ಬಂಟ್ವಾಳ: ಬಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ದಾಸೋಹ ಸಿಬ್ಬಂದಿ ಜೀವ! ಸಿಎಂ ಮೆಚ್ಚುಗೆ

Kannadaprabha News   | Kannada Prabha
Published : Aug 14, 2026, 07:03 AM IST
Bantwal Class 5 Boy Saves School Cook From Grater Mishap CM praised him rav

ಸಾರಾಂಶ

ಬಂಟ್ವಾಳದ ನರಿಕೊಂಬು ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮನ್ವಿತ್, ಅಕ್ಷರ ದಾಸೋಹ ಸಿಬ್ಬಂದಿಯ ಕೈಬೆರಳು ಕಾಯಿ ತುರಿಯುವ ಯಂತ್ರಕ್ಕೆ ಸಿಲುಕಿದಾಗ ತಕ್ಷಣ ಸ್ವಿಚ್ ಆಫ್ ಮಾಡಿ ದೊಡ್ಡ ಅನಾಹುತ ತಪ್ಪಿಸಿದ್ದಾನೆ. ಈ ಬಾಲಕನ ಸಮಯಪ್ರಜ್ಞೆ ಮತ್ತು ಧೈರ್ಯಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೆಚ್ಚುಗೆ.

ಬಂಟ್ವಾಳ: ಶಾಲೆಯ ಅಕ್ಷರ ದಾಸೋಹ ಸಿಬ್ಬಂದಿಯ ಕೈಬೆರಳು ವಿದ್ಯುತ್ ಚಾಲಿತ ಕಾಯಿ ತುರಿಯುವ ಯಂತ್ರದಲ್ಲಿ ಸಿಲುಕಿಕೊಂಡಾಗ ತಕ್ಷಣ 5ನೇ ತರಗತಿ ವಿದ್ಯಾರ್ಥಿ ತೋರಿದ ಸಮಯಪ್ರಜ್ಞೆ ಹಾಗೂ ಧೈರ್ಯವು ಸಂಭವಿಸಬಹುದಾಗಿದ್ದ ಅನಾಹುತ ತಪ್ಪಿಸಿದೆ.

ವಿದ್ಯಾರ್ಥಿ ಮನ್ವಿತ್‌ ಧೈರ್ಯಕ್ಕೆ ಡಿ.ಕೆ.ಶಿವಕುಮಾರ್ ಮೆಚ್ಚುಗೆ

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮನ್ವಿತ್‌ ಧೈರ್ಯಕ್ಕೆ ಡಿ.ಕೆ.ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶಾಲಾ ಶಿಕ್ಷಕ ವೃಂದ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಸಹ ಶ್ಲಾಘಿಸಿದ್ದಾರೆ. ಶಾಲೆಯ ಅಕ್ಷರ ದಾಸೋಹ ಸಿಬ್ಬಂದಿ ಕರ್ತವ್ಯ ನಿರತರಾಗಿದ್ದ ವೇಳೆ ವಿದ್ಯುತ್ ಚಾಲಿತ ಕಾಯಿ ತುರಿಯುವ ಯಂತ್ರದಲ್ಲಿ ಆಕಸ್ಮಿಕವಾಗಿ ಅವರ ಕೈಬೆರಳು ಸಿಲುಕಿಕೊಂಡಿದೆ. ನೋವಿನಿಂದ ಅವರು ಕಿರುಚಿಕೊಂಡಾಗ, ಶಾಲಾ ಅಂಗಳದಲ್ಲಿ ಆಟವಾಡುತ್ತಿದ್ದ ಮನ್ವಿತ್ ತಕ್ಷಣ ವಿದ್ಯುತ್ ಸ್ವಿಚ್ ಆಫ್ ಮಾಡಿದ್ದಾನೆ. ಇದರಿಂದ ಮತ್ತಷ್ಟು ಅಪಾಯ ಸಂಭವಿಸುವುದನ್ನು ತಪ್ಪಿಸಿದ್ದಾನೆ.

ಬಾಲಕನ ಸಮಯಪ್ರಜ್ಞೆಗೆ ಸಿಎಂ ಎಕ್ಸ್ ಖಾತೆ ಪೋಸ್ಟ್

ಬಾಲಕನ ಸಮಯಪ್ರಜ್ಞೆ, ಧೈರ್ಯ ಮತ್ತು ಸೂಕ್ತ ನಿರ್ಧಾರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಬಾಲಕನ ಧೈರ್ಯ ಮತ್ತು ಸಮಯಪ್ರಜ್ಞೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಶ್ಲಾಘಿಸಿದ್ದಾರೆ. ಬಾಲಕನ ಕಾರ್ಯ ನಿಜಕ್ಕೂ ಹೃದಯಸ್ಪರ್ಶಿ ಹಾಗೂ ಪ್ರಶಂಸನೀಯವಾಗಿದ್ದು, ಆತನ ಮುಂದಿನ ಭವಿಷ್ಯ ಉಜ್ವಲವಾಗಲಿ ಮತ್ತು ಸಮಾಜದ ಒಳಿತಿಗಾಗಿ ಸದಾ ಸ್ಪಂದಿಸುವ ಉತ್ತಮ ಪ್ರಜೆಯಾಗಿ ಬೆಳೆದು ನಾಡಿಗೆ ಕೀರ್ತಿ ತರಲಿ ಎಂದು ಅವರು ಹಾರೈಸಿದ್ದಾರೆ.

ಶಾಲಾ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಅಂಚನ್ ಹಾಗೂ ಸದಸ್ಯರು ವಿದ್ಯಾರ್ಥಿಯ ಸಮಯಪ್ರಜ್ಞೆಯನ್ನು ಕೊಂಡಾಡಿದ್ದಾರೆ. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನೋಣಯ್ಯ ನಾಯ್ಕ್ ಹಾಗೂ ಸಿಆರ್‌ಪಿ ಜ್ಯೋತಿ ಶಾಲೆಗೆ ಭೇಟಿ ನೀಡಿ ಬಾಲಕನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

PREV
Read more Articles on
click me!

Recommended Stories

ಕಾಲಿನಿಂದಲೇ ಬರೆಯುತ್ತೇನೆ, ಓದನ್ನು ಬಿಡಲ್ಲ; 13 ವರ್ಷದ ಲಕ್ಷ್ಮಿಯ ಛಲಕ್ಕೆ ಭಾರೀ ಮೆಚ್ಚುಗೆ
ವಿಶ್ವವನ್ನೇ ಬೆರಗುಗೊಳಿಸಿದ ಕೈಬರಹ! ಮುತ್ತು ಪೋಣಿಸಿಟ್ಟಂತೆ ಬರೆದಾಕೆಗೆ ವಿಶ್ವ ದಾಖಲೆಯ ಮತ್ತೊಂದು ಕಿರೀಟ