ಬ್ಯಾಗ್‌ರಹಿತ ದಿನ ಆಚರಣೆ: ಶಾಲೆಗಳಲ್ಲಿ ‘ಸಂಭ್ರಮದ ಶನಿವಾರ’

Published : Jul 18, 2023, 11:00 PM IST
ಬ್ಯಾಗ್‌ರಹಿತ ದಿನ ಆಚರಣೆ: ಶಾಲೆಗಳಲ್ಲಿ ‘ಸಂಭ್ರಮದ ಶನಿವಾರ’

ಸಾರಾಂಶ

ಜುಲೈ 15ರಂದು ವಿಜಯಪುರ ಜಿಲ್ಲೆಯಲ್ಲಿ ಹಮ್ಮಿಕೊಂಡ ಸಂಭ್ರಮದ ಶನಿವಾರ, ಬ್ಯಾಗ್‌ರಹಿತ ದಿನ ಹಾಗೂ ಪಾಲಕರ ಸಭೆ ಯಶಸ್ವಿಯಾಗಿದ್ದು, ಪಾಲಕರು ಮಕ್ಕಳ ಶೈಕ್ಷಣಿಕ ಬೆಳವಣಿಗೆ ಜತೆಗೆ ಶಾಲೆಯ ಅಭಿವೃದ್ಧಿಯ ನಿಟ್ಟಿನಲ್ಲಿ ಚರ್ಚೆ ಮಾಡಿದ್ದು ನಿಜಕ್ಕೂ ಒಳ್ಳೆಯ ಬೆಳವಣಿಗೆ. 

ವಿಜಯಪುರ(ಜು.18):  ಪ್ರತಿ ತಿಂಗಳ ಮೂರನೇ ಶನಿವಾರ ಬ್ಯಾಗ್‌ ರಹಿತ ದಿನ ಆಚರಣೆ ಮಾಡಲಾಗುತ್ತಿದೆ. ಅಂದು ಶಾಲಾ ಬ್ಯಾಗ್‌ ಇಲ್ಲದೇ ಶಾಲೆಗೆ ಬರುವ ಮಕ್ಕಳಿಗೆ ವಿವಿಧ ರೀತಿಯ ಪಠ್ಯೇತರ ಮತ್ತು ಪಠ್ಯಪೂರಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಪಾಲಕರ ಸಭೆ ಆಯೋಜನೆ ಮಾಡಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್‌ ಶಿಂಧೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜುಲೈ 15ರಂದು ವಿಜಯಪುರ ಜಿಲ್ಲೆಯಲ್ಲಿ ಹಮ್ಮಿಕೊಂಡ ಸಂಭ್ರಮದ ಶನಿವಾರ, ಬ್ಯಾಗ್‌ರಹಿತ ದಿನ ಹಾಗೂ ಪಾಲಕರ ಸಭೆ ಯಶಸ್ವಿಯಾಗಿದ್ದು, ಪಾಲಕರು ಮಕ್ಕಳ ಶೈಕ್ಷಣಿಕ ಬೆಳವಣಿಗೆ ಜತೆಗೆ ಶಾಲೆಯ ಅಭಿವೃದ್ಧಿಯ ನಿಟ್ಟಿನಲ್ಲಿ ಚರ್ಚೆ ಮಾಡಿದ್ದು ನಿಜಕ್ಕೂ ಒಳ್ಳೆಯ ಬೆಳವಣಿಗೆ. ಕೆಲವು ಕಡೆ ದಾನಿಗಳು ಅಭಿಮಾನದಿಂದ ದೇಣಿಗೆ ನೀಡಿದ್ದಾರೆ. ಇದು ಸರ್ಕಾರಿ ಶಾಲೆಗಳತ್ತ ಪಾಲಕರ ಒಲವು ಹೆಚ್ಚುತ್ತಿರುವದನ್ನು ದೃಢೀಕರಿಸುತ್ತದೆ. ಪ್ರಸಕ್ತ ಶೈಕ್ಷಣಿಕ ಸಾಲಿನ ಮುಂಬರುವ ಸಂಭ್ರಮದ ಶನಿವಾರದಂದು ಈ ಕಾರ್ಯಕ್ರಮಗಳನ್ನು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಆಯೋಜಿಸುವಂತೆ ಅವರು ಸೂಚನೆ ನೀಡಿದ್ದಾರೆ.

ನುಡಿದಂತೆ ನಡೆಯುತ್ತಿದೆ ಕಾಂಗ್ರೆಸ್‌ ಪಕ್ಷ: ಸಚಿವ ಮಧು ಬಂಗಾರಪ್ಪ

ಸಭೆಯಲ್ಲಿ ಮಕ್ಕಳ ಕಲಿಕೆ ಹಾಗೂ ಕಲಿಕಾ ಪ್ರಗತಿ ಕುರಿತು ಪಾಲಕರೊಡನೆ ಸಮಗ್ರ ಚರ್ಚೆ ನಡೆಸಲಾಯಿತು. ವಿದ್ಯಾರ್ಥಿಗಳ ಉತ್ತಮ ಬರಹ, ಚಿತ್ರಕಲೆ ಹಾಗೂ ವಿವಿಧ ರಚನಾತ್ಮಕ ಚಟುವಟಿಕೆಗಳ ಒಳಗೊಂಡ ಕೃತಿ ಸಂಪುಟವನ್ನು ಪಾಲಕರಿಗೆ ಪ್ರದರ್ಶನ ಮಾಡಲಾಯಿತು. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಪಾಲಕರು ಮನೆಯಲ್ಲಿ ಕೈಗೊಳ್ಳುವ ಚಟುವಟಿಕೆಗಳ ಕುರಿತು ಮಾಹಿತಿ ಒದಗಿಸಲಾಯಿತು. ವೈಯಕ್ತಿಕ ಶುಚಿತ್ವ, ಶಿಸ್ತು ಮತ್ತು ನೈರ್ಮಲ್ಯಕ್ಕೆ ಆದ್ಯತೆ ನೀಡುವಂತೆ ಮಕ್ಕಳನ್ನು ಪ್ರೇರೇಪಿಸಲು ಪಾಲಕರಿಗೆ ಅರಿವು ಮೂಡಿಸಲಾಯಿತು.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಏಕಕಾಲಕ್ಕೆ ಜರುಗಿದ ಈ ವಿಶೇಷ ಪಾಲಕರ ಸಭೆಯಲ್ಲಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೆಲವು ಶಾಲೆಗಳಲ್ಲಿ ಮಕ್ಕಳಿಗಾಗಿ ವಿಶೇಷ ಕ್ವಿಜ್‌, ಮಿಮಿಕ್ರಿ, ಭಾಷಣ ಸೇರಿದಂತೆ ವಿವಿಧ ರೀತಿಯ ಚಟುವಟಿಕೆಗಳು ಮಕ್ಕಳಲ್ಲಿ ಹುದುಗಿರುವ ಸೂಪ್ತ ಪ್ರತಿಭೆಗೆ ನೀರೆರೆದು ಪೋಷಿಸಬೇಕು. ಜಿಲ್ಲೆಯ ಕೆಲ ಶಾಲೆಗಳಲ್ಲಿ ಎಸ್‌ಡಿಎಂಸಿ ಸದಸ್ಯರು ಮತ್ತು ಪಾಲಕರು ಮಕ್ಕಳಿಗೆ ಊಟದ ತಟ್ಟೆಗಳನ್ನು, ಗ್ಲಾಸಗಳನ್ನು ಗೌರವ ರೂಪದ ದೇಣಿಗೆ ನೀಡಿದರು. ಹಲವೆಡೆ ಮಕ್ಕಳಿಗೆ ವಿವಿಧ ರೀತಿಯ ಸಿಹಿ ತಿನಿಸು, ಹಣ್ಣು-ಹಂಪಲುಗಳನ್ನು ವಿತರಿಸಿ ಸಂಭ್ರಮದ ಶನಿವಾರವನ್ನು ಅಕ್ಷರಶಃ ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಪಾಲಕರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿ ಹಾಗೂ ಶಾಲೆಯ ಭೌತಿಕ ಸೌಲಭ್ಯಗಳ ಕುರಿತು ಚರ್ಚಿಸಿದರು. ಶಾಲೆಯ ಮೂಲಭೂತ ಸೌಕರ್ಯಗಳ ಕುರಿತು ಚರ್ಚಿಸುವುದರೊಂದಿಗೆ ಅವುಗಳನ್ನು ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಸಮುದಾಯದ ಸಹಭಾಗಿತ್ವ ಪಾಲಕರಿಗೆ ತಿಳಿಸಲಾಯಿತು.

ಜುಲೈ ತಿಂಗಳ ಮೂರನೇ ಶನಿವಾರ ಜಿಲ್ಲೆಯ ಒಟ್ಟು 1998 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಪಾಲಕರ ಸಭೆ ನಡೆಸಲಾಯಿತು. ಮಕ್ಕಳ ದಾಖಲಾತಿ 252389 ಇದ್ದು, ಸಭೆಯಲ್ಲಿ ಜಿಲ್ಲಾದ್ಯಾಂತ 90575ಕ್ಕೂ ಹೆಚ್ಚು ಪಾಲಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಶಿಗ್ಗಾಂವಿ ಕ್ಷೇತ್ರ ಶಿಕ್ಷಣ ಕಾಶಿಯಾಗಿಸುವೆ: ಮಾಜಿ ಸಿಎಂ ಬೊಮ್ಮಾಯಿ

ಪ್ರತಿ ತಾಲೂಕಿನಲ್ಲಿ ಅಧಿಕಾರಿಗಳು ಮತ್ತು ಹಿರಿಯ ಉಪನ್ಯಾಸಕರು ಮತ್ತು ಉಪನ್ಯಾಸಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳು, ಬಿಆರ್‌ಪಿ, ಸಿಆರ್‌ಪಿ ಅವರು ನಿಯೋಜಿಸಿದ ಶಾಲೆಗಳಿಗೆ ಭೇಟಿ ನೀಡಿ, ಸಭೆಯಲ್ಲಿ ಪಾಲ್ಗೊಂಡು ಪಾಲಕರ ಸಭೆಯನ್ನು ಯಶಸ್ವಿಗೊಳಿಸಿದ್ದಾರೆ ಎಂದು ಜಿಲ್ಲಾ ಪಂಚಾಯತಿಯ ಪ್ರಕಟಣೆ ತಿಳಿಸಿದೆ.

ಸಂಭ್ರಮದ ಶನಿವಾರದ ಅಂಗವಾಗಿ ಜಿಲ್ಲೆಯಲ್ಲಿ ಏರ್ಪಡಿಸಿದ ಕಾರ್ಯಕ್ರಮಗಳಲ್ಲಿ ಶಾಲೆಯಲ್ಲಿ ದಾಖಲಾದ ಮಗು ಶಾಲೆಯಿಂದ ಹೊರಗುಳಿಯಬಾರದು ಎಂಬ ಇಲಾಖೆಯ ಸದಾಶಯಕ್ಕೆ ಪಾಲಕರು ಮತ್ತು ಸಮುದಾಯ ಕೈಜೋಡಿಸುವ ಮೂಲಕ ಮಕ್ಕಳ ಶೈಕ್ಷಣಿಕ ಅಭ್ಯುದಯಕ್ಕೆ ಸಹಕರಿಸಬೇಕೆಂದು ಮನವಿ ಮಾಡಲಾಯಿತು. ಮಕ್ಕಳನ್ನು ಮನೆಗೆಲಸಕ್ಕೆ ಸಿಮೀತಗೊಳಿಸದೇ ಶಾಲೆಯ ಮನೆಪಾಠವನ್ನು ನಿಯಮಿತವಾಗಿ ಮಾಡುವುದನ್ನು ಖಚಿತಪಡಿಸಿಕೊಳ್ಳುವುದು ಪಾಲಕರ ಕರ್ತವ್ಯವಾಗಿದೆ. ಮಕ್ಕಳಲ್ಲಿ ಸಾಂಘಿಕ ಜೀವನದ ಮಹತ್ವ ಸಾರಲು ಮನೆಯ ಸುತ್ತಮುತ್ತಲಿನ ವಿದ್ಯಾರ್ಥಿಗಳ ಗುಂಪು ರಚನೆ ಮಾಡಿಕೊಂಡು ಓದಿಸಲು ತಿಳಿಸಲಾಯಿತು ಅಂತ ವಿಜಯಪುರ ಜಿ.ಪಂ. ಸಿಇಒ ರಾಹುಲ್‌ ಶಿಂಧೆ ತಿಳಿಸಿದ್ದಾರೆ.

PREV
Read more Articles on
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ