ದ್ವಿತೀಯ ಪಿಯುಸಿ ಲ್ಯಾಬ್ ಪರೀಕ್ಷೆಗೂ ವಾರ್ಷಿಕ ಪರೀಕ್ಷೆ ಮಾದರಿಯಲ್ಲೇ ವಿದ್ಯಾರ್ಥಿಗಳನ್ನು ಬೇರೆ ಬೇರೆ ಕೇಂದ್ರಗಳಿಗೆ ಯಾದೃಚ್ಛಿಕವಾಗಿ ಹಂಚಿಕೆ ಮಾಡಲಾಗುವುದು.
ಬೆಂಗಳೂರು (ಅ.04): ದ್ವಿತೀಯ ಪಿಯುಸಿ ಲ್ಯಾಬ್ ಪರೀಕ್ಷೆಗೂ ವಾರ್ಷಿಕ ಪರೀಕ್ಷೆ ಮಾದರಿಯಲ್ಲೇ ವಿದ್ಯಾರ್ಥಿಗಳನ್ನು ಬೇರೆ ಬೇರೆ ಕೇಂದ್ರಗಳಿಗೆ ಯಾದೃಚ್ಛಿಕವಾಗಿ ಹಂಚಿಕೆ ಮಾಡಲಾಗುವುದು. ತಮ್ಮದೇ ಕಾಲೇಜಿನಲ್ಲಿ ಪರೀಕ್ಷೆಗೆ ಅವಕಾಶವಿಲ್ಲವೆಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಇದಕ್ಕೆ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘ ವಿರೋಧ ವ್ಯಕ್ತಪಡಿಸಿದೆ.
ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಮಂಡ ಳಿಯ ಅಧ್ಯಕ್ಷೆ ಮಂಜುಶ್ರೀ, ದ್ವಿತೀಯ ಪಿಯು ಸಿ ಲಿಖಿತ ಪರೀಕ್ಷೆ ಮಾದರಿಯಲ್ಲಿ ಪ್ರಾಯೋಗಿಕ ಪರೀಕ್ಷೆ ಗಳಿಗೂ ವಿದ್ಯಾರ್ಥಿಗಳನ್ನು ಯಾದೃಚ್ಛಿಕರಿಸಲು (ಕ್ಯಾಂಡ ಮೈಸ್) ತೀರ್ಮಾನಿಸಲಾಗಿದೆ. ಪ್ರಾಯೋಗಿಕ ಪರೀಕ್ಷಾ ಕೇಂದ್ರವಿರುವ ಕಾಲೇಜಿನ ವಿದ್ಯಾರ್ಥಿಗಳು ಅದೇ ಕಾಲೇ ಜಿನಲ್ಲಿ ಪ್ರಾಯೋಗಿಕ ಪರೀಕ್ಷೆ ಬರೆಯಲಾಗುವುದಿಲ್ಲ. ರಾಜ್ಯದ ಎಲ್ಲ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಉಪನ್ಯಾಸಕರು ಮಾರ್ಗದರ್ಶನ ನೀಡಬೇಕು. ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಈ ಬಗ್ಗೆ ತಮ್ಮ ಜಿಲ್ಲೆ ಯ ಎಲ್ಲ ಕಾಲೇಜುಗಳ ಪ್ರಾಂಶುಪಾಲರ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಬೇಕು ಎಂದಿದ್ದಾರೆ.
undefined
ಮೆಗಾಸ್ಟಾರ್ ಚಿರಂಜೀವಿಯವರ ಈ ಸಿನಿಮಾಗೆ ಡಿಸಾಸ್ಟರ್ ಎಂಬ ಪಟ್ಟ: ಆದರೆ ಟಿವಿಯಲ್ಲಿ ಪ್ರಸಾರವಾದಾಗ!
ಉಪನ್ಯಾಸಕರ ವಿರೋಧ: ಈ ನಿರ್ಧಾರ ದಿಂದ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾ ಗಲಿದ್ದು, ಸುತ್ತೋಲೆ ಹಿಂಪಡೆಯ ಬೇಕೆಂದು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇ ಜುಗಳ ಉಪನ್ಯಾಸಕರ ಸಂಘ ಆಗ್ರ ಹಿಸಿದೆ. ಗ್ರಾಮಾಂತರ ಪ್ರದೇಶದಲ್ಲಿ ಲ್ಯಾಬ್ ಪರೀ ಕ್ಷೆಗೆ ವಿದ್ಯಾರ್ಥಿಗಳು 15ರಿಂದ 30 ಕಿ.ಮೀ. ದೂರದ ಬೇರೆ ಕಾಲೇಜುಗಳಿಗೆ ಹಾಜರಾಗ ಬೇಕಾಗುತ್ತದೆ. ಸೂಕ್ತ ಸಾರಿಗೆ ವ್ಯವಸ್ಥೆ ಇರುವುದಿಲ್ಲ. ಅಲ್ಲದೆ, ಸರ್ಕಾರಿ ಕಾಲೇಜುಗಳಲ್ಲಿ ಪ್ರಯೋಗಾಲಯದ ಉಪಕರಣ, ಸಿಬ್ಬಂದಿ ಕೊರತೆ ಇದೆ. ಹೀಗಾಗಿ ಸುತ್ತೋಲೆ ಹಿಂಪಡೆಯಿರಿ ಎಂದು ಸಂಘದ ಅಧ್ಯಕ್ಷ ಎ.ಎಚ್.ನಿಂಗೇಗೌ ಡ ಮಂಡಳಿ ಅಧ್ಯಕ್ಷರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.