ದಾವಣಗೆರೆ: ಗುಡಿಸಲಿನಂತಿದ್ದ ಶಾಲೆಗೆ ಬಿಜೆಪಿ ಎಂಎಲ್‌ಸಿ ರವಿಕುಮಾರ್ ಹೈಟೆಕ್ ಸ್ಪರ್ಶ!

Published : Feb 06, 2025, 09:00 AM IST
ದಾವಣಗೆರೆ: ಗುಡಿಸಲಿನಂತಿದ್ದ ಶಾಲೆಗೆ ಬಿಜೆಪಿ ಎಂಎಲ್‌ಸಿ ರವಿಕುಮಾರ್ ಹೈಟೆಕ್ ಸ್ಪರ್ಶ!

ಸಾರಾಂಶ

ವಿಧಾನಪರಿಷತ್ ಸದಸ್ಯ ರವಿಕುಮಾರ್‌ ಅವರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಯೋಜನೆ ಅಡಿ ಅವರ ಹುಟ್ಟೂರಾದ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಹುಚ್ಚಂಗಿಪುರ ಗ್ರಾಮದಲ್ಲಿ ಗುಡಿಸಲಿನಂತಿದ್ದ ಶಾಲೆಯ ಸ್ವರೂಪವನ್ನೇ ಬದಲಿಸಿ ನಿರ್ಮಿಸಿದ ಸುಸಜ್ಜಿತ ಮಾದರಿ ಸರ್ಕಾರಿ ಪ್ರಾಥಮಿಕ ಶಾಲೆ ಈಗ ಲೋಕಾರ್ಪಣೆಗೆ ಸಜ್ಜಾಗಿದೆ.

ಬೆಂಗಳೂರು(ಫೆ.06): ಜನಪ್ರತಿನಿಧಿಗಳು ಮನಸ್ಸು ಮಾಡಿದರೆ ನಮ್ಮ ಗ್ರಾಮೀಣ ಭಾಗದಲ್ಲಿರುವ ಸರ್ಕಾರಿಗಳನ್ನು ಹೇಗೆ ನವೀಕರಿಸಬಹುದು, ನಿರ್ಮಿಸಬಹುದು ಎಂಬುದಕ್ಕೆ ಇಲ್ಲೊಂದು ಉತ್ತಮ ನಿದರ್ಶನವಿದೆ.

ವಿಧಾನಪರಿಷತ್ ಸದಸ್ಯ ರವಿಕುಮಾರ್‌ ಅವರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಯೋಜನೆ ಅಡಿ ಅವರ ಹುಟ್ಟೂರಾದ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಹುಚ್ಚಂಗಿಪುರ ಗ್ರಾಮದಲ್ಲಿ ಗುಡಿಸಲಿನಂತಿದ್ದ ಶಾಲೆಯ ಸ್ವರೂಪವನ್ನೇ ಬದಲಿಸಿ ನಿರ್ಮಿಸಿದ ಸುಸಜ್ಜಿತ ಮಾದರಿ ಸರ್ಕಾರಿ ಪ್ರಾಥಮಿಕ ಶಾಲೆ ಈಗ ಲೋಕಾರ್ಪಣೆಗೆ ಸಜ್ಜಾಗಿದೆ.

ಎಸ್‌ಎಸ್‌ಎಲ್‌ಸಿ ಆಂತರಿಕ ಅಂಕ ಮೇಲೆ ಕಣ್ಣಿಡಲು ತ್ರಿಸದಸ್ಯ ಸಮಿತಿ ರಚನೆ

ಸರ್ಕಾರಿ ಶಾಲಾ-ಕಾಲೇಜುಗಳು ಮೂಲ ಸೌಕರ್ಯಗಳಿಂದ, ಶಿಕ್ಷಕರ ಕೊರತೆಯಿಂದ ಸೊರಗುತ್ತಿದ್ದು, ಹಳ್ಳಿಯ ಮಕ್ಕಳು ಖಾಸಗಿ ಶಾಲೆಯತ್ತ ಮುಖ ಮಾಡುತ್ತಿದ್ದಾರೆ. ಇದನ್ನು ಮನಗಂಡ ರವಿಕುಮಾರ್ ಸರ್ಕಾರಿ ಶಾಲೆಗೆಳನ್ನು ಅಭಿವೃದ್ಧಿ ಮಾಡಬೇಕೆಂಬ ಧೃಡ ನಿರ್ಧಾರದಿಂದ ತಮ್ಮ ಹುಟ್ಟೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನೇ ಮೊದಲಿಗೆ ದತ್ತು ತೆಗೆದುಕೊಂಡು ಸುಮಾರು 3.5 ಕೋಟಿ ರು. ವೆಚ್ಚದಲ್ಲಿ ಈಗ ಸುಸಜ್ಜಿತ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಿರ್ಮಿಸಿದ್ದಾರೆ. 

ಸುಮಾರು 20 ಸಾವಿರ ಚ.ಅಡಿಯಲ್ಲಿ ನಿರ್ಮಿಸಲಾದ ಈ ಶಾಲೆಯಲ್ಲಿ 16 ಸುಸಜ್ಜಿತ ಕೊಠಡಿಗಳಿವೆ. ಹೊರಾಂಗಣ ಕಾರ್ಯಕ್ರಮ ಗಳಿಗೆ ಒಂದು ಕುವೆಂಪು ಬಯಲು ರಂಗ ಮಂದಿರವಿದೆ.ಒಳಾಂಗಣಕಾರ್ಯಕ್ರಮಗಳಿಗೆ ಡಾ.ಬಿ.ಆರ್.ಅಂಬೇಡರ್ ಸಭಾಂಗಣ ನಿರ್ಮಿ ಸಲಾಗಿದೆ. ಸ್ವಾಮಿ ವಿವೇಕಾನಂದರ ಸ್ಮಾರ್ಟ್ ಕ್ಲಾಸ್ ಕೂಡ ನಿರ್ಮಿಸಲಾಗಿದೆ. ಮಕ್ಕಳಿಗೆ ಶುದ್ದ ಕುಡಿಯುವ ನೀರಿಗಾಗಿ ಬೋರ್‌ವೆಲ್ ಕೊರೆಸಿ ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.

ಈ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶ ಏರಿಕೆ ಖಚಿತ: ಸಚಿವ ಮಧು ಬಂಗಾರಪ್ಪ

ಶುಕ್ರವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಶಾಲೆ ಲೋಕಾರ್ಪಣೆ ಮಾಡಲಿದ್ದಾರೆ. ಕಾರ್ಯಕ್ರಮ ದಲ್ಲಿಶಾಸಕ ಬಿ.ದೇವೆಂದ್ರಪ್ಪ, ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರು, ಕೆ.ಎಸ್. ನವೀನ್, ಚಿದಾನಂದಗೌಡ ಸೇರಿ ಇತರರು ಭಾಗವಹಿಸಲಿದ್ದಾರೆ.

ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿಯ ಲ್ಲಿಯೇ ಸುಮಾರು 25 ವರ್ಷಗಳ ಕಾಲ ಪೂರ್ಣಾವಧಿ ಕಾರ್ಯಕರ್ತರಾಗಿ ಹಲವಾರು ಸಂಘಟನಾತ್ಮಕಜವಾಬ್ದಾರಿಗಳನ್ನು ನಿರ್ವಹಿಸಿದ ರವಿಕುಮಾರ್‌ ಅವರು ಶಿಕ್ಷಣದ ಮಹತ್ವ ಅರಿತು ಕೊಂಡು ತಮ್ಮೂರಿನ ಈ ಶಾಲೆ ನಿರ್ಮಾಣಕ್ಕೆ ಕಾರಣಕರ್ತರಾಗಿದ್ದಾರೆ. ಇದು ಇತರ ಜನಪ್ರತಿನಿಧಿಗಳಿಗೂ ಮಾದರಿಯಾಗಲಿ.

PREV
Read more Articles on
click me!

Recommended Stories

SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ
ಖಾಸಗಿ ಶಾಲೆಗಳಿಗೆ ಸೆಡ್ಡು, ಮುಂದಿನ ವರ್ಷದಿಂದ ರಾಜ್ಯಾದ್ಯಂತ 700 ಕೆಪಿಎಸ್ ಶಾಲೆ ಕಾರ್ಯಾರಂಭ