ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ನಿಗದಿಯಂತೆ ಏ.18 ಮತ್ತು 19ರಂದು ಸಾಮಾನ್ಯ ಪ್ರವೇಶ ಪರೀಕ್ಷೆ-2024 (ಸಿಇಟಿ) ರಾಜ್ಯಾದ್ಯಂತ ಒಟ್ಟು 737 ಕೇಂದ್ರಗಳಲ್ಲಿ ನಡೆಯಲಿದೆ.
ಬೆಂಗಳೂರು (ಏ.18): ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ನಿಗದಿಯಂತೆ ಏ.18 ಮತ್ತು 19ರಂದು ಸಾಮಾನ್ಯ ಪ್ರವೇಶ ಪರೀಕ್ಷೆ-2024 (ಸಿಇಟಿ) ರಾಜ್ಯಾದ್ಯಂತ ಒಟ್ಟು 737 ಕೇಂದ್ರಗಳಲ್ಲಿ ನಡೆಯಲಿದೆ. ಈ ಬಾರಿ 3,49,637 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, ಪರೀಕ್ಷೆ ಸುಸೂತ್ರವಾಗಿ ನಡೆಸಲು ಎಲ್ಲ ರೀತಿಯ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಆದರೆ, ಪ್ರತೀ ವರ್ಷ ಸಿಇಟಿಗೆ ಸ್ಪಷ್ಟವಾದ ವಸ್ತ್ರಸಂಹಿತೆ (ಡ್ರೆಸ್‌ಕೋಡ್) ಪ್ರಕಟಿಸುತ್ತಿದ್ದ ಪ್ರಾಧಿಕಾರ ಈ ಭಾರಿ ಈ ಕುರಿತು ಯಾವುದೇ ನಿಖರ ಮಾಹಿತಿ ನೀಡಿಲ್ಲ. ಇನ್ನು, ಇಂಗ್ಲಿಷ್ ಮತ್ತು ಕನ್ನಡ ಎರಡರಲ್ಲೂ ಪ್ರಶ್ನೆಪತ್ರಿಕೆ ಇರಲಿದೆ. ಆದರೆ, ಯಾವುದೇ ಪ್ರಶ್ನೆಗೆ ಗೊಂದಲ ಉಂಟಾದಲ್ಲಿ ಇಂಗ್ಲಿಷ್ ಆವೃತ್ತಿಯನ್ನೇ ಅಂತಿಮವೆಂದು ಪರಿಗಣಿಸಬೇಕು. ಈ ವಿಚಾರದಲ್ಲಿ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಪ್ರಶ್ನೆಗಳಿಗೆ ಅವಕಾಶ ಇರುವುದಿಲ್ಲ ಎಂದು ಪ್ರಾಧಿಕಾರ ಹೇಳಿದೆ.
undefined
ಕೇಂದ್ರ ಸರ್ಕಾರ ಉದ್ಯಮಿಗಳಿಂದ ಹಫ್ತಾ ಸುಲಿಗೆ: ರಾಹುಲ್ ಗಾಂಧಿ ಗಂಭೀರ ಆರೋಪ
ಈ ಹಿಂದೆ ನೀಟ್ ಮಾದರಿಯಲ್ಲೇ ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲಾಗಿತ್ತು. ಕಿವಿ, ತಲೆ ಮುಚ್ಚುವಂತಹ ವಸ್ತ್ರಗಳನ್ನ ಪರೀಕ್ಷಾ ಕೊಠಡಿಯಲ್ಲಿ ಧರಿಸುವುದನ್ನ ನಿಷೇಧಿಸಲಾಗಿತ್ತು. ಯಾವುದೇ ರೀತಿಯ ಆಭರಣಗಳನ್ನ ಧರಿಸುವಂತಿಲ್ಲ ಎಂಬ ಮಾರ್ಗಸೂಚಿ ಬಿಡುಗಡೆ ಮಾಡಲಾಗಿತ್ತು. ಆದರೆ, ಈ ಬಾರಿ ಅಂತಹ ಯಾವುದೇ ನಿಯಮಗಳನ್ನು ಪ್ರಕಟಣೆಯಲ್ಲಿ ತಿಳಿಸಿಲ್ಲ. ಇದರಿಂದ ಯಾವುದಾದರೂ ಪರೀಕ್ಷಾ ಕೇಂದ್ರದಲ್ಲಿ ಗೊಂದಲ ಉಂಟಾದರೆ ಯಾರು ಹೊಣೆ ಎಂಬುದು ಪೋಷಕರು ಹಾಗು ವಿದ್ಯಾರ್ಥಿಗಳ ಪ್ರಶ್ನೆಯಾಗಿದೆ.
ಅಕ್ರಮಕ್ಕೆ ಅವಕಾಶವಿಲ್ಲ: ಪರೀಕ್ಷೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು ಕೂಡ ಇರಲಿದೆ. ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಬಿಗಿಭದ್ರತೆಯ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ. ಸಿಇಟಿ ಕರ್ತವ್ಯಕ್ಕೆ ಒಟ್ಟಾರೆ 20,300 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 167 ಪರೀಕ್ಷಾ ಕೇಂದ್ರಗಳಿದ್ದು, ಈ ಬಾರಿ 648 ವಿಶೇಷ ಚೇತನ ಅಭ್ಯರ್ಥಿಗಳು ಸಿಇಟಿ ಪರೀಕ್ಷೆ ಬರೆಯುತ್ತಿದ್ದಾರೆ ಎಂದು ತಿಳಿಸಲಾಗಿದೆ.
ಯುಪಿಎ 9 ವರ್ಷದ ಅವಧಿಯಲ್ಲಿ 84, ಮೋದಿ 10 ವರ್ಷದ ಅವಧಿಯಲ್ಲಿ 7264 ಇ.ಡಿ. ದಾಳಿ!
ಇಂದು ಜೀವಶಾಸ್ತ್ರ-ಗಣಿತ: ಗುರುವಾರ ಜೀವಶಾಸ್ತ್ರ ಮತ್ತು ಗಣಿತ ಹಾಗೂ ಶುಕ್ರವಾರ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಬೆಳಿಗ್ಗೆ 10.30ಕ್ಕೆ ಮತ್ತು ಮಧ್ಯಾಹ್ನ 2.30ಕ್ಕೆ ಆರಂಭವಾಗುವ ಪರೀಕ್ಷೆಗಳಿಗೆ ಅಭ್ಯರ್ಥಿಗಳು ಸಾಕಷ್ಟು ಮುಂಚಿತವಾಗಿಯೇ ಹಾಜರಿರಬೇಕು. ಬೆಳಿಗ್ಗೆ 10.40 ಮತ್ತು ಮಧ್ಯಾಹ್ನ 2.40ಕ್ಕೆ ಮೂರನೇ ಬಾರಿಗೆ ಬೆಲ್ ಬಾರಿಸಿದ ಬಳಿಕ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಇರುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.