ರಾಜ್ಯದಲ್ಲಿ ಅದ್ಧೂರಿ ಕೆಂಪೇಗೌಡರ ದಿನಾಚರಣೆಗೆ ಬಿಬಿಎಂಪಿಯಿಂದ 2.40 ಕೋಟಿ ರೂ. ಖರ್ಚು ಮಾಡಿಸುತ್ತಿರುವ ಸರ್ಕಾರ!

By Sathish Kumar KH  |  First Published Jun 24, 2024, 12:34 PM IST

ರಾಜ್ಯದಲ್ಲಿ ಅದ್ಧೂರಿಯಾಗಿ ನಾಡಪ್ರಭು ಕೆಂಪೇಗೌಡರ ದಿನಾಚರಣೆ ಮಾಡಬೇಕೆಂದು ಸರ್ಕಾರವು ಬಿಬಿಎಂಪಿಯಿಂದ 2.40 ಕೋಟಿ ರೂ. ಖರ್ಚು ಮಾಡಿಸುತ್ತಿದೆ.


ಬೆಂಗಳೂರು (ಜೂ.24): ರಾಜ್ಯದಲ್ಲಿ ಎಲ್ಲ ಶಾಲೆ ಕಾಲೇಜುಗಳಲ್ಲಿ ನಾಡಪ್ರಭು ಕೆಂಪೇಗೌಡರ ಕುರಿತ ಚರ್ಚಾ ಸ್ಪರ್ಧೆ ಆಯೋಜನೆಯನ್ನು ಮಾಡಲು ರಾಜ್ಯದ 240 ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಘೋಷಣೆ ಮಾಡಿದಂತೆ ತಲಾ 1 ಲಕ್ಷ ರೂ. ಅನುದಾನ ನೀಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಆದರೆ, ಕೆಂಪೇಗೌಡರ ದಿನಾಚರಣೆಗೆ ಬಿಬಿಎಂಪಿಯಿಂದ 2.40 ಕೋಟಿ ರೂ. ಖರ್ಚು ಮಾಡಿಸುತ್ತಿರುವುದಕ್ಕೆ ಸಾರ್ವಜನಿಕರಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಎಲ್ಲ 240 ತಾಲೂಕುಗಳ ಶಾಲಾ ಕಾಲೇಜುಗಳಲ್ಲಿ ಕೆಂಪೇಗೌಡರ ಕುರಿತ ಚರ್ಚಾ ಸ್ಪರ್ಧೆಯನ್ನು ಆಯೋಜನೆ ಮಾಡುವುದಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಖಾತೆಗೆ ತಲಾ 1 ಲಕ್ಷ ರೂ. ಹಣ ನೀಡಲಾಗುವುದು ಎಂದು ಘೋಷಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಈಗ ರಾಜ್ಯವ್ಯಾಪಿ ಕೆಂಪೇಗೌಡರ ಕುರಿತ ಚರ್ಚಾ ಸ್ಪರ್ಧೆ ಆಯೋಜನೆ ಮಾಡಲು ಅನುಕೂಲ ಆಗುವಂತೆ ಬಿಇಒ ಇಲಾಖಾ ಅಧಿಕಾರಿಗಳ ಖಾತೆಗೆ ಹಣ ಹಂಚಿಕೆ ಮಾಡಬೇಕಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸೂಚನೆಯಿಂದ 240 ತಾಲೂಕುಗಳಿಗೆ ಹಣ ವರ್ಗಾವಣೆ ಮಾಡುವುದಕ್ಕೆ 2.40 ಕೋಟಿ ರೂ. ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸೂಚನೆ ನೀಡಲಾಗಿದೆ.

Latest Videos

undefined

ಗ್ಯಾರಂಟಿ ಯೋಜನೆಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್‌

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯವ್ಯಾಪಿ ಅದ್ದೂರಿ ಕೆಂಪೇಗೌಡ ಜಯಂತಿ  ಆಚರಣೆಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕೆಂಪೇಗೌಡರ ಜಯಂತಿ ಆಚರಣೆಗೆ ಬಿಬಿಎಂಪಿಯಿಂದ ಹಣ ಬಿಡುಗಡೆ ಮಾಡುವಂತೆ ಸೂಚನೆ ನೀಡಿದ್ದರು. ಬೆಂಗಳೂರು ಜನರ ತೆರಿಗೆ ದುಡ್ಡಲ್ಲಿ ರಾಜ್ಯ ವ್ಯಾಪಿ ಕೆಂಪೇಗೌಡ ಜಯಂತಿ ಆಚರಣೆಗೆ ಬಿಬಿಎಂಪಿ ಸಜ್ಜು ಮಾಡಿಕೊಂಡಿದೆ. ಈಗ ಬರೋಬ್ಬರಿ 2.40 ಕೋಟಿ ರೂ. ಬಿಡುಗಡೆ ಮಾಡಿರುವ ಸರ್ಕಾರದಿಂದ ಬಿಬಿಎಂಪಿಗೆ ಸೂಚನೆ ನೀಡಲಾಗಿದೆ.

ಬೆಂಗಳೂರು ಹೊರತಾಗಿ ರಾಜ್ಯದ ಪ್ರತಿಯೊಂದು ತಾಲ್ಲೂಕುಗಳಲ್ಲೂ ಕೆಂಪೇಗೌಡ ಜಯಂತಿ ಆಚರಣೆ ಮಾಡಲು ಬಿಬಿಎಂಪಿಯಿಂದಲೇ ದೊಡ್ಡ ಮೊತ್ತದ ಅನುದಾನ‌ ಬಿಡುಗಡೆ ಮಾಡಬೇಕಿದೆ. ರಾಜ್ಯದ 240 ತಾಲ್ಲೂಕುಗಳಲ್ಲಿ ಕೆಂಪೇಗೌಡ ಆಚರಣೆಗೆ ಬೆಂಗಳೂರು ಮಹಾನಗರ ಪಾಲಿಕೆ ದುಡ್ಡು ಕೊಡಬೇಕಿದೆ. ಆದರೆ, ಬೆಂಗಳೂರಿನ ಜನತೆಯ ತೆರಿಗೆ ಹಣವನ್ನು ಇತರೆ ಜಿಲ್ಲೆಗಳಲ್ಲಿ ಕೆಂಪೇಗೌಡ ಜಯಂತಿ ಆಚರಣೆಗೆ ಯಾಕೆ ಹಂಚಿಕೆ ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ. ಒಕ್ಕಲಿಗರ ಓಲೈಕೆಗೆ ಬೆಂಗಳೂರು ಅಭಿವೃದ್ಧಿಗೆ ಬಳಸಬೇಕಿದ್ದ ಹಣವನ್ನು ಬೇರೆ ಜಿಲ್ಲೆಗಳಿಗೆ ಬಳಕೆ ಮಾಡುತ್ತಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಸಲಿಂಗ ಕಾಮ ಕೇಸಲ್ಲಿ ಸೆಂಟ್ರಲ್ ಜೈಲ್ ಸೇರಿದ ಸೂರಜ್ ರೇವಣ್ಣಗೆ ಲಿಂಗತ್ವ, ಲೈಂಗಿಕ ಸಾಮರ್ಥ್ಯ ಪರೀಕ್ಷೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬಿಬಿಎಂಪಿಗೆ ತಾಲ್ಲೂಕುವಾರು ಹಣ ಬಿಡುಗಡೆ ಮಾಡುವಂತೆ ಪತ್ರ ಬರೆಯಲಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಜೂ. 19ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಪತ್ರವನ್ನು ಬರೆದು ಕೂಡಲೇ ಹಣ ಬಿಡುಗಡೆ ಮಾಡುವಂತೆ ಸೂಚನೆ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಿಬಿಎಂಪಿ ಬರೆದಿರುವ ಪತ್ರ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದ್ದು, ಬಿಬಿಎಂಪಿಗೆ 2.40 ಕೋಟಿ ರೂ. ಆರ್ಥಿಕ ಹೊರೆ ಉಂಟಾಗಲಿದೆ ಎಂಬುದು ಕಂಡುಬಂದಿದೆ.

click me!