ಬೆಂಗಳೂರು ಉತ್ತರ ವಿವಿ ಕ್ಯಾಂಪಸ್ ನಿರ್ಮಾಣಕ್ಕೆ ಚಾಲನೆ, 172 ಎಕರೆ ಪ್ರದೇಶದಲ್ಲಿ ನಿರ್ಮಾಣ

Published : Mar 20, 2023, 06:30 PM IST
ಬೆಂಗಳೂರು ಉತ್ತರ ವಿವಿ ಕ್ಯಾಂಪಸ್ ನಿರ್ಮಾಣಕ್ಕೆ ಚಾಲನೆ, 172 ಎಕರೆ ಪ್ರದೇಶದಲ್ಲಿ ನಿರ್ಮಾಣ

ಸಾರಾಂಶ

ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ವ್ಯಾಪ್ತಿಯುಳ್ಳ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ನಿರ್ಮಾಣಕ್ಕೆ ಸೋಮವಾರ ಭೂಮಿಪೂಜೆ ನೆರವೇರಿಸಲಾಗಿದೆ.

ಚಿಕ್ಕಬಳ್ಳಾಪುರ (ಮಾ.20): ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ವ್ಯಾಪ್ತಿಯುಳ್ಳ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ನಿರ್ಮಾಣಕ್ಕೆ ಸೋಮವಾರ ಭೂಮಿಪೂಜೆ ನೆರವೇರಿಸಲಾಯಿತು. ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಇದರ ನೇತೃತ್ವ ವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಈ ಮೂರು ಜಿಲ್ಲೆಗಳ ಶೈಕ್ಷಣಿಕ ಇತಿಹಾಸದಲ್ಲಿ ಇದು ಐತಿಹಾಸಿಕ ದಿನವಾಗಿದೆ. ಐದು ವರ್ಷಗಳ ಹಿಂದೆ ಆರಂಭವಾದ ಈ ವಿ.ವಿ.ಗೆ 172 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಕ್ಯಾಂಪಸ್ ನಿರ್ಮಿಸಿ, ಜ್ಞಾನ ನಗರವನ್ನು ಸೃಷ್ಟಿಸಲಾಗುವುದು" ಎಂದರು.

 ಈ ಪ್ರದೇಶವು ಕೃಷಿ ಆಧಾರಿತವಾಗಿದೆ. ಇದರ ಮೌಲ್ಯವರ್ಧನೆ ಆಗಬೇಕು ಎಂದರೆ ಅದಕ್ಕೆ ತಕ್ಕ ಜ್ಞಾನವನ್ನು ನಮ್ಮ ವಿ.ವಿ.ಗಳು ಸೃಷ್ಟಿಸಬೇಕು. ಯುವಜನರ ಈ ಸಂಕಲ್ಪ ಶಕ್ತಿಗೆ ಸರಕಾರವು ಪೂರಕ ಬೆಂಬಲ ನೀಡುತ್ತಿದೆ" ಎಂದು ಅವರು ನುಡಿದರು. ನೆಪಮಾತ್ರದ ಪದವಿಗಳಿಂದ ಯಾವುದೇ ಪ್ರಯೋಜನವಿಲ್ಲ. ಗುಣಮಟ್ಟದ ಶಿಕ್ಷಣವು ಸಮಾಜದ ಸುಸ್ಥಿರ ಅಭಿವೃದ್ಧಿಯನ್ನು ಸಾಧಿಸಲು ಶಕ್ತಿ ತುಂಬಬೇಕು ಎಂದು ಅವರು ಪ್ರತಿಪಾದಿಸಿದರು.

ದೃಷ್ಟಿ ವಿಕಲಚೇತನರಿಗೆ ಪರೀಕ್ಷೆ ಬರೆದು ಬದುಕು ರೂಪಿಸಿ ರಾಷ್ಟ್ರಪತಿ ಪುರಸ್ಕಾರ ಪಡೆದ

21ನೇ ಶತಮಾನವು ಜ್ಞಾನದ ಯುಗವಾಗಿದೆ. ಇಲ್ಲಿನ ಕ್ಯಾಂಪಸ್‌ನಲ್ಲಿ ಮಳೆನೀರು ಸಂಗ್ರಹ, ಸಾಮಾಜಿಕ ಅರಣ್ಯ, ಪರಿಸರಸ್ನೇಹಿ ತಂತ್ರಜ್ಞಾನ ಎಲ್ಲವನ್ನೂ ಅಳವಡಿಸಿ ಕೊಳ್ಳಲಾಗುವುದು. ಅಂತಿಮವಾಗಿ ಇದನ್ನು ವಿಶ್ವ ದರ್ಜೆಯ ಅರಿವಿನ ತಾಣವನ್ನಾಗಿ ಮಾಡಲಾಗುವುದು ಎಂದು ಅವರು ತಮ್ಮ ಹೆಬ್ಬಯಕೆ ವ್ಯಕ್ತಪಡಿಸಿದರು.

5 ಮತ್ತು 8 ತರಗತಿಗಳಿಗೆ ಬೋರ್ಡ್ ಪರೀಕ್ಷೆ ವಿಚಾರಣೆ ಮಾ.27ಕ್ಕೆ ಮುಂದೂಡಿದ ಸುಪ್ರೀಂ

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಸಮಾಜ ಮತ್ತು ವಿದ್ಯಾರ್ಥಿಗಳ ಪರವಾಗಿದೆ. ಇದರ ಅನುಷ್ಠಾನದಲ್ಲಿ ರಾಜ್ಯವು ಪ್ರಥಮ ಸ್ಥಾನದಲ್ಲಿದೆ. ಕಾರ್ಯಕ್ರಮದಲ್ಲಿ ಸಚಿವ ಕೆ.ಸುಧಾಕರ್, ಬೆಂಗಳೂರು ಉತ್ತರ ವಿವಿ ಕುಲಪತಿ ನಿರಂಜನ ವಾನಳ್ಳಿ, ಕುಲಸಚಿವ ವೆಂಕಟೇಶ್, ಶಾಸಕ ವಿ.ಮುನಿಯಪ್ಪ ಮುಂತಾದವರು ಉಪಸ್ಥಿತರಿದ್ದರು.

PREV
Read more Articles on
click me!

Recommended Stories

SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ
ಖಾಸಗಿ ಶಾಲೆಗಳಿಗೆ ಸೆಡ್ಡು, ಮುಂದಿನ ವರ್ಷದಿಂದ ರಾಜ್ಯಾದ್ಯಂತ 700 ಕೆಪಿಎಸ್ ಶಾಲೆ ಕಾರ್ಯಾರಂಭ