10 ಮತ್ತು 12ನೇ ತರಗತಿಯ ಪರೀಕ್ಷಾ ವೇಳಾಪಟ್ಟಿ ಪ್ರಕಟ

Published : Feb 02, 2021, 06:03 PM IST
10 ಮತ್ತು 12ನೇ ತರಗತಿಯ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಸಾರಾಂಶ

2021ನೇ ಸಾಲಿನ 10 ಮತ್ತು 12 ನೇ ತರಗತಿಯ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗಿದೆ. ಕೆಂದ್ರ ಶಿಕ್ಷಣ ಇಲಾಖೆ ಸಚಿವ ರಮೇಶ್ ಪೋಖ್ರಿಯಾಲ್ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ.

ಬೆಂಗಳೂರು, (ಫೆ.02): ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ನಡೆಸುವ 2021 ನೇ ಸಾಲಿನ 10 ಮತ್ತು 12 ನೇ ತರಗತಿಯ ಪರೀಕ್ಷಾ ವೇಳಾಪಟ್ಟಿ ಬಿಡುಗಡೆಯಾಗಿದೆ.

ಕೆಂದ್ರ ಶಿಕ್ಷಣ ಇಲಾಖೆ ಸಚಿವ ರಮೇಶ್ ಪೋಖ್ರಿಯಾಲ್ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಪರೀಕ್ಷೆಗಳು ಮುಂಬರುವ ಮೇ 4 ರಿಂದ ಆರಂಭಗೊಂಡು ಜೂನ್ 10 ಕ್ಕೆ ಕೊನೆಗೊಳ್ಳಲಿದೆ. ವಿದ್ಯಾರ್ಥಿಗಳು ವೆಬ್ ಸೈಟ್ ಮೂಲಕ ವೇಳಾಪಟ್ಟಿಯನ್ನು ನೋಡಬಹುದಾಗಿದೆ.

ಮುಂದೂಡಲಾಗಿದ್ದ FDA ಪರೀಕ್ಷೆಗೆ ಹೊಸ ದಿನಾಂಕ ಪ್ರಕಟ

ಇನ್ನು ಈ ಬಗ್ಗೆ ಕೇಂದ್ರ ಸಚಿವ ಸುರೇಶ್ ಪೋಖ್ರಿಯಾಲ್ ನಿಶಾಂಕ್ ಟ್ವೀಟ್ ಮಾಡಿದ್ದು, ಪ್ರೀತಿಯ ವಿದ್ಯಾರ್ಥಿಗಳೇ, ಬಹು ದಿನಗಳ ನಿರೀಕ್ಷೆಯ ಸಿಬಿಎಸ್ ಇ 10ನೇ ಮತ್ತು 12ನೇ ತರಗತಿ ಪರೀಕ್ಷೆಯ ದಿನಾಂಕವನ್ನು ಘೋಷಿಸಿದ್ದೇವೆ. ನಿಮಗೆ ಪರೀಕ್ಷೆ ತುಂಬಾ ಸುಗಮವಾಗಿ ನಡೆಯುವಂತೆ ನಾವು ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಬರೆದುಕೊಂಡಿದ್ದಾರೆ.

PREV
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ