1ರಿಂದ 5ನೇ ತರಗತಿ ಪ್ರಾರಂಭ ಯಾವಾಗ? ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಸಚಿವ ನಾಗೇಶ್

By Suvarna News  |  First Published Sep 19, 2021, 10:10 PM IST

* ರಾಜ್ಯದಲ್ಲಿ 1ರಿಂದ 5ರ ವರೆಗೆ ತರಗತಿಗಳ ಪ್ರಾರಂಭದ ಬಗ್ಗೆ ಶಿಕ್ಷಣ ಸಚಿವರ ಮಾತು
* 1ರಿಂದ 5ನೇ ತರಗತಿ ಸದ್ಯಕ್ಕಿಲ್ಲ ಎಂದ ಶಿಕ್ಷಣ ಸಚಿವ ಬಿಸಿ ನಾಗೇಶ್
* ಅಧಿವೇಶನದ ಬಳಿಕ ಚರ್ಚಿಸಿ ಅಂತಿಮ ನಿರ್ಧಾರ


ರಾಣೆಬೆನ್ನೂರು, (ಸೆ.19): ರಾಜ್ಯದಲ್ಲಿ 1ರಿಂದ 5ರ ವರೆಗೆ ತರಗತಿಗಳನ್ನು ಆರಂಭಿಸುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟಪಡಿಸಿದರು.

ರಾಣೆಬೆನ್ನೂರು ತಾಲೂಕಿನ ಸುಕ್ಷೇತ್ರ ದೇವರಗುಡ್ಡದಲ್ಲಿ ಇಂದು (ಸೆ.19) ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನೆರೆ ರಾಜ್ಯ ಕೇರಳದಲ್ಲಿ ಕೋವಿಡ್‌, ನಿಫಾ ರೋಗ ಹೆಚ್ಚಾಗುತ್ತಿದ್ದು, ಸೋಂಕಿತರ ಸಂಖ್ಯೆ ಅಧಿಕಗೊಳ್ಳುತ್ತಿದೆ. ಈ ಕಾರಣದಿಂದ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಸದ್ಯಕ್ಕೆ ಶಾಲೆ ತೆರೆಯುವುದು ಸಾಧ್ಯವಿಲ್ಲ ಎಂದರು.

Tap to resize

Latest Videos

ಶಾಲಾ ಶುಲ್ಕ 15% ಮಾತ್ರ ಕಡಿತ..!

ಪುಟ್ಟ ಮಕ್ಕಳನ್ನು ಕೋವಿಡ್‌, ಡೆಂಗ್ಯೂ ಸಹಿತ ಇತರ ಮಾರಕ ರೋಗಗಳಿಂದ ರಕ್ಷಿಸುವ ಸಲುವಾಗಿ ತಾಂತ್ರಿಕ ತಜ್ಞರು, ಶಿಕ್ಷಣ, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ಅಧಿವೇಶನದ ಬಳಿಕ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಹೇಳಿದರು.

ಈಗಾಗಲೇ 6ರಿಂದ 12ನೇ ತರಗತಿಗಳು ಪ್ರಾರಂಭವಾಗಿವೆ. ಆದ್ರೆ, 1ರಿಂದ 5ರ ವರೆಗೆ ತರಗತಿಗಳು ಆರಂಭವಾಗಿಲ್ಲ. ಅಧಿವೇಶನದ ಬಳಿಕ 1ರಿಂದ 5ನೇ ತರಗತಿ ಆರಂಭಿಸುವ ಬಗ್ಗೆ ಸಿಎಂ ಸ್ಪಷ್ಟ ಮಾಹಿತಿ ನೀಡಲಿದ್ದಾರೆ.

click me!