* ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಗುಡ್ ನ್ಯೂಸ್
* 2020-2021ನೇ ಸಾಲಿನ ಬಸ್ ಪಾಸ್ ಅವಧಿ ವಿಸ್ತರಿಸಿದ ಬಿಎಂಟಿಸಿ
* ಶಿಕ್ಷಣ ಇಲಾಖೆ ಮನವಿಗೆ ಸ್ಪಂದಿಸಿದ ಬಿಎಂಟಿಸಿ
ಬೆಂಗಳೂರು, (ಆ.31): ವಿದ್ಯಾರ್ಥಿಗಳಿಗೆ 2020-2021ನೇ ಸಾಲಿನ ಬಸ್ಪಾಸ್ ಅವಧಿ ವಿಸ್ತರಣೆ ಮಾಡಿ ಬಿಎಂಟಿಸಿ ಆದೇಶ ಹೊರಡಿಸಿದೆ.
2021ರ ಸೆಪ್ಟೆಂಬರ್ 30ರವರೆಗೆ ಬಸ್ ಪಾಸ್ ಅವಧಿ ವಿಸ್ತರಿಸಲಾಗಿದ್ದು, ಇದು ಐಟಿಐ, ಡಿಪ್ಲೊಮಾ, ಪದವಿ, ಪಿಜಿ, ಸಂಶೋಧಕರು, ತಾಂತ್ರಿಕ, ವೈದ್ಯಕೀಯ ಮತ್ತು ಸಂಜೆ ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ.
6ರಿಂದ 8ನೇ ತರಗತಿಗಳನ್ನೂ ಪ್ರಾರಂಭಿಸಲು ಸಿಕ್ತು ಸರ್ಕಾರ ಗ್ರೀನ್ ಸಿಗ್ನಲ್: ಎಂದಿನಿಂದ?
ಕೊವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ಭೌತಿಕ ತರಗತಿಗಳು ನಡೆದಿರಲಿಲ್ಲ. ಹೀಗಾಗಿ ಬಸ್ ಪಾಸ್ ಬಳಕೆ ಆಗದೆ ಹಾಗೇ ಇತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಣೆ ಮಾಡುವಂತೆ ಬಿಎಂಟಿಸಿಗೆ ಶಿಕ್ಷಣ ಇಲಾಖೆ ಮನವಿ ಮಾಡಿತ್ತು.
ಇದೀಗ ಶಿಕ್ಷಣ ಇಲಾಖೆಯ ಮನವಿ ಮೇರೆಗೆ ಸ್ಟೂಡೆಂಟ್ ಪಾಸ್ ಅವಧಿಯನ್ನು ಬಿಎಂಟಿಸಿ ವಿಸ್ತರಿಸಿದೆ.