ದ್ವಿತೀಯ ಪಿಯು ಪರೀಕ್ಷೆ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನದಲ್ಲಿ ಬದಲಾವಣೆ: ‘1 ಅಂಕ’ ಹೆಚ್ಚು ಬಂದರೂ ಪರಿಗಣನೆ

By Govindaraj S  |  First Published Feb 9, 2023, 10:29 PM IST

ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ‘ಒಂದು  ಅಂಕ’ ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 


ವರದಿ: ನಂದೀಶ್ ಮಲ್ಲೇನಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್,  ಬೆಂಗಳೂರು

ಬೆಂಗಳೂರು (ಫೆ.09): ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ‘ಒಂದು  ಅಂಕ’ ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 2023ರ ಮಾರ್ಚ್‌ನಲ್ಲಿ ನಡೆಯುವ 'ವಾರ್ಷಿಕ ಪರೀಕ್ಷೆ'ಯಿಂದ ಈ ಹೊಸ ನಿಯಮ ಅನ್ವಯವಾಗಲಿದೆ.  ಹಾಲಿ ಇರುವ ನಿಯಮದ ಪ್ರಕಾರ, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗೆ ಪತ್ರಿಕೆಯ ಒಟ್ಟು ಅಂಕದ ಶೇ.6ರಷ್ಟು ಅಂಕ ಅಥವಾ ಅದಕ್ಕಿಂತ ಹೆಚ್ಚು ಅಂಕಗಳು ಬಂದಲ್ಲಿ ಮಾತ್ರ ಪರಿಗಣಿಸಲಾಗುತ್ತಿತ್ತು. 

Tap to resize

Latest Videos

ಶೇ.6ಕ್ಕಿಂತ ಕಡಿಮೆ ಅಂಕಗಳು ಬಂದಲ್ಲಿ ಪರಿಗಣಿಸುತ್ತಿರಲಿಲ್ಲ.ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಂದು ಅಂಕವು ಮುಖ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ‘ಒಂದು ಅಂಕ’ವನ್ನೂ ಪರಿಗಣಿಸುವ ‘ವಿದ್ಯಾರ್ಥಿ ಸ್ನೇಹಿ’ ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಶೀಘ್ರದಲ್ಲೇ ‘ಕರ್ನಾಟಕ ಪದವಿಪೂರ್ವ ಶಿಕ್ಷಣ ರಾಜ್ಯ ಮಟ್ಟದ ಪಬ್ಲಿಕ್ ಪರೀಕ್ಷೆ ನಿಯಮಗಳು-1997’ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರಿಂದ ನಾನು ಮುಖ್ಯಮಂತ್ರಿ ಆಗಿದ್ದೇನೆ: ಬಿಎಸ್‌ವೈ ಹೆಸರು ಮರೆತ್ರಾ ಸಿಎಂ ಬೊಮ್ಮಾಯಿ

ಮುಂದಿನ ಶೈಕ್ಷಣಿಕ ವರ್ಷದಿಂದ ಎನ್‌ಇಪಿ ಜಾರಿ: ಹೊಸ ಶಿಕ್ಷಣ ಪದ್ಧತಿ (ಎನ್‌ಇಪಿ)ಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಹಲವು ಶಾಲೆಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಇದರ ಬಗ್ಗೆ ವಿಶ್ವಾಸ ಮೂಡಿಸಲು ಶಾಲೆಗಳಲ್ಲಿ ಕಾರ್ಯಾಗಾರ ನಡೆಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ಹೇಳಿದರು. ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕಾರ್ಯಾಗಾರದಿಂದ ಮಕ್ಕಳ ಪರೀಕ್ಷಾ ಸಿದ್ಧತೆಗೆ ತೊಂದರೆ ಆಗುವುದಿಲ್ಲ. ಅವರಿಗೆ ತರಗತಿಗಳು ನಡೆಯುತ್ತವೆ ಎಂದರು. ಸಿದ್ದರಾಮಯ್ಯ ನೇತೃತ್ವದ ಸರ್ಕಾರ 5 ವರ್ಷದಲ್ಲಿ 3,617 ಕೊಠಡಿ ನೀಡಿತ್ತು. 

ಯಡಿಯೂರಪ್ಪನವರನ್ನು ಜೈಲಿಗೆ ಕಳುಹಿಸುವಲ್ಲಿ ಸಿ.ಟಿ.ರವಿ ಪಾತ್ರವೂ ಇದೆ: ಹೆಚ್‌ಡಿಕೆ ಅಪ್ತ ಭೋಜೇಗೌಡ ಆರೋಪ

ನಾವು 10 ಸಾವಿರ ಕೊಠಡಿ ಮಂಜೂರು ಮಾಡಿದ್ದೇವೆ. ಅಂದಿನ ಸರ್ಕಾರ 3 ಸಾವಿರ ಶಿಕ್ಷಕರನ್ನು ನಿಯೋಜಿಸಿತ್ತು. ಬಿಜೆಪಿ ಸರ್ಕಾರ 17,500 ಶಿಕ್ಷಕರನ್ನು ನಿಯೋಜಿಸಿದೆ ಎಂದು ಹೇಳಿದರು. ಶಿಕ್ಷಣ ಇಲಾಖೆಯಲ್ಲಿನ ಅಧಿಕಾರಿಗಳ ಕೊರತೆ ಬಗ್ಗೆ ಕೇಳಿದಾಗ, ಕ್ಲಾಸ್‌ ರೂಮ್‌ ಟೀಚ​ರ್‍ಸ್ಗೆ ಒತ್ತು ನೀಡಲಾಗಿದೆ. ಅವರು ಪಾಠ ಮಾಡುತ್ತಾರೆ. ಇಒ ಅಥವಾ ಇತರ ಅಧಿಕಾರಿಗಳು ಮಕ್ಕಳಿಗೆ ಪಾಠ ಮಾಡುವುದಿಲ್ಲ. ಮೊದಲು ತಳದಿಂದ ಬಲ ತುಂಬುತ್ತೇವೆ. ಎಲ್ಲ ಖಾಲಿ ಹುದ್ದೆ ನೇಮಕವಾಗಬೇಕು. ಡಯಟ್‌ಗೆ ಬಲ ತುಂಬಬೇಕು. ತರಬೇತಿಗಳು ನಡೆಯಬೇಕು ಎನ್ನುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂದರು.

click me!