ಇಂದು ಮಧ್ಯಾಹ್ನ 12ಕ್ಕೆ ಸಿಇಟಿ ಫಲಿತಾಂಶ ಪ್ರಕಟ; ಮಧ್ಯಾಹ್ನ 2ರ ಬಳಿಕ ವೆಬ್‌ಸೈಟ್‌ನಲ್ಲಿ ಲಭ್ಯ

Published : Jun 06, 2026, 07:04 AM IST
CET

ಸಾರಾಂಶ

2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಯುಜಿ-ಸಿಇಟಿ) ಫಲಿತಾಂಶವನ್ನು ಶನಿವಾರ ಪ್ರಕಟಿಸಲಾಗುತ್ತಿದೆ. ವೈದ್ಯಕೀಯ ಶಿಕ್ಷಣ ಸಚಿವರು ಮಧ್ಯಾಹ್ನ 12 ಗಂಟೆಗೆ ಫಲಿತಾಂಶದ ವಿವರಗಳನ್ನು ಪ್ರಕಟಿಸಲಿದ್ದು, ಮಧ್ಯಾಹ್ನ 2 ಗಂಟೆಯ ನಂತರ ವಿದ್ಯಾರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು.

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ನಡೆಸಿದ್ದ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಯುಜಿ-ಸಿಇಟಿ) ಫಲಿತಾಂಶವನ್ನು ಶನಿವಾರ ಪ್ರಕಟಿಸಲಿದೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಅವರು ಮಧ್ಯಾಹ್ನ 12 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿ, ಫಲಿತಾಂಶದ ವಿವರಗಳನ್ನು ಪ್ರಕಟಿಸಲಿದ್ದಾರೆ. ಮಧ್ಯಾಹ್ನ 2 ಗಂಟೆ ನಂತರ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳು ತಮ್ಮ ಫಲಿತಾಂಶ ಪಡೆದುಕೊಳ್ಳಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ 745 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ

ಎಂಜಿನಿಯರಿಂಗ್‌, ಕೃಷಿ ವಿಜ್ಞಾನ, ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಈ ಬಾರಿಯ ಪರೀಕ್ಷೆಗೆ ಒಟ್ಟು 3.30 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡು ಪರೀಕ್ಷೆ ಬರೆದಿದ್ದರು. ಕಳೆದ ಏಪ್ರಿಲ್‌ 23, 24ರಂದು ರಾಜ್ಯಾದ್ಯಂತ 745 ಪರೀಕ್ಷಾ ಕೇಂದ್ರಗಳಲ್ಲಿ ಸುಸೂತ್ರವಾಗಿ ಪರೀಕ್ಷೆ ನಡೆಸಲಾಗಿತ್ತು.

ಫಲಿತಾಂಶವು ಈ ಕೆಳಗಿನ ಲಿಂಕ್‌ಗಳಲ್ಲಿ ಲಭವಾಗಲಿದೆ

https://keaonline.karnataka.gov.in/ugcet_2026_results/

https://keaonline.karnataka.gov.in/ugcet_2026_result/

https://cetonline.karnataka.gov.in/kea/

PREV
Read more Articles on
click me!

Recommended Stories

ಭಾರತೀಯ ಶಿಕ್ಷಣ ಕ್ಷೇತ್ರದ ‘ದಾದಾ’, ಮಾಜಿ ರಾಜ್ಯಪಾಲ, ಪದ್ಮಶ್ರೀ ಡಾ. ಡಿ.ವೈ. ಪಾಟೀಲ್ ನಿಧನ!
School Holiday: ರಾಜ್ಯದಲ್ಲಿ ಭಾರೀ ಮಳೆ ಆರ್ಭಟ, ಈ ಜಿಲ್ಲೆಗಳ ಕೆಲವು ತಾಲೂಕುಗಳ ಶಾಲೆ-ಕಾಲೇಜುಗಳಿಗೆ ನಾಳೆ ರಜೆ!