Latest Videos

ಸರ್ಕಾರದಿಂದ ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ ಆಹ್ವಾನ

By Sathish Kumar KHFirst Published Jun 12, 2024, 6:54 PM IST
Highlights

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಒಬಿಸಿ ಪ್ರವರ್ಗ-1,2ಎ,3ಎ ಮತ್ತು 3ಬಿ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಗೆ ತರಬೇತಿ ಭತ್ಯೆ ಮಂಜೂರಾತಿಗಾಗಿ  ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು (ಜೂ.12): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ  ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿರುವ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1,2ಎ,3ಎ ಮತ್ತು 3 ಬಿ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಗೆ ತರಬೇತಿ ಭತ್ಯೆ ಮಂಜೂರಾತಿಗಾಗಿ  ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ಬೆಂಗಳೂರು ನಗರ ಜಿಲ್ಲೆಗೆ ಸೇರಿದವರಾಗಿರಬೇಕು. ಅಭ್ಯರ್ಥಿಯು ಬಾರ್ ಕೌನ್ಸಿಲ್ ನಲ್ಲಿ ಹೆಸರನ್ನು ನೊಂದಾಯಿಸಿರಬೇಕು. ಅಭ್ಯರ್ಥಿಯು ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕಡೆಯ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 38 (2ಎ,3ಎ ಮತ್ತು 3ಬಿ ವರ್ಗಕ್ಕೆ) ಹಾಗೂ (ಪ್ರವರ್ಗ -1 ಕ್ಕೆ) 40 ವರ್ಷಗಳ ವಯೋಮಿತಿಯಲ್ಲಿರಬೇಕು. ಅಭ್ಯರ್ಥಿಯು ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕಕ್ಕೆ ಕಾನೂನು ಪದವಿ  ಪರೀಕ್ಷೆಯಲ್ಲಿ ಉತ್ತೀರ್ಣರಾಗಿ 2 ವರ್ಷದೊಳಗೆ  ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಪ್ರವೇಶ ಪ್ರಾರಂಭ: 8ನೇ ತರಗತಿ ಪಾಸಾದವರು ಅಪ್ಲೈ ಮಾಡಿ

ಆಯ್ಕೆಯಾದ ಅಭ್ಯರ್ಥಿಗಳಿಗೆ 4 ವರ್ಷಗಳ ತರಬೇತಿ ಭತ್ಯೆ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರಿ ವಕೀಲರು ಅಥವಾ ಕನಿಷ್ಠ 20 ವರ್ಷಗಳ ವಕೀಲ ವೃತ್ತಿಯಲ್ಲಿ ಅನುಭವವುಳ್ಳ ಯಾವುದೇ ವಕೀಲರ ಅಧೀನದಲ್ಲಿ ತರಬೇತಿಗೆ ನಿಯೋಜಿಸಲಾಗುವುದು. 

ಆಸಕ್ತ ಅಭ್ಯರ್ಥಿಗಳು, ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 1ನೇ ಮಹಡಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಗೋಪುರ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು-01 ಇಲ್ಲಿ  ಅರ್ಜಿ ನಮೂನೆಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳ ಜೊತೆಗೆ  ಸೂಕ್ತ ದಾಖಲೆಗಳನ್ನು ದೃಢೀಕರಿಸಿ  ಜುಲೈ 12 ರೊಳಗೆ ಅರ್ಜಿಗಳನ್ನು  ಈ ಕಛೇರಿಗೆ ಸಲ್ಲಿಸಬಹುದು.

ನೀಟ್‌ ಅಕ್ರಮದಿಂದ ಪರೀಕ್ಷಾ ಪಾವಿತ್ರ್ಯಕ್ಕೆ ಧಕ್ಕೆ: ಸುಪ್ರೀಂ ಕೋರ್ಟ್‌

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22867628ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಹಿಂದುಳುದ ವರ್ಗಗಳ ಕಲ್ಯಾಣ ಇಲಾಖೆಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

click me!