ಶಾಲೆ- ಕಾಲೇಜು ಆರಂಭ: ಶೀಘ್ರವೇ ಸ್ಪಷ್ಟ ಮಾಹಿತಿ ಎಂದ ಡಿಸಿಎಂ

Suvarna News   | Asianet News
Published : Oct 01, 2020, 05:12 PM ISTUpdated : Oct 01, 2020, 05:16 PM IST
ಶಾಲೆ- ಕಾಲೇಜು ಆರಂಭ: ಶೀಘ್ರವೇ ಸ್ಪಷ್ಟ ಮಾಹಿತಿ ಎಂದ ಡಿಸಿಎಂ

ಸಾರಾಂಶ

ಕರ್ನಾಟಕದಲ್ಲಿ ಶಾಲೆ ಕಾಲೇಜು ಆರಂಭ ಕನ್ಫ್ಯೂಶನ್ | ಯಾವಾಗ ಶಾಲೆ ಆರಂಭ..? | ಶೀಘ್ರ ಸ್ಪಷ್ಟ ಮಾಹಿತಿ ಎಂದ ಡಿಸಿಎಂ

ಬೆಂಗಳೂರು(ಅ.01): ರಾಜ್ಯದಲ್ಲಿ ಶಾಲಾ- ಕಾಲೇಜುಗಳನ್ನು ಆರಂಭ ಮಾಡುವ ಬಗ್ಗೆ ಶೀಘ್ರದಲ್ಲೇ ಸ್ಪಷ್ಟ ಮಾಹಿತಿಯನ್ನು ಸರಕಾರ ನೀಡಲಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಲೇಜುಗಳ ಆರಂಭಕ್ಕೆ ಸಂಬಂಧಿಸಿ ಯುಜಿಸಿ ಈಗಾಗಲೇ ಮಾರ್ಗಸೂಚಿಯನ್ನು ನೀಡಿದೆ. ಅದರಂತೆ ಸರಕಾರ ಎಲ್ಲ ಸಿದ್ಧತೆಗಳನ್ನೂ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್.‌ ಸುರೇಶ್‌ ಕುಮಾರ್‌ ಅವರ ಜತೆಗೂ ಚರ್ಚೆ ನಡೆಸಿದ ನಂತರ ಸ್ಪಷ್ಟ ಮಾಹಿತಿ ನೀಡಲಾಗುವುದು ಎಂದರು.

'TET ಪರೀಕ್ಷೆಯಲ್ಲಿ SOP ಕಡ್ಡಾಯವಾಗಿ ಅನುಸರಿಸಿಬೇಕು'

ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಯಾವುದೇ ಸಮಸ್ಯೆ ಆಗದಂತೆ ಎಲ್ಲ ಮುನ್ನೆಚ್ಚರಿಕೆಗಳನ್ನು ಕೈಗೊಂಡು ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲಾಗಿದೆ. ಅದರ ಮುಂದುವರೆದ ಭಾಗವಾಗಿ ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ಎಂದಿನಿಂದ ಹಾಜರಾಗಬೇಕು ಎಂಬ ಬಗ್ಗೆ ಸಂಬಂಧಿತರ ಜತೆ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಕೋವಿಡ್‌ ಮಾರ್ಗಸೂಚಿಯ ಪ್ರಕಾರ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಅವೆಲ್ಲವುಗಳ ಸಾಧಕ- ಬಾಧಕಗಳನ್ನು ನೋಡಿಕೊಂಡೇ ತರಗತಿಗಳನ್ನು ಆರಂಭ ಮಾಡಲಾಗುವುದು ಎಂದು ಅವರು ತಿಳಿಸಿದರು.

PREV
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ