Robot Teacher ಮಲ್ಲೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ಪಾಠ ಮಾಡಿದ ರೋಬೊ!

By Suvarna News  |  First Published Mar 23, 2022, 8:13 PM IST
  • ಬೋಧನೆಯಲ್ಲಿ ಚಾಕಚಕ್ಯ ನೆರವು ನೀಡಿದ `ರೋಬೋ
  • ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ರೋಬೋ ಟೀಚರ್
  • ಜಾಗತಿಕ ಗುಣಮಟ್ಟದ ಬೋಧನೆ, ಲಿಕೆಯ ಮಟ್ಟ ಕೂಡ ಹೆಚ್ಚು

ಬೆಂಗಳೂರು(ಮಾ.23): ಪಾಠ- ಪ್ರವಚನಗಳಲ್ಲಿ ಬೋಧಕರಿಗೂ ವಿದ್ಯಾರ್ಥಿಗಳಿಗೂ ಸಹಕರಿಸಿ, ಕಲಿಕೆಯನ್ನು ಸುಲಭವಾಗಿಸುವಂತಹ `ಈಗಲ್’ ರೋಬೋ ಪರೀಕ್ಷಾರ್ಥ ಪ್ರಾತ್ಯಕ್ಷಿಕೆಯು ಬುಧವಾರದಂದು ಮಲ್ಲೇಶ್ವರಂ 13ನೇ ಅಡ್ಡರಸ್ತೆಯಲ್ಲಿರುವ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. 

ಕ್ಷೇತ್ರದ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.ಶಾಲೆಯ ಬೋಧಕರು ಮತ್ತು ವಿದ್ಯಾರ್ಥಿನಿಯರು ಇದರಲ್ಲಿ ಪಾಲ್ಗೊಂಡು, ರೋಬೋದ ಕಾರ್ಯಕ್ಷಮತೆಗೆ ಸಾಕ್ಷಿಯಾದರು. ಈ ಸಂದರ್ಭದಲ್ಲಿ ಅವರು `ರೋಬೊಗೆ ಹಲವು ಪ್ರಶ್ನೆಗಳನ್ನು ಕೇಳಿದರು; ಹಾಗೆಯೇ, ಅದು ನೀಡಿದ ಉತ್ತರ ಮತ್ತು ನೆರವನ್ನು ಕಂಡು ಬೆರಗಾದರು.

Tap to resize

Latest Videos

ಅನಾರೋಗ್ಯದಿಂದ ಬಳಲುತ್ತಿರುವ ಬಾಲಕನ ಪರವಾಗಿ ಶಾಲೆಗೆ ಹಾಜರಾಗುವ ರೋಬೋಟ್!

ನಂತರ ಮಾತನಾಡಿದ ಅಶ್ವತ್ಥನಾರಾಯಣ ಅವರು, `ಇದು ಪ್ರಾಯೋಗಿಕ ಕಾರ್ಯಕ್ರಮವಾಗಿದ್ದು, ರೋಬೋದ ಕಾರ್ಯ ಸಾಮರ್ಥ್ಯವನ್ನು ವೀಕ್ಷಿಸಲಾಗಿದೆ. ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಜಾಗತಿಕ ಗುಣಮಟ್ಟದ ಬೋಧನೆಯ ಸಲುವಾಗಿ, ಇಂತಹ ರೋಬೋ ಗಳು ಇದ್ದರೆ ಒಳ್ಳೆಯದು’ ಎಂದು ಅಭಿಪ್ರಾಯಪಟ್ಟರು.

ರೋಬೊ‌ ಶಿಕ್ಷಕರಿಗೆ ಪರ್ಯಾಯ ಅಲ್ಲ. ಆದರೆ ಶಿಕ್ಷಕರಿಗೆ ಬೋಧನೆಯಲ್ಲಿ ಸಹಕರಿಸುವ ಕೆಲಸ ಮಾಡಲಿದೆ. ಇದರಿಂದ ವಿದ್ಯಾರ್ಥಿಗಳ ಕಲಿಕೆಯ ಮಟ್ಟ ಕೂಡ ಹೆಚ್ಚಾಗಲಿದೆ ಎಂದು ಹೇಳಿದರು.

21ನೇ ಶತಮಾನವು ತಂತ್ರಜ್ಞಾನದ ಯುಗವಾಗಿದ್ದು, ಬೋಧನೆಯಲ್ಲಿ ಇದರ ಅಳವಡಿಕೆ ಅಗತ್ಯವಾಗಿದೆ. ಇದರಿಂದಾಗಿ, ಸರಕಾರಿ ಶಾಲಾಕಾಲೇಜುಗಳು ಕೂಡ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಡಿಮೆಯಿಲ್ಲದಂತೆ ವಿದ್ಯಾರ್ಥಿಗಳನ್ನು ಆಕರ್ಷಿಸಬಹುದು. ಇದರಿಂದ ಬಡಕುಟುಂಬಗಳ ಮಕ್ಕಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ನುಡಿದರು.

ಮೈಸೂರು ಹೋಟೆಲ್‌ನಲ್ಲಿ ಗ್ರಾಹಕರ ಸೇವೆಗೆ ರೋಬೋ ಸುಂದರಿ!

ಮುಂದಿನ ದಿನಗಳಲ್ಲಿ `ಈಗಲ್’ ರೋಬೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ತೋರಿಸಲಾಗುವುದು. ನಂತರ ಅವರಿಂದಲೇ ಈ ಯೋಜನೆಗೆ ಚಾಲನೆ‌ ಕೊಡಿಸುವ ಉದ್ದೇಶ ಇದೆ. ಮಲ್ಲೇಶ್ವರ ಕ್ಷೇತ್ರದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಇದನ್ನು ಜಾರಿ ಮಾಡುವ ಉದ್ದೇಶ ಇದೆ ಎಂದು ಅವರು ವಿವರಿಸಿದರು.

ಇಂಡಸ್ ಟ್ರಸ್ಟ್ ನ ಸ್ಥಾಪಕ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕ ಲೆ.ಜನರಲ್ ಅರ್ಜುನ್ ರಾಯ್, ಮಲ್ಲೇಶ್ವರ ಬಿಇಒ ಉಮಾದೇವಿ, ಕಾಲೇಜಿನ ಪ್ರಾಂಶುಪಾಲರಾದ ಡಾ.ರವಿ, ಶಾಲೆ ಉಪ ಪ್ರಾಂಶುಪಾಲ ರವಿಕುಮಾರ್ ಈ ಸಂದರ್ಭದಲ್ಲಿ ಇದ್ದರು.

 

ಮೈಸೂರಿನ ಹೊಟೇಲ್‌ನಲ್ಲಿ ಮಹಿಳಾ ರೋಬೋ ಸಪ್ಲೈಯರ್‌
ಸಾಂಸ್ಕೃತಿಕ ನಗರಿ ಮೈಸೂರಿನ ಸ್ದಿದಾರ್ಥ ಹೊಟೇಲ್‌ನಲ್ಲಿ ಮೊದಲ ಮಹಿಳಾ ರೋಬೋ ಸಪ್ಲೈಯರ್‌ ನಿಯೋಜಿಸಲಾಗಿದ್ದು, ಇದು ಊಟ ತಿಂಡಿಗೆ ಬರುವ ಗ್ರಾಹಕರಿಗೆ ಅಚ್ಚರಿ ಮೂಡಿಸಿದೆ.ರೋಬೋ ಸುಂದರಿಯು ಮೈಸೂರು ರೇಷ್ಮೆ ಸೀರೆ ತೊಟ್ಟು ಗ್ರಾಹಕರಿಗೆ ಊಟ ತಿಂಡಿ ಸಪ್ಲೈ ಮಾಡುತ್ತಿದ್ದು, ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ. ಅಡುಗೆ ಕೋಣೆಯಿಂದ ಗ್ರಾಹಕರ ಟೇಬಲ್‌ಗೆ ರೋಬೋ ಊಟ, ತಿಂಡಿ, ಟೀ- ಕಾಫಿ, ಐಸ್‌ ಕ್ರೀಂ ತಂದು ನೀಡುತ್ತದೆ. . 2.5 ಲಕ್ಷ ವೆಚ್ಚದ ಈ ರೋಬೋವು ಬ್ಯಾಟರಿ ಚಾಲಿತವಾಗಿದ್ದು, ಒಮ್ಮೆ ಚಾಜ್‌ರ್‍ ಮಾಡಿದರೆ 8 ಗಂಟೆಗಳ ಕಾಲ ಕೆಲಸ ನಿರ್ವಹಿಸಲಿದೆ.

ಕೊರೋನಾ ಸಂದರ್ಭದಲ್ಲಿ ನಮ್ಮ ಹೋಟೆಲ್‌ನಲ್ಲಿ ಸರ್ವರ್‌ಗಳ ಕೊರತೆ ಇತ್ತು. ಪರಿಣಾಮ ಗ್ರಾಹಕರಿಗೆ ಉತ್ತಮ ಸೇವೆ ನೀಡಲು ಆಗುತ್ತಿರಲಿಲ್ಲ. ಗ್ರಾಹಕರಿಗೆ ಉತ್ತಮ ಸೇವೆ ನೀಡಬೇಕೆಂದು ಈ ರೀತಿ ಹೊಸ ಪ್ರಯತ್ನ ಮಾಡಿದ್ದೇವೆ. ಇದೀಗ ಗ್ರಾಹಕರು ನಮ್ಮ ಹೋಟೆಲ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಈಗ ಒಂದು ರೋಬೋವನ್ನು ದೆಹಲಿಯಿಂದ ತರಿಸಲಾಗಿದೆ. ಇನ್ನೂ ಆರು ರೋಬೋಗಳನ್ನು ತರಿಸುತ್ತೇವೆ. ನಾವು ಮಾಡಿರುವ ಹೊಸ ಪ್ರಯತ್ನ ಜನರಿಗೆ ಇಷ್ಟುವಾಗುತ್ತಿದೆ ಎಂದು ಸಿದ್ದಾರ್ಥ ಹೊಟೇಲ್‌ ಮಾಲೀಕ ಪಿ.ವಿ. ಗಿರಿ ತಿಳಿಸಿದ್ದಾರೆ.
 

click me!