Guest Lecture: ಫೆ.9ರೊಳಗೆ ಹೊಸ ಅತಿಥಿ ಉಪನ್ಯಾಸಕರ ನೇಮಕ

By Kannadaprabha News  |  First Published Jan 31, 2023, 10:43 AM IST

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಿಗೆ 2021-22ನೇ ಸಾಲಿನಲ್ಲಿ ನೇಮಿಸಿಕೊಂಡಿದ್ದ ಎಲ್ಲ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಬಿಡುಗಡೆಗೊಳಿಸಿ 2022-23ನೇ ಸಾಲಿಗೆ ಹೊಸದಾಗಿ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಸೂಚಿಸಿದೆ.


ಬೆಂಗಳೂರು (ಜ.31) : ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಿಗೆ 2021-22ನೇ ಸಾಲಿನಲ್ಲಿ ನೇಮಿಸಿಕೊಂಡಿದ್ದ ಎಲ್ಲ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಬಿಡುಗಡೆಗೊಳಿಸಿ 2022-23ನೇ ಸಾಲಿಗೆ ಹೊಸದಾಗಿ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಸೂಚಿಸಿದೆ.

ಈ ಸಂಬಂಧ ಕೌನ್ಸೆಲಿಂಗ್‌ ವೇಳಾಪಟ್ಟಿಯನ್ನೂ ಪ್ರಕಟಿಸಿದ್ದು, 2022-23ನೇ ಸಾಲಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ತಾತ್ಕಾಲಿಕ ಮೆರಿಟ್‌ ಪಟ್ಟಿಯನ್ನು ಪ್ರಕಟಿಸಲಾಗಿದೆ. ಫೆ.3ರಂದು ಅಂತಿಮ ಮೆರಿಟ್‌ ಪಟ್ಟಿಮತ್ತು ಕಾರ್ಯಭಾರದ ಮಾಹಿತಿ ಪ್ರಕಟಿಸಬೇಕು. ಫೆ.4ರಿಂದ 8ರವರೆಗೆ ಅಂತಿಮ ಮೆರಿಟ್‌ ಪಟ್ಟಿಅನ್ವಯ ವಿಷಯವಾರು ಆನ್‌ಲೈನ್‌ ಕೌನ್ಸೆಲಿಂಗ್‌ ಪ್ರಕ್ರಿಯೆ ನಡೆಸಿ ಫೆ.9ರಂದು ಆಯ್ಕೆ ಪಟ್ಟಿಪ್ರಕಟಿಸಬೇಕು. ಈ ಸಾಲಿನಲ್ಲಿ ಹೆಚ್ಚುವರಿ ಕಾರ್ಯಭಾರಕ್ಕೆ ಅನುಗುಣವಾಗಿ ನೇಮಕಾತಿ ಮಾಡಿಕೊಳ್ಳಬೇಕು. ಆಯ್ಕೆಯಾದ ಅಭ್ಯರ್ಥಿಗಳು ಫೆ.10ರಿಂದ ಕಾಲೇಜುಗಳಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕೆಂದು ಇಲಾಖೆ ಆಯುಕ್ತ ಪ್ರದೀಪ್‌ ಸುತ್ತೋಲೆ ಹೊರಡಿಸಿದ್ದಾರೆ.

Tap to resize

Latest Videos

 

ಅನುದಾನಿತ ಶಿಕ್ಷಕರ ಬೇಡಿಕೆ ಈಡೇರಿಕೆಗಾಗಿ ಅನಿರ್ದಿಷ್ಟಾವಧಿ ಮುಷ್ಕರ

ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಾವು ಸಲ್ಲಿಸಿರುವ ಮಾಹಿತಿಯಲ್ಲಿ ಯಾವುದೇ ತಪ್ಪುಗಳಿದ್ದರೆ ತಿದ್ದುಪಡಿಗೆ ಫೆ.2ರ ಸಂಜೆ 5ರವರೆಗೆ ಅವಕಾಶ ನೀಡಲಾಗಿದೆ. ನಂತರ ಯಾವುದೇ ತಿದ್ದುಪಡಿ ಮನವಿಯನ್ನು ಪರಿಗಣಿಸುವುದಿಲ್ಲ. ಪ್ರಾಂಶುಪಾಲರುಗಳು ಇಡೀ ಕೌನ್ಸೆಲಿಂಗ್‌ ಪ್ರಕ್ರಿಯೆಯ ಮಾಹಿತಿಯನ್ನು ಕಾಲೇಜಿನ ನೋಟಿಸ್‌ ಬೋರ್ಡ್‌ನಲ್ಲಿ ಪ್ರಕಟಿಸಬೇಕು. ಅತಿಥಿ ಉಪನ್ಯಾಸಕರ ಆಯ್ಕೆಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ಇಲಾಖೆ ವೆಬ್‌ಸೈಟ್‌ hಠಿಠಿps://d್ಚಛಿ.ka್ಟ್ಞaಠಿaka.ಜಟv.ಜ್ಞಿ ನಲ್ಲಿ ಪ್ರಕಟಿಸಬೇಕೆಂದು ಸೂಚಿಸಲಾಗಿದೆ.

ಈ ಮಧ್ಯೆ, 2021-22ನೇ ಸಾಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಜ.30ಕ್ಕೆ ಸೇವೆಯಿಂದ ಬಿಡುಗಡೆಗೊಳಿಸಿ ಅವರ ಸೇವಾ ಅವಧಿಗೆ ಅನುಗುಣವಾಗಿ ಗೌರವಧನ ಪಾವತಿಸುವಂತೆ ಇಲಾಖೆಯ ಎಲ್ಲ ಪ್ರಾದೇಶಿಕ ಜಂಟಿ ನಿರ್ದೇಶಕರು, ಕಾಲೇಜುಗಳ ಪ್ರಾಂಶುಪಾಲರಿಗೆ ಇಲಾಖೆ ಸೂಚಿಸಿದೆ.

ಶಿಕ್ಷಕರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿಪ್ರಕಟ

2022ನೇ ಸಾಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿನ ಹೆಚ್ಚುವರಿ ಶಿಕ್ಷಕರ ಮರು ಹೊಂದಾಣಿಕೆ ಪ್ರಕ್ರಿಯೆ ಮುಂದುವರೆಸಿ ಹಾಗೂ ಶಿಕ್ಷಕರ ಕೋರಿಕೆ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಿ ಶಿಕ್ಷಣ ಇಲಾಖೆ ಪರಿಷ್ಕೃತ ವೇಳಾಪಟ್ಟಿಪ್ರಕಟಿಸಿದೆ.

ಶಾಲೆಗಳಲ್ಲಿನ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಎಂದು ಗುರುತಿಸಲಾದ ಶಿಕ್ಷಕರ ಮರು ಹೊಂದಾಣಿಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪೂರ್ವಭಾವಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಇಲಾಖೆಯ ಶಿಕ್ಷಕ ಮಿತ್ರ ತಂತ್ರಾಂಶದಲ್ಲಿ (ಇಇಡಿಎಲ್‌) ಶಿಕ್ಷಕರ ಸೇವಾ ಮಾಹಿತಿಯನ್ನು ದಾಖಲಿಸಲು ಫೆ.4ರ ವರೆಗೆ ಕಾಲಾವಕಾಶ ನೀಡಲಾಗಿದೆ. ಶಿಕ್ಷಕರ ಆದ್ಯತೆ ಅಥವಾ ವಿನಾಯಿತಿಗೆ ನಿಗದಿಪಡಿಸಿರುವ ದಾಖಲೆಗಳನ್ನು ವರ್ಗಾವಣಾ ತಂತ್ರಾಂಶದಲ್ಲಿ ಅಪ್‌ಲೋಡ್‌ ಮಾಡಲು ಅಥವಾ ಸರಿಪಡಿಸಲು ಫೆ.8 ಕೊನೆಯ ದಿನವಾಗಿದೆ. ಶಿಕ್ಷಕರು ಸಲ್ಲಿಸಿರುವ ವೈದ್ಯಕೀಯ ಪ್ರಮಾಣಪತ್ರಗಳ ನೈಜತೆ ಮರು ಪರಿಶೀಲನೆ ಸೇರಿ ಶಿಕ್ಷಕರು ಸಲ್ಲಿಸಿರುವ ದಾಖಲೆಗಳನ್ನು ಪರಿಶೀಲಿಸಿ ತಂತ್ರಾಂಶದಲ್ಲಿ ದೃಢೀಕರಿಸಿ ಅನುಮೋದಿಸಲು ಫೆ.10 ಕೊನೆಯ ದಿನವಾಗಿದೆ ಎಂದು ತಿಳಿಸಿದ್ದಾರೆ.

5000 ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕ, ಗೌರವ ಧನ ಹೆಚ್ಚಳಕ್ಕೆ ಸರಕಾರ ಆದೇಶ

ಇನ್ನು, ಕೋರಿಕೆ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಸೋಮವಾರ ಕೊನೆಯ ದಿನವಾಗಿತ್ತು. ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಅವಧಿಯನ್ನು ಮಾ.4ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚುವರಿ ಪ್ರಕ್ರಿಯೆ ಹಾಗೂ ಕೋರಿಕೆ/ಪರಸ್ಪರ ವರ್ಗಾವಣೆ ಕುರಿತು ವಿಸ್ತೃತವಾದ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು. ಉಳಿದಂತೆ ಡಿ.26ರಂದು ಹೊರಡಿಸಿರುವ ಎಲ್ಲ ಮಾರ್ಗಸೂಚಿಗಳು ಯಥಾವತ್ತಾಗಿ ಮುಂದುವರಿಯಲಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಜ್ಞಾಪನ ಪತ್ರ ಹೊರಡಿಸಿದ್ದಾರೆ.

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿಲ್ಲ, ಅದು ಮುಂದುವರೆಯಲಿದೆ. ಹೆಚ್ಚುವರಿ ಶಿಕ್ಷಕರ ಮಾಹಿತಿ ದಾಖಲಿಸುವಲ್ಲಿ ಆಗಿರುವ ಲೋಪದಿಂದ ಹೆಚ್ಚುವರಿ ಶಿಕ್ಷಕರ ಕೌನ್ಸೆಲಿಂಗ್‌ ಮುಂದೂಡಲಾಗಿತ್ತು ಎಂದು ಇಲಾಖೆ ಸ್ಪಷ್ಟಪಡಿಸಿದೆ.

click me!