತಿ ಹಾಗೂ ಪರಿಶಿಷ್ಟವರ್ಗದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಎನ್‌ಎಬಿಎಚ್‌ ಪ್ಯಾರಾಮೆಡಿಕಲ್‌ ಮತ್ತು ನಾನ್‌ ಪ್ಯಾರಾಮೆಡಿಕಲ್‌ ಅಲ್ಪಾವಧಿ ಸರ್ಟಿಫಿಕೇಟ್‌ ಕೋರ್ಸ್‌ಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ಅವಧಿ ಮೂರು ತಿಂಗಳು ಆಗಿದ್ದು, ಪ್ಯಾರಾಮೆಡಿಕಲ್‌ ಅಸಿಸ್ಟೆಂಟ್‌ (ನಾನ್‌ ಪ್ಯಾರಾಮೆಡಿಕಲ್‌) ಅಭ್ಯರ್ಥಿಗಳು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾಗಿರಬೇಕು. ಪ್ಯಾರಾಮೆಡಿಕಲ್‌ ಟೆಕ್ನಿಷಿಯನ್‌(ಪ್ಯಾರಾಮೆಡಿಕಲ್‌) ಅಭ್ಯರ್ಥಿಗಳು ಪ್ಯಾರಾಮೆಡಿಕಲ್‌ ಡಿಪ್ಲೊಮಾ ಕೋರ್ಸ್‌ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.

ಆಸಕ್ತ ಅಭ್ಯರ್ಥಿಗಳು ನ. 15ರ ಒಳಗಾಗಿ ಅರ್ಜಿ ಸಲ್ಲಿಸಬೇಕು ಮತ್ತು ಹೆಚ್ಚಿನ ಮಾಹಿತಿಗಾಗಿ ಇಲಾಖೆ ವೆಬ್‌ಸೈಟ್‌ ಡಿಡಿಡಿ.sಡಿ.ka್ಟ.್ಞಜ್ಚಿ.ಜ್ಞಿ ನಲ್ಲಿ ಅಥವಾ ಕೇಂದ್ರ ಕಚೇರಿಯ ದೂ. 080- 22207784 ಹಾಗೂ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ಮತ್ತು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ, ಯಲಬುರ್ಗಾ, ಗಂಗಾವತಿ, ಕುಷ್ಟಗಿ, ತಾಲೂಕು ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ ಕುಷ್ಟಗಿ ಮತ್ತು ಗಂಗಾವತಿ ಇವರನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tap to resize

Latest Videos

ರಾಜ್ಯದಲ್ಲಿ ಒಟ್ಟು‌ 29 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಆದೇಶ

ಶೈಕ್ಷಣಿಕ ಸಾಲಕ್ಕಾಗಿ ಅರ್ಜಿ ಆಹ್ವಾನ
ಮಡಿಕೇರಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ 2021-22ನೇ ಸಾಲಿನಲ್ಲಿ ಸಿಇಟಿ ಮೂಲಕ ಆಯ್ಕೆಯಾಗಿ ಈಗಾಗಲೇ ವ್ಯಾಸಂಗ ಮುಂದುವರಿಸಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 2ನೇ ವರ್ಷದಿಂದ ಅರಿವು ಶೈಕ್ಷಣಿಕ ಸಾಲ ಮಂಜೂರು ಮಾಡಲು 2ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಮಾತ್ರ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

2ನೇ ವರ್ಷದ ವಿದ್ಯಾರ್ಥಿಗಳು ಮಾತ್ರ ಅರ್ಜಿಯನ್ನು ಸೇವಾ ಸಿಂಧು ಪೋರ್ಟಲ್‌ ಮುಖಾಂತರ ಗ್ರಾಮಒನ್‌, ಬೆಂಗಳೂರು ಒನ್‌ ಮತ್ತು ಕರ್ನಾಟಕ ಒನ್‌ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್‌ ಮೂಲಕ ಸಲ್ಲಿಸಬಹುದು. ಅರ್ಜಿಗಳನ್ನು ಆಫ್‌ಲೈನ್‌ ಮೂಲಕ ಸಲ್ಲಿಸಲು ಅವಕಾಶವಿರುವುದಿಲ್ಲ.

ಹಾವೇರಿ ಮೆಡಿಕಲ್‌ ಕಾಲೇಜು ಕಟ್ಟಡದಲ್ಲೇ ತರಗತಿ ಆರಂಭಕ್ಕೆ ಸಿದ್ಧತೆ

ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಮಡಿಕೇರಿ ದೂರವಾಣಿ ಸಂಖ್ಯೆ: 08272-221656 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

click me!