ಬಳ್ಳಾರಿ: ಶಾಲೆ ಆರಂಭವಾದ ಎರಡೇ ದಿನಕ್ಕೆ ಮಕ್ಕಳಿಗೆ ಬಿಗ್‌ ಶಾಕ್..!

By Girish Goudar  |  First Published Jun 2, 2023, 11:59 AM IST

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದಲ್ಲಿರುವ ರಾಜೀವ್ ಗಾಂಧಿ ಸ್ಮಾರಕ ವಿದ್ಯಾ ಸಂಸ್ಥೆಯನ್ನ ಸೀಜ್ ಮಾಡಿದ ಬ್ಯಾಂಕ್‌ ಸಿಬ್ಬಂದಿ 


ಬಳ್ಳಾರಿ(ಜೂ.02):  ಆಡಳಿತ ಮಂಡಳಿ ಎಡವಟ್ಟಿಗೆ ಶಾಲಾ ಕಟ್ಟಡವೇ ಸೀಜ್‌ ಆದ ಪರಿಣಾಮ ಮರದಡಿ ಕುಳಿತು ಮಕ್ಕಳು ಪಾಠ ಕೇಳುವಂತ ಪರಿಸ್ಥಿತಿ ನಿರ್ಮಾಣವಾಗಿದ್ದು ಬಳ್ಳಾರಿ ಜಿಲ್ಲೆಯ ಸಿರಿಗುಪ್ಪ ಪಟ್ಟಣದಲ್ಲಿ.  ಹೌದು, ಆಡಳಿತ ಮಂಡಳಿಯವರು ಮಾಡಿದ ಸಾಲಕ್ಕೆ ಬ್ಯಾಂಕ್ ಸಿಬ್ಬಂದಿ ಶಾಲೆಯನ್ನೇ ಸೀಜ್ ಮಾಡಿದ್ದಾರೆ.  ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದಲ್ಲಿರುವ ರಾಜೀವ್ ಗಾಂಧಿ ಸ್ಮಾರಕ ವಿದ್ಯಾ ಸಂಸ್ಥೆಯನ್ನ ಬ್ಯಾಂಕ್‌ ಸಿಬ್ಬಂದಿ ಸೀಜ್ ಮಾಡಿದ್ದಾರೆ. 

Tap to resize

Latest Videos

undefined

ಶಾಲೆ ಸೀಜ್ ಆಗಿರುವ ಹಿನ್ನಲೆಯಲ್ಲಿ ಶಾಲೆಯ ಹೊರಗಡೆ ಮರದ ಕೆಳಗೆ ಕುಳಿತು ಮಕ್ಕಳು ಪಾಠ ಕೇಳುತ್ತಿದ್ದಾರೆ. ಎಂ. ಸವಿತಾ, ಎಂ ಕೃಷ್ಣಕಿಶೋರ ರೆಡ್ಡಿ, ಎಂ.ಸತ್ಯನಾರಾಣ ಸೇರಿದಂತೆ ಆಡಳಿತ ಮಂಡಳಿಯರ ಶಾಲೆಯ ಮೇಲೆ ಸಾಲವಿದೆ. ಆಂಧ್ರ ಮೂಲದ Incred Finantial Service Limited ನಿಂದ ಒಂದು ಕೋಟಿಗೂ ಅಧಿಕ ಮೊತ್ತದ ಸಾಲ ಪಡೆಯಲಾಗಿದೆ. 

ಶಾಲೆಗಳಿಗೆ ಬಳಿದಿರುವ ಕೇಸರಿ ಬಣ್ಣ ಬದಲಾಗಬೇಕು: ಸಚಿವ ಸತೀಶ್‌ ಜಾರಕಿಹೊಳಿ

ಸರಿಯಾಗಿ ಮರು ಪಾವತಿ ಮಾಡದ ಹಿನ್ನೆಲೆ ನ್ಯಾಯಲಯದಿಂದ ಆದೇಶ ತಂದು ಬ್ಯಾಂಕ್ ಸಿಬ್ಬಂದಿ ಶಾಲೆಯನ್ನ ಸೀಜ್ ಮಾಡಿದ್ದಾರೆ. ಆಡಳಿತ ಮಂಡಳಿ ಹಾಗೂ ಬ್ಯಾಂಕ್‌ನವರ ವ್ಯವಹಾರದಲ್ಲಿ ಮಕ್ಕಳು ಬೀದಿಗೆ ಬಿದ್ದಿದ್ದಾರೆ. ಮಕ್ಕಳನ್ನು ಹೊರಗಡೆ ಕೂರಿಸದೇ ಬೇರೆಡೆ ವ್ಯವಸ್ಥೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಮಕ್ಕಳಿಗೆ ಸರಿಯಾದ ವ್ಯವಸ್ಥೆ ಮಾಡದಿದ್ದರೆ ಕ್ರಮದ ಬಗ್ಗೆ ಎಚ್ಚರಿಕೆ ನೀಡಿದೆ. ಈ ಮಧ್ಯೆ ಶಾಲೆ ಆಡಳಿತ ಮಂಡಳಿ ವಿರುದ್ಧ ಪೋಷಕರು ಹಿಡಿ ಶಾಪ ಹಾಕುತ್ತಿದ್ದಾರೆ. 

click me!