2025ರ ಏಪ್ರಿಲ್ 16 ಮತ್ತು 17 ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಜನವರಿ 23 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಕಾಲೇಜುಗಳಲ್ಲಿ ದಾಖಲೆ ಪರಿಶೀಲನೆ ನಡೆಯಲಿದೆ.
ಬೆಂಗಳೂರು (ಜ.16): 2025ರ ಸಿಇಟಿ ಪರೀಕ್ಷೆ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. 2025ರ ಏಪ್ರಿಲ್ 16 (ಬುಧವಾರ) ಹಾಗೂ 17 (ಗುರುವಾರ) ಸಿಇಟಿ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದೆ. ಜನವರಿ 23 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಈ ವರ್ಷದಿಂದ ಆಯಾ ಕಾಲೇಜುಗಳಲ್ಲಿ ದಾಖಲೆ ಪರಿಶೀಲನೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರಕಟಣೆಯಲ್ಲಿ ತಿಳಿಸಿದೆ. ಏಪ್ರಿಲ್ 16ರಂದು ಬೆಳಿಗ್ಗೆ 10.30ರಿಂದ ಭೌತವಿಜ್ಞಾನ ಮತ್ತು ಮಧ್ಯಾಹ್ನ 2.30ರಿಂದ ರಸಾಯನ ವಿಜ್ಞಾನ ಪರೀಕ್ಷೆ ನಡೆಯಲಿದ್ದರೆ. ಏಪ್ರಿಲ್ 17ರಂದು ಬೆಳಿಗ್ಗೆ ಗಣಿತ ಮತ್ತು ಮಧ್ಯಾಹ್ನ ಜೀವವಿಜ್ಞಾನ ವಿಷಯಗಳ ಪರೀಕ್ಷೆಗಳು ನಡೆಯಲಿವೆ. ಏ.18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ ಎಂದು ಕೆಇಎ ಮಾಹಿತಿ ನೀಡಿದೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್, 'ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆ ವೇಳಾಪಟ್ಟಿಯನ್ನು ನಿಗದಿ ಪಡಿಸಲಾಗಿದೆ. ಇದೆ ಮೊದಲ ಭಾರಿಗೆ ವರ್ಷದಲ್ಲಿ ನಡೆಯುವ ಎಲ್ಲಾ ವೃತ್ತಿಪರ ಕೋರ್ಸುಗಳ ಪ್ರವೇಶ ಪರೀಕ್ಷೆಗಳ ಬಗ್ಗೆ ಒಮ್ಮೆಲೇ ಮಾಹಿತಿ ನೀಡಲಾಗಿದೆ. ವಿದ್ಯಾರ್ಥಿಗಳ ಸಾಧನೆ ಟ್ರ್ಯಾಕಿಂಗ್ ವ್ಯವಸ್ಥೆ, ಹಕ್ಕುಗಳ ಪ್ರಮಾಣಪತ್ರ, ಅರ್ಜಿಯ OTP ಪರಿಶೀಲನೆ ಮತ್ತಷ್ಟು ವ್ಯವಸ್ಥೆಗಳನ್ನು ಭದ್ರತೆ ಮತ್ತು ಸರಳೀಕರಣ ದೃಷ್ಟಿಯಿಂದ ಅಳವಡಿಸಲಾಗಿದೆ.' ಎಂದು ಬರೆದುಕೊಂಡಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆ ವೇಳಾಪಟ್ಟಿಯನ್ನು ನಿಗದಿ ಪಡಿಸಲಾಗಿದೆ. ಇದೆ ಮೊದಲ ಭಾರಿಗೆ ವರ್ಷದಲ್ಲಿ ನಡೆಯುವ ಎಲ್ಲಾ ವೃತ್ತಿಪರ ಕೋರ್ಸುಗಳ ಪ್ರವೇಶ ಪರೀಕ್ಷೆಗಳ ಬಗ್ಗೆ ಒಮ್ಮೆಲೇ ಮಾಹಿತಿ ನೀಡಲಾಗಿದೆ.
ವಿದ್ಯಾರ್ಥಿಗಳ ಅನುಕೂಲವಾಗುವಂತೆ ಆಯಾ ಕಾಲೇಜುಗಳಲ್ಲಿಯೇ ದಾಖಲೆ ಪರಿಶೀಲನೆ ನಡೆಸಲು ತಂತ್ರಾಂಶ ಸಿದ್ಧಪಡಿಸಲಾಗಿದೆ pic.twitter.com/EFKiVhvx76