ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 610 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬೆಂಗಳೂರು ಬಸವೇಶ್ವರ ನಗರದ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಡಾ.ಪ್ರಭಾಕರ ರೆಡ್ಡಿ ಎಜುಕೇಷನಲ್ ಅಂಡ್ ಚಾರಿಟಬಲ್ ಟ್ರಸ್ಟ್‌ನಿಂದ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು (ಮೇ. 30): ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 610 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಸವೇಶ್ವರ ನಗರದ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಡಾ.ಪ್ರಭಾಕರ ರೆಡ್ಡಿ ಎಜುಕೇಷನಲ್ ಅಂಡ್ ಚಾರಿಟಬಲ್ ಟ್ರಸ್ಟ್‌ನಿಂದ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಬಾಗಲಕೋಟೆ: ಬಿಎಸ್ಸಿಯಲ್ಲಿ 16 ಚಿನ್ನದ ಪದಕ, ವಿದ್ಯಾರ್ಥಿನಿ ಮುಂದಿನ ಓದಿಗೆ ಬೇಕಾಗಿದೆ ನೆರವು..!
ಬೆಂಗಳೂರು ಮತ್ತು ಸುತ್ತಮುತ್ತಲ ವಿದ್ಯಾರ್ಥಿಗಳಿಗೆ ನಗರದಲ್ಲಿ ಕಾರ್ಯಕ್ರಮ ಆಯೋಜಿಸಿ ಸನ್ಮಾನಿಸಲಾಗುವುದು. ಹೊರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ, ಪಾರಿತೋಷಕ ಮತ್ತು ಉಪಯುಕ್ತ ಮಾಹಿತಿಗಳ ಕನ್ನಡ ಪುಸ್ತಕಗಳನ್ನು ಕಳುಹಿಸಿಕೊಡಲಾಗುವುದು. ಇತ್ತೀಚಿನ ಭಾವಚಿತ್ರ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಮೊಬೈಲ್ ಸಂಖ್ಯೆ, ವಿಳಾಸವನ್ನು ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ, ನಂ.674, 10 ನೇ ಸಿ ಅಡ್ಡರಸ್ತೆ, 3 ನೇ ಹಂತ, 4 ನೇ ವಿಭಾಗ, ಬಸವೇಶ್ವರನಗರ, ಬೆಂಗಳೂರು-560079 ಇಲ್ಲಿಗೆ ಕಳುಹಿಸಿಕೊಡಬೇಕು ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.
ಮೈಸೂರು ವಿಜಯನಗರ ರೈಲ್ವೆ ಬಡಾವಣೆಯ ವಿಶ್ವಕರ್ಮ ಸೇವಾ ಟ್ರಸ್ಟ್ 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ. 90ಷ್ಟುಅಂಕಗಳಿಸಿದ ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಿದೆ.
PM CARES For Children ದಾವಣಗೆರೆಯ ಅನಾಥ ಮಕ್ಕಳಿಗೆ 10 ಲಕ್ಷ ಬಾಂಡ್
ಆಸಕ್ತ ವಿದ್ಯಾರ್ಥಿಗಳು ಅಂಕಪಟ್ಟಿಯ ನಕಲು ಪ್ರತಿ ಅಥವಾ ಶಾಲಾ ಮುಖ್ಯಸ್ಥರಿಂದ ದೃಢೀಕರಿಸಿದ ಅಂಕಪಟ್ಟಿ, ಪೋಷಕರು ಮತ್ತು ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ವಿದ್ಯಾರ್ಥಿಯ ಪಾಸ್‌ಪೋರ್ಚ್ ಅಳತೆಯ ಭಾವಚಿತ್ರ, ಪೋಷಕರು ಅಥವಾ ವಿದ್ಯಾರ್ಥಿಯ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ನಮೂದಿಸಬೇಕು ಎಂದರು. ಹೆಚ್ಚಿನ ಮಾಹಿತಿಗೆ ಮೊ. 99642 25410, 63606 77053 ಸಂಪರ್ಕಿಸಬಹುದು.