ಕೊರೋನಾ ರೂಪಾಂತರ ವೈರಸ್ ಸೋಂಕಿನ ಭೀತಿಯಿಂದಾಗಿ ಮುಂದೂಡಲಾಗಿರುವ 10ನೇ ಹಾಗೂ 12ನೇ ತರಗತಿ ಬೋರ್ಡ್ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಲಾಗಿದೆ.
ನವದೆಹಲಿ, (ಡಿ.31): ಕೊರೋನಾ ರೂಪಾಂತರ ವೈರಸ್ ಸೋಂಕಿನ ಭೀತಿಯಿಂದಾಗಿ ಮುಂದೂಡಲಾಗಿದ್ದ ಸಿಬಿಎಸ್‌ಇ 10 ಹಾಗೂ 12ನೇ ತರಗತಿ ಪರೀಕ್ಷೆಗಳಿಗೆ ಹೊಸ ದಿನಾಂಕವನ್ನು ನಿಗದಿ ಮಾಡಲಾಗಿದೆ.
ಸಿಬಿಎಸ್‌ಇ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಇದೇ ಮೇ 4 ರಿಂದ ಜೂನ್ 10 ರವರೆಗೆ ನಡೆಯಲಿದ್ದು, ಜುಲೈ 15 ರಂದು ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ಘೋಷಿಸಿದ್ದಾರೆ.
ಪೋಷಕರಲ್ಲಿ ವಿಶೇಷ ಮನವಿ: ಶಾಲಾ-ಕಾಲೇಜು ಆರಂಭದ ಬಗ್ಗೆ ಸಚಿವರ ಮಾಹಿತಿ
ಈ ಬಗ್ಗೆ ಇಂದು (ಗುರುವಾರ) ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಜನವರಿಯಲ್ಲಿ ನಿಗದಿ ಪಡಿಸಿದ್ದಂತ ಸಿಬಿಎಸ್‌ಇಯ 10 ಹಾಗೂ 12ನೇ ತರಗತಿ ಪರೀಕ್ಷೆಗಳನ್ನು ಮೇ.4ರಿಂದ ಜೂನ್ 10ರವರಗೆ ನಡೆಸಲಾಗುತ್ತದೆ. ಇಂತಹ ಪರೀಕ್ಷೆಯ ಫಲಿತಾಂಶವನ್ನು ಜುಲೈ 15ರಂದು ಪ್ರಕಟಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.