ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ ಟರ್ಮ್ 1ರ 10 ನೇ ತರಗತಿ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಈ ಬಾರಿ ಅಧಿಕೃತ ವೆಬ್‌ಸೈಟ್ ನಲ್ಲಿ ಸಿಬಿಎಸ್ಇ ಫಲಿತಾಂಶ ಪ್ರಕಟಿಸಿಲ್ಲ. ಬದಲಾಗಿ ಆಯಾಯ ಶಾಲೆಗಳಿಗೆ ಈಮೇಲ್ ಮಾಡಿ ತಿಳಿಸಿದೆ.
ಬೆಂಗಳೂರು(ಮಾ.12): ಕೇಂದ್ರ ಪ್ರೌಢಶಿಕ್ಷಣ ಮಂಡಳಿ (Central Board of Secondary Education -CBSE) 10ನೇ ತರಗತಿ ಟರ್ಮ್ 1ರ ಫಲಿತಾಂಶ ಬಿಡುಗಡೆ ಮಾಡಿದೆ. ಆದರೆ ಅಧಿಕೃತ ವೆಬ್‌ಸೈಟ್ ನಲ್ಲಿ ಈ ಬಾರಿ ಫಲಿತಾಂಶವನ್ನು ಪ್ರಕಟಿಸಿಲ್ಲ. 10 ನೇ ತರಗತಿಯ ಟರ್ಮ್ 1 ಫಲಿತಾಂಶವನ್ನು (class 10 term-1 results) ಸ್ಕೋರ್‌ಕಾರ್ಡ್‌ನೊಂದಿಗೆ ಆಯಾಯ ಶಾಲೆಗೆ ಈ ಮೇಲ್ ಮೂಲಕ ಮಾರ್ಚ್ 11 ರಂದೇ ತಿಳಿಸಲಾಗಿದೆ. ಹೀಗಾಗಿ ವಿದ್ಯಾರ್ಥಿಗಳು ತಮ್ಮ ಶಾಲೆಗಳಿಂದ ಫಲಿತಾಂಶದ ಬಗ್ಗೆ ವಿಚಾರಿಸಿ ತಿಳಿದುಕೊಳ್ಳಬಹುದು.
ಈ ಮೊದಲು 12ನೇ ತರಗತಿ ಟರ್ಮ್ 1ರ ಫಲಿತಾಂಶ ಮೊದಲು ಪ್ರಕಟವಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ 12ನೇ ತರಗತಿ ಟರ್ಮ್ 1ರ ಫಲಿತಾಂಶ ಇನ್ನೂ ಬಿಡುಗಡೆಯಾಗಿಲ್ಲ. ಮಂಡಳಿಯು ಶೀಘ್ರದಲ್ಲೇ 12ನೇ ತರಗತಿಯ ಫಲಿತಾಂಶ ಬಿಡುಗಡೆ ಮಾಡಲಿದೆ ಎಂದು ನಿರೀಕ್ಷಿಸಲಾಗಿದೆ.
ನವೆಂಬರ್ - ಡಿಸೆಂಬರ್‌ನಲ್ಲಿ ನಡೆದ 10ನೇ ಮತ್ತು 12ನೇ ತರಗತಿ ಪರೀಕ್ಷೆಗಳಲ್ಲಿ ಒಟ್ಟು 36 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಸದ್ಯ ವಿದ್ಯಾರ್ಥಿಗಳು ಟರ್ಮ್ 1 ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನಷ್ಟೇ ಬಿಡುಗಡೆ ಮಾಡಲಿದ್ದು, ವಿದ್ಯಾರ್ಥಿಗಳು ಪಾಸ್ ಅಥವಾ ಫೇಲ್ ಎಂಬುದನ್ನು ತಿಳಿಸುವುದಿಲ್ಲ.
ಬಾಲ್ಯವಿವಾಹಕ್ಕೆ ಒತ್ತಾಯಿಸಿ ಕೋಣೆಯಲ್ಲಿ ಕೂಡಿ ಹಾಕಿದ್ದ ಬಾಲಕಿ ಎಸ್ಕೇಪ್, SSLC ಪರೀಕ್ಷೆಗೆ ಹಾಜರ್!
ಮೊದಲ ಅವಧಿಯಲ್ಲಿ ಪಡೆದ ಅಂಕಗಳ ಪ್ರಕಾರ ಯಾವುದೇ ವಿದ್ಯಾರ್ಥಿಯು ಅನುತ್ತೀರ್ಣರಾಗುವುದಿಲ್ಲ ಅಥವಾ ಉತ್ತೀರ್ಣರಾಗುವುದಿಲ್ಲ ಎಂದು ಮಂಡಳಿಯು ಸ್ಪಷ್ಟವಾಗಿ ಹೇಳಿದೆ. ಶೈಕ್ಷಣಿಕ ವರ್ಷದ ಕೊನೆಯಲ್ಲಿ, ಎರಡೂ ಅವಧಿಗಳಲ್ಲಿನ ಅಂಕಗಳ ಆಧಾರದ ಮೇಲೆ ಅಂತಿಮ ಫಲಿತಾಂಶವನ್ನು ಲೆಕ್ಕ ಹಾಕಿ ಪ್ರಕಟಿಸಲಾಗುತ್ತದೆ. ಫಲಿತಾಂಶವನ್ನು ಟರ್ಮ್ 1 ಪರೀಕ್ಷೆ ಮತ್ತು ಇಂಟರ್‌ನಲ್ ಮಾರ್ಕ್ಸ್ ಹಾಗೂ ಟರ್ಮ್ 2 ಪರೀಕ್ಷೆ ಮತ್ತು ಇಂಟರ್‌ನಲ್ ಮಾರ್ಕ್ಸ್ ಆಧಾರದಲ್ಲಿ ಅಂದರೆ ಶೇ.50 ಅಂಕಗಳ ವ್ಹೇಟೇಜ್ ನೀಡಿ ಫಲಿತಾಂಶ ಪ್ರಕಟಿಸಲಾಗುತ್ತದೆ.
ಏ.26 ರಿಂದ ಸಿಬಿಎಸ್ಇ 10, 12ನೇ ತರಗತಿಯ ಎರಡನೆ ಅವಧಿಯ ಬೋರ್ಡ್ ಪರೀಕ್ಷೆ: ಕೇಂದ್ರೀಯ ಪೌಢ ಶಿಕ್ಷ ಮಂಡಳಿ (Central Board of Secondary Education -CBSE) 10 ಮತ್ತು 12 ನೇ ತರಗತಿಯ ಎರಡನೇ ಅವಧಿಯ ಬೋರ್ಡ್ ಪರೀಕ್ಷೆಗಳು ಏಪ್ರಿಲ್ 26 ರಿಂದ ಪ್ರಾರಂಭವಾಗಲಿವೆ ಎಂದು ಮಾ.11 ರಂದುಪ್ರಕಟಿಸಿದೆ. ಕೋವಿಡ್ ಸಾಂಕ್ರಾಮಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ 2021-22ನೇ ಶೈಕ್ಷಣಿಕ ವರ್ಷದಲ್ಲಿ 10 ಮತ್ತು 12ನೇ ತರಗತಿಯ ಪಠ್ಯಕ್ರಮವನ್ನು ಬದಲಾಯಿಸಿ ಎರಡು ಅವಧಿಗಳಿಗೆ ವಿಂಗಡಿಸಲಾಗಿದ್ದು, ಪ್ರತಿ ಅವಧಿಯ ಕೊನೆಯಲ್ಲಿ ಸಿಬಿಎಸ್ ಇ ಪರೀಕ್ಷೆಗಳನ್ನು ನಡೆಸುತ್ತಿದೆ.
CBSE term-II board exams: ಏ.26 ರಿಂದ ಸಿಬಿಎಸ್ಇ 10, 12ನೇ ತರಗತಿಯ ಎರಡನೆ ಅವಧಿಯ ಬೋರ್ಡ್ ಪರೀಕ್ಷೆ
ಟರ್ಮ್ I ಪರೀಕ್ಷೆಗಳು ಈಗಾಗಲೇ ಮುಗಿದಿದ್ದು, 10 ಮತ್ತು 12 ಎರಡೂ ತರಗತಿಗಳಿಗೆ ಟರ್ಮ್-II ಪರೀಕ್ಷೆಗಳು ಏಪ್ರಿಲ್ 26 ರಿಂದ ಪ್ರಾರಂಭವಾಗುತ್ತವೆ. ಸಾಂಕ್ರಾಮಿಕ ರೋಗದಿಂದಾಗಿ ಶಾಲೆಗಳು ಬಂದ್ ಆಗಿದ್ದನ್ನು ಗಮನದಲ್ಲಿಟ್ಟುಕೊಂಡು ಎರಡು ಪರೀಕ್ಷೆಗಳ ನಡುವೆ ಸಾಕಷ್ಟು ಅಂತರವನ್ನು ನೀಡಲಾಗಿದೆ ಎಂದು ಮಂಡಳಿ ತಿಳಿಸಿದೆ.
ಜೆಇಇ-ಮೇನ್ ಸೇರಿದಂತೆ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ವೇಳಾಪಟ್ಟಿಯನ್ನು ಸಿದ್ಧಪಡಿಸುವಾಗ ಸಾಕಷ್ಟು ಕಾಳಜಿ ವಹಿಸಲಾಗಿದೆ. ಯಾವುದೇ ಎರಡು ವಿಷಯಗಳ ಪರೀಕ್ಷೆಗಳು ಒಂದೇ ದಿನಾಂಕದಂದು ಬರದಂತೆ ನೋಡಿಕೊಳ್ಳಲಾಗಿದೆ ಸಿಬಿಎಸ್ ಇ ಹೇಳಿದೆ.
ಅಧಿಕೃತ ಸೂಚನೆಯ ಪ್ರಕಾರ, ವಿದ್ಯಾರ್ಥಿಗಳಿಗೆ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳು ಅವರು ಟರ್ಮ್-1 ಪರೀಕ್ಷೆಗಳಲ್ಲಿ ಕಾಣಿಸಿಕೊಂಡ ಕೇಂದ್ರಗಳಲ್ಲಿ ಇರುವುದಿಲ್ಲ ಎಂದು CBSE ತಿಳಿಸಿದೆ. ಪರೀಕ್ಷಾ ಕೇಂದ್ರದ ವಿವರಗಳನ್ನು ಟರ್ಮ್- 2 ಪ್ರವೇಶ ಕಾರ್ಡ್‌ಗಳಲ್ಲಿ ಪಡೆಯುವಾಗ ನಮೂದಿಸಲಾಗುತ್ತದೆ ಎಂದು ಹೇಳಿದೆ.