ಶಾಲಾ-ಕಾಲೇಜು ಪ್ರಾರಂಭದ ನಡುವೆ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್...!

By Suvarna NewsFirst Published Jan 2, 2021, 4:22 PM IST
Highlights

ಕೊರೋನಾ ಭೀತಿಯ ನಡುವೆಯೂ ಶಾಲಾ-ಕಾಲೇಜುಗಳನ್ನ ಪ್ರಾರಂಭಿಸಲಾಗಿದೆ. ಇದರ ಮಧ್ಯೆ ಬಸ್ ಮೂಲಕ ಶಾಲಾ-ಕಾಲೇಜುಗಳಿಗೆ ಪ್ರಯಾಣ ಮಾಡುವ  ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.

ಬೆಂಗಳೂರು, (ಜ.02): ಶಾಲಾ-ಕಾಲೇಜುಗಳಿಗೆ ದಾಖಲಾಗಿರುವ ಶುಲ್ಕ ಪಾವತಿ ರಸೀದಿಯೊಂದಿಗೆ 2019-20ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್‍ನ್ನು ತೋರಿಸಿ ಸಂಬಂಧಪಟ್ಟ ಮಾರ್ಗದಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸಬಹುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಕೆಎಸ್‌ಆರ್‌ಟಿಸಿಯ ನಗರ ಹೊರವಲಯ ಸಾಮಾನ್ಯ ಹಾಗೂ ವೇಗಧೂತ ಬಸ್‍ಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ಜನವರಿ 01ರಿಂದ ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗಿರುವುದರಿಂದ ಎಲ್ಲ ವರ್ಗದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಕೆಎಸ್‌ಆರ್‌ಟಿಸಿ ಬಸ್‍ಗಳಲ್ಲಿ ಜ.30ರವರೆಗೂ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿ: 10, 12 ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಬಗ್ಗೆ ಮಾಹಿತಿ

ಬಿಎಂಟಿಸಿ ಪ್ರಕಟಣೆ
ಇನ್ನು ಬೆಂಗಳೂರು ನಗರದಲ್ಲೂ ಸಹ ಕಳೆದ ವರ್ಷದ ಪಾಸ್ ಹಾಗೂ ಶಾಲೆಯ ಶುಲ್ಕದ ರಸೀದಿಯೊಂದಿಗೆ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. 6ರಿಂದ 10ನೇ ತರಗತಿ ವಿದ್ಯಾರ್ಥಿಗಳು ಹಾಗೂ ದ್ವಿತೀಯ ಪಿಯುಸಿ, ಡಿಪ್ಲೋಮಾ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಪ್ರಯಾಣಿಸಹುದಾಗಿದೆ.

ಇನ್ನು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಪ್ರಸ್ತುತ ವರ್ಷದ  ಬಸ್ ಪಾಸ್ ಪಡೆಯುವಂತೆ ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರು ಒನ್ ಹಾಗೂ ಸೇವಾಸಿಂಧು ಪೋರ್ಟಲ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

click me!