ಹೊಸ ಕೊರೋನಾ ತಳಿ ಭೀತಿ ನಡುವೆಯೂ ರಾಜ್ಯದಲ್ಲಿ ಶಾಲಾ-ಕಾಲೇಜು ತರಗತಿ ಪ್ರಾರಂಭದ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು,(ಡಿ.28): ಈಗಾಗಲೇ ನಿಗದಿಯಾಗಿರುವಂತೆ ಜನವರಿ 1ರಿಂದ ಶಾಲಾ-ಕಾಲೇಜುಗಳು ಪ್ರಾರಂಭವಾಗಲಿದ್ದು, ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಸಚಿವ ಸಂಪುಟ ಸಭೆ ಆರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾಕಾಲೇಜುಗಳನ್ನು ಜನವರಿ 1ರಿಂದ ಆರಂಭಿಸಲು ತೀರ್ಮಾನಿಸಲಾಗಿದೆ. ಈ ನಿರ್ಧಾರದಲ್ಲಿ ಹೆಚ್ಚಿನ ಬದಲಾವಣೆ ಇರುವುದಿಲ್ಲ ಎಂದರು.
ಕರ್ನಾಟಕದಲ್ಲಿ ತರಗತಿಗಳು ಪ್ರಾರಂಭ:; ಮಾರ್ಗಸೂಚಿ ಬಿಡುಗಡೆ ಮಾಡಿದ ಶಿಕ್ಷಣ ಇಲಾಖೆ
ಮೊದಲ ಹಂತದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಪ್ರಾರಂಭವಾಗಲಿವೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇ.95ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ. ಈ ಚುನಾವಣೆಗೆ ಕಾಂಗ್ರೆಸ್‌ನ ಯಾವುದೇ ನಾಯಕರು ಆಸಕ್ತಿ ವಹಿಸಿರಲಿಲ್ಲ ಎಂದು ಹೇಳಿದರು.
ಅಧಿಕಾರ ವಿಕೇಂದ್ರೀಕರಣ ಸಂದರ್ಭದಲ್ಲಿ ಹಲವು ವಿದ್ಯಾವಂತರು ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಮುಂದೆ ಗ್ರಾಮ ಪಂಚಾಯಿತಿಎ ಆಯ್ಕೆಯಾಗುವ ಸದಸ್ಯರಿಗೆ ಹೆಚ್ಚಿನ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ . ಗ್ರಾಮಗಳ ಅಭಿವೃದ್ಧಿ ಮಾಡಲು ಸದಸ್ಯರಿಗೆ ಸಹಕಾರ ಕೊಡಲು ಪ್ರಮಾಣಿಕ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.