ರಾಜ್ಯದ 6 ಇಂಜಿನಿಯರಿಂಗ್ ಕಾಲೇಜು ರದ್ದು, ಈ ಕಾಲೇಜುಗಳಲ್ಲಿ ಅಡ್ಮಿಷನ್ ಮಾಡಿಸದಂತೆ ಮನವಿ

By Suvarna NewsFirst Published Aug 20, 2021, 9:58 PM IST
Highlights

* ರಾಜ್ಯದ ಆರು ಇಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ
* ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಆದೇಶ
* ಪ್ರವೇಶ ಪಡೆಯದಂತೆ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಮನವಿ

ಬೆಳಗಾವಿ, (ಆ.20): ರಾಜ್ಯದ 6 ಇಂಜಿನಿಯರಿಂಗ್​ ಕಾಲೇಜುಗಳಿಗೆ ಬೀಗ ಹಾಕಲು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಿರ್ಧಾರ ಮಾಡಿದೆ.

ಗುಣಮಟ್ಟದ ಬೋಧನೆಯಲ್ಲಿ ವಿಫಲವಾಗಿರುವ ಹಾಗೂ ಕಲಿಕೆಗೆ ಅಗತ್ಯ ಮೂಲಸೌಕರ್ಯಗಳ ಕೊರತೆ ಹೊಂದಿರುವ ರಾಜ್ಯದ 6 ಇಂಜಿನಿಯರಿಂಗ್ ಕಾಲೇಜುಗಳನ್ನು ಮುಚ್ಚಲು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಆದೇಶ ಹೊರಡಿಸಿದೆ.

ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ನೀಡಿದ ಶಿಕ್ಷಣ ಸಚಿವ ನಾಗೇಶ್

ವಿಶ್ವವಿದ್ಯಾಲಯದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೀಗಾಗಿ ಪ್ರಸ್ತುತ 2021-22ರ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಆರು ಕಾಲೇಜಗಳ ಸೇವೆ ಸ್ಥಗಿತವಾಗಲಿದ್ದು, ಸದರಿ ಕಾಲೇಜುಗಳ ವಿದ್ಯಾರ್ಥಿಗಳನ್ನು ಬೇರೆ ಕಾಲೇಜುಗಳಿಗೆ ವರ್ಗ ಮಾಡಲು ನಿರ್ಧಾರ ಮಾಡಲಾಗಿದೆ.

 ಅಲ್ಲದೇ 2021-22ನೇ ಸಾಲಿನ ಶೈಕ್ಷಣಿಕ ವರ್ಷದಿಂದ ರದ್ದಾಗಿರುವ ಈ ಕಾಲೇಜುಗಳಿಗೆ ಪ್ರವೇಶ ಪಡೆಯದಂತೆ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯ ಎಚ್ಚರಿಕೆ ನೀಡಿ ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. 

ರದ್ದಾದ ಇಜಿನಿಯರಿಂಗ್ ಕಾಲೇಜುಗಳು
1. ಬೆಂಗಳೂರಿನ ಆಲ್ಫಾ ಎಂಜಿನಿಯರಿಂಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ.
2. ಬೆಳಗಾವಿಯ ಶೇಖ್ ಎಂಜಿನಿಯರಿಂಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ.
3. ಬೆಂಗಳೂರಿನ ಇಸ್ಲಾಮಿಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ.
4. ಚಾಮರಾಜನಗರದ ಏಕಲವ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ.
5. ಕೆಜಿಎಫ್‌ನ ಶ್ರೀ ವಿನಾಯಕ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ.
6. ಬೆಂಗಳೂರಿನ ಬಿಟಿಎಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ

click me!