ಕಳೆದ 8 ತಿಂಗಳು ನಂತರ ಹಂತ-ಹಂತವಾಗಿ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗಿವೆ. ಇದರ ಮಧ್ಯೆ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಗುಡ್ ನ್ಯೂಸ್ ನಿಡಿದೆ.
ಬೆಂಗಳೂರು, ನ.18): ರಾಜ್ಯದಲ್ಲಿ ಕಾಲೇಜುಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಬಸ್ ಪಾಸ್ ಅವಧಿಯನ್ನು ವಿಸ್ತರಿಸಲಾಗಿದೆ. 2019 -20 ನೇ ಸಾಲಿನ ಬಸ್ ಪಾಸ್ ಅವಧಿ ವಿಸ್ತರಿಸಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ರಾಜ್ಯದ ವಿಶ್ವವಿದ್ಯಾಲಯಗಳು, ಖಾಸಗಿ ವಿಶ್ವವಿದ್ಯಾಲಯ, ಪದವಿ, ವೈದ್ಯಕೀಯ, ತಾಂತ್ರಿಕ, ಡಿಪ್ಲೊಮಾ, ಅನುದಾನ, ಅನುದಾನ ರಹಿತಿ ಕಾಲೇಜುಗಳಲ್ಲಿ 2020-21ನೇ ಶೈಕ್ಷಣಿಕ ಚಟುವಟಿಕೆಗಳನ್ನು ದಿನಾಂಕ 17-11-2020ರಿಂದ ಪ್ರಾರಂಭಿಸಲು ಸರ್ಕಾರದ ಆದೇಶದಲ್ಲಿ ಸೂಚಿಸಲಾಗಿದೆ.
ಕಾಲೇಜ್ ಆರಂಭದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್...!
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2019-20ನೇ ಸಾಲಿನಲ್ಲಿ ವಿತರಣೆಯಾಗಿರುವ ಪದವಿ, ಸ್ನಾತಕೋತ್ತರ, ಡಿಪ್ಲೊಮಾ, ತಾಂತ್ರಿಕ, ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸುಗಳನ್ನು ದಿನಾಂಕ 10-12-2020ರವರೆಗೆ ನಿಗಮದ ಬಸ್ಸುಗಳಲ್ಲಿ ಮಾನ್ಯ ಮಾಡಲು ಕ್ರಮಕೈಗೊಳ್ಳಲಾಗಿದೆ.
ವಿದ್ಯಾರ್ಥಿಗಳು ಪ್ರಸಕ್ತ ವರ್ಷದಲ್ಲಿ ಕಾಲೇಜುಗಳಿಗೆ ದಾಖಲಾಗಿರುವ ಸಂಬಂಧದ ಪ್ರಸಕ್ತ ವರ್ಷದ ಶುಲ್ಕ ಪಾವತಿ ರಸೀದಿಯೊಂದಿಗೆ, 2019-20ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ತೋರಿಸಿ, ಸಂಬಂಧ ಪಟ್ಟ ಮಾರ್ಗದಲ್ಲಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳು ಸದರಿ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೆಎಸ್‌ಆರ್‌ಟಿಸಿ ಸಂಸ್ಥೆ ಮನವಿ ಮಾಡಿದೆ.