*ಈ ಹಿಂದೆ ಉತ್ತರ ಪ್ರದೇಶ ಸರ್ಕಾರವೂ ಸ್ಕಾಲರ್‌ಶಿಪ್ ಸ್ಥಗಿತ ಮಾಡಿತ್ತು, ಈಗ ಕೇಂದ್ರ ಮಾಡಿದೆ
*ಅನಧಿಕೃತ ಮದರಸಾಗಳ ಗುರುತಿಸಲು ಸಮೀಕ್ಷೆ ಕೈಗೊಂಡಿದ್ದ ಉತ್ತರ ಪ್ರದೇಶ ಸರ್ಕಾರ
*ಶಿಕ್ಷಣ ಹಕ್ಕು ಕಾಯಿದೆಯಡಿ ಎಲ್ಲ ಮಕ್ಕಳಿಗೆ ಶಿಕ್ಷಣ ಉಚಿತವಾಗಿ, ಹಾಗಾಗಿ ನಿರ್ಧಾರ ಕೈಗೊಂಡಿದೆ
ಉತ್ತರ ಪ್ರದೇಶದಲ್ಲಿ (Uttar Pradesh) ಮದರಸಾ (madarsa) ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಸ್ಕಾಲರ್‌ಶಿಪ್ (Scholarship) ನಿಲ್ಲಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇನ್ನು ಮುಂದೆ ಉತ್ತರ ಪ್ರದೇಶದಲ್ಲಿ 1 ರಿಂದ 8 ನೇ ತರಗತಿಯ ಮದರಸಾ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ವಿದ್ಯಾರ್ಥಿವೇತನಕ್ಕೆ ಅರ್ಹರಾಗಿರುವುದಿಲ್ಲ. ಈ ಕೇಂದ್ರೀಯ ವಿದ್ಯಾರ್ಥಿವೇತನದ ಅಡಿಯಲ್ಲಿ, 1 ರಿಂದ 5 ನೇ ತರಗತಿಯ ಮದರಸಾ ವಿದ್ಯಾರ್ಥಿಗಳು 1000 ರೂ. ವಿದ್ಯಾರ್ಥಿವೇತನ ಪಡೆಯುತ್ತಿದ್ದರು. 6 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸ್‌ಗಳ ಆಧಾರದ ಮೇಲೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿತ್ತು. ಈ ಹಿಂದೆ, ಉತ್ತರ ಪ್ರದೇಶ ಸರ್ಕಾರವು ಈ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ನಿಲ್ಲಿಸಿತ್ತು. ಇದೀಗ ಕೆಲ ಬೆಳವಣಿಗೆಗಳಿಂದಾಗಿ ಕೇಂದ್ರ ಸರ್ಕಾರವು ಈ ಮದರಸಾ ಮಕ್ಕಳ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಹಿಂಪಡೆಯಲು ನಿರ್ಧರಿಸಿದೆ. ಕೇಂದ್ರದ ಶಿಕ್ಷಣ ಹಕ್ಕು ಕಾಯ್ದೆಯಡಿಯಲ್ಲಿ ಮದರಸಾಗಳಲ್ಲಿ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಶಿಕ್ಷಣ ಉಚಿತವಾಗಿದೆ. ಆರ್‌ಟಿಇ ಕಾಯ್ದೆಯಡಿ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳನ್ನು ಸಹ ಒದಗಿಸಲಾಗಿರುವುದರಿಂದ ವಿದ್ಯಾರ್ಥಿವೇತನವನ್ನು ನಿಲ್ಲಿಸಲಾಗಿದೆ ಎಂದು ಕೇಂದ್ರ ಸರ್ಕಾರವು ತಿಳಿಸಿದೆ.
2021 ರಲ್ಲಿ, ಸುಮಾರು 16,558 ಮದರಸಾಗಳಲ್ಲಿ ಸುಮಾರು 4 ರಿಂದ 5 ಲಕ್ಷ ವಿದ್ಯಾರ್ಥಿಗಳು ಈ ಕೇಂದ್ರ ಪ್ರಾಯೋಜಿತ ವಿದ್ಯಾರ್ಥಿವೇತನವನ್ನು ಪಡೆದಿದ್ದಾರೆ. ಇನ್ನು 9 ಮತ್ತು 10 ನೇ ತರಗತಿಯ ಮದರಸಾ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಹರಾಗಿದ್ದು, ಇದಕ್ಕಾಗಿ ಕೇಂದ್ರಕ್ಕೆ ಅರ್ಜಿಗಳನ್ನು ಸಲ್ಲಿಸಬಹುದು.ಉತ್ತರ ಪ್ರದೇಶದಲ್ಲಿ ಗುರುತಿಸಲ್ಪಡದ ಮದರಸಾಗಳ ಸಂಖ್ಯೆಯನ್ನು ಪತ್ತೆ ಹಚ್ಚಲು ಅಲ್ಲಿನ ಸರ್ಕಾರವು ಮದರಸಾ ಸಮೀಕ್ಷೆಯನ್ನು ನಡೆಸಲು ನಿರ್ಧರಿಸಿದೆ. ಲಭ್ಯವಿರುವ ಅಂಕಿಅಂಶಗಳ ಪ್ರಕಾರ, ಉತ್ತರ ಪ್ರದೇಶದ ಸುಮಾರು 8000 ಮಾನ್ಯತೆ ಪಡೆಯದ ಮದರಸಾಗಳಲ್ಲಿ ಸುಮಾರು 16 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
Amazon Academy: ಮುಂದಿನ ವರ್ಷ ಆಗಸ್ಟ್‌ನಿಂದ ಅಮೆಜಾನ್ ಅಕಾಡೆಮಿ ಸ್ಥಗಿತ
ಇತ್ತೀಚೆಗಷ್ಟೇ ಯುಪಿ ಸರ್ಕಾರ ಮದರಸಾ ಸಮೀಕ್ಷೆಯನ್ನು ನಡೆಸಿತ್ತು. ಅಲ್ಪಸಂಖ್ಯಾತರ ವ್ಯವಹಾರಗಳ ರಾಜ್ಯ ಸಚಿವ ಡ್ಯಾನಿಶ್ ಆಜಾದ್ ಅನ್ಸಾರಿ, ವಿದ್ಯಾರ್ಥಿಗಳಿಗೆ ಒದಗಿಸಲಾದ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಲು ಬಯಸುತ್ತಿರುವ ಮಕ್ಕಳ ಹಕ್ಕುಗಳ ರಾಷ್ಟ್ರೀಯ ಆಯೋಗದ (ಎನ್‌ಸಿಪಿಸಿಆರ್) ಅಗತ್ಯತೆಗಳಿಗೆ ಅನುಗುಣವಾಗಿ ಮದರಸಾಗಳ ಸಮೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಖಾಸಗಿ ಅಥವಾ ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿರುವ ಮದರಸಾ ಮತ್ತು ಅದನ್ನು ನಡೆಸುತ್ತಿರುವ ಸಂಸ್ಥೆಯ ಹೆಸರು, ಕುಡಿಯುವ ನೀರು, ವಿದ್ಯುತ್, ಶೌಚಾಲಯಗಳು, ಪೀಠೋಪಕರಣಗಳಂತಹ ಮೂಲಭೂತ ಸೌಕರ್ಯಗಳ ಬಗ್ಗೆ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸಲು ಸಮೀಕ್ಷೆಯು ಸಹಾಯವಾಗಲಿದೆ ಎಂದಿದ್ದಾರೆ.
ಸಮೀಕ್ಷೆಯು ರಾಜ್ಯದಲ್ಲಿ 7,500 ಕ್ಕೂ ಹೆಚ್ಚು ಮಾನ್ಯತೆ ಪಡೆಯದ ಮದರಸಾಗಳನ್ನು ಗುರುತಿಸಿದೆ ಎಂದು ಈ ಹಿಂದೆಯೇ ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಧರಂ ಪಾಲ್ ಸಿಂಗ್ ಹೇಳಿದ್ದರು. ಯೋಗಿ ಸರ್ಕಾರ ಮದರಸಾಗಳ ಸರ್ವೇ ಕಾರ್ಯ ನಡೆಸುತ್ತಿರುವಾಗಲೇ, ಕೇಂದ್ರ ಸರ್ಕಾರ ವಿದ್ಯಾರ್ಥಿವೇತನ ಸ್ಥಗಿತದ ನಿರ್ಧಾರಕ್ಕೆ ಬಂದಿದೆ.ಕೇಂದ್ರ ಸರ್ಕಾರದ ನಿರ್ಧಾರದಂತೆ, ಇನ್ಮುಂದೆ ಯುಪಿಯಲ್ಲಿ ಮದರಸಾ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಹರಾಗಿರುವುದಿಲ್ಲ.
Project Zimadari: ಕಣಿವೆ ರಾಜ್ಯದ ಶಿಕ್ಷಣದಲ್ಲಿ ಕ್ರಾಂತಿ ಸೃಷ್ಟಿಸಿದ ಜಿಮಾದಾರಿ ಕಾರ್ಯಕ್ರಮ!
ಮದರಸಾಗಳಲ್ಲಿ ಓದುತ್ತಿರುವ 1 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಸ್ಕಾಲರ್‌ಶಿಪ್‌ಗೆ ಕೇಂದ್ರ ಸರ್ಕಾರ ತನ್ನ ಪಾಲಿನ ಧನಸಹಾಯವನ್ನು ನಿಲ್ಲಿಸಿದೆ. ಇದುವರೆಗೆ 1 ರಿಂದ 5 ನೇ ತರಗತಿಯ ವಿದ್ಯಾರ್ಥಿಗಳಿಗೆ 1000 ರೂಪಾಯಿ ವಿದ್ಯಾರ್ಥಿವೇತನ ನೀಡಲಾಗುತ್ತಿತ್ತು., ಇನ್ನು ಮುಂದೆ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿವೇತನ ನೀಡಲಾಗುತ್ತದೆ. 1 ರಿಂದ 8 ನೇ ತರಗತಿಯ ವಿದ್ಯಾರ್ಥಿವೇತನವನ್ನು ಕೇಂದ್ರವು ಹಿಂಪಡೆಯುವುದರಿಂದ, ಮದರಸಾ ಮಕ್ಕಳು ಬಹಳ ತೊಂದರೆ ಎದುರಿಸಬೇಕಾಗುತ್ತದೆ.