KEA Assistant Professor Exam: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ, ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚನೆ

By Suvarna News  |  First Published Mar 11, 2022, 1:19 PM IST

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇರುವ 1,242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಮಾರ್ಚ್ 12ರಿಂದ 16ರವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಕಟ್ಟುನಿಟ್ಟಿನ ಕ್ರಮಕ್ಕೆ  ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸೂಚನೆ ನೀಡಿದ್ದಾರೆ.


ಬೆಂಗಳೂರು(ಮಾ.11): ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (government first grade college) ಇರುವ 1,242 ಸಹಾಯಕ ಪ್ರಾಧ್ಯಾಪಕ (assistant professors) ಹುದ್ದೆಗಳ ನೇಮಕಾತಿಗೆ ಮಾರ್ಚ್ 12ರಿಂದ 16ರವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, (Higher Education Minister C.N. Ashwath Narayana ) ಪರೀಕ್ಷಾ ಕೇಂದ್ರಗಳಿರುವ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠರು, ಕಮಿಷನರ್ ಮತ್ತಿತರ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ (competitive examination) ನಕಲು ಹೊಡೆಯುವುದು ಸೇರಿದಂತೆ ಯಾವುದೇ ಅಕ್ರಮಕ್ಕೆ ಕಿಂಚಿತ್ತೂ ಅವಕಾಶ ಮಾಡಿಕೊಡಬಾರದು. ಏನಾದರೂ ಸಮಸ್ಯೆಗಳು ಕಂಡುಬಂದಲ್ಲಿ ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ಮತ್ತು ಪಾರದರ್ಶಕವಾಗಿ ನಡೆಸಬೇಕು ಎಂದು ಸಚಿವರು ಸೂಚನೆ ನೀಡಿದರು.

Tap to resize

Latest Videos

undefined

ವಿಚ್ಛಿದ್ರಕಾರಿ ಶಕ್ತಿಗಳು ಪರೀಕ್ಷಾ ವ್ಯವಸ್ಥೆಯನ್ನು ಹಾಳುಗೆಡವಲು ಅಥವಾ ಈ ನೇಮಕಾತಿ ಪ್ರಕ್ರಿಯೆಗೆ ಕಳಂಕ ತರಲು ಆಸ್ಪದ ಕೊಡಬಾರದು. ಹಾಗೇನಾದರೂ ಆದರೆ, ಪರೀಕ್ಷಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠರನ್ನೇ ಹೊಣೆಗಾರರಾಗಿ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

IREDA RECRUITMENT 2022: ವಿವಿಧ ಹುದ್ದೆಗಳಿಗೆ ಐಆರ್‌ಇಡಿಎ ನೇಮಕಾತಿ

ಮಾರ್ಚ್ 12 ಮತ್ತು 16 ರ ನಡುವೆ ಬೆಂಗಳೂರು (bengaluru), ಮೈಸೂರು (Mysuru), ಮಂಗಳೂರು (Mangaluru), ಶಿವಮೊಗ್ಗ (Shivamogga), ಧಾರವಾಡ, ಬೆಳಗಾವಿ ಮತ್ತು ಕಲಬುರಗಿಯಲ್ಲಿ ಪರೀಕ್ಷೆಗಳು ನಡೆಯಲಿವೆ.  33 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಪರೀಕ್ಷೆ ಬರೆಯುತ್ತಿದ್ದಾರೆ.  ಇದಕ್ಕಾಗಿ 1,409 ಕೊಠಡಿ ಮೇಲ್ವಿಚಾರಕರು, 82 ವೀಕ್ಷಕರು, 82 ಕಸ್ಟೋಡಿಯನ್ಸ್ ಮತ್ತು 164 ಮಂದಿಯ ವಿಶೇಷ ಜಾಗೃತ ದಳವನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದರು. ಪರೀಕ್ಷಾ ಕೇಂದ್ರಗಳ ಸುತ್ತ‌ ನಿಷೇಧಾಜ್ಞೆ ಜಾರಿಗೊಳಿಸಲು ಸೂಚಿಸಲಾಗಿದೆ ಎಂದರು. 

ಸಹಾಯಕ ಪ್ರಾಧ್ಯಾಪಕರ ನೇಮಕ ಅಕ್ರಮಕ್ಕೆ ಸಹಾಯವಾಣಿ ಆರಂಭ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು,  ಆದರೆ, ಈ ಬಗ್ಗೆ ಹರಿದಾಡುತ್ತಿರುವ ಅನಪೇಕ್ಷಿತ ವದಂತಿಗಳಿಗೆ ಕಡಿವಾಣ ಹಾಕಿ, ಕಠಿಣ ಕ್ರಮ ಜರುಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examinations Authority) ಸಹಾಯವಾಣಿಯೊಂದನ್ನು ಆರಂಭಿಸಿದೆ. 

ಈ ಬಗ್ಗೆ ಪ್ರಕಟಣೆ ನೀಡಿರುವ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ, ಅಭ್ಯರ್ಥಿಗಳಿಗೆ ಯಾವುದಾದರೂ ಆಮಿಷವೊಡ್ಡಲು ಯಾರಾದರೂ ಪ್ರಯತ್ನಿಸುತ್ತಿದ್ದರೆ ಅಥವಾ ವದಂತಿಗಳನ್ನು ಹರಡುತ್ತಿರುವವರು ಕಂಡುಬಂದರೆ ಸಹಾಯವಾಣಿ ಸಂಖ್ಯೆ 99015-81708ಕ್ಕೆ ನೇರವಾಗಿ ಕಚೇರಿ ಸಮಯದಲ್ಲಿ ಕರೆ ಮಾಡಬಹುದು, ಇಲ್ಲವೇ ವಾಟ್ಸಾಪ್ ಮೂಲಕ ತಿಳಿಸಬಹುದು. ಈ ಮಾಹಿತಿಯನ್ನು ಗೌಪ್ಯವಾಗಿಟ್ಟು ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

SBI Recruitment 2022: ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಎಸ್‌ಬಿಐ ನೇಮಕಾತಿ

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಸರ್ಕಾರಿ ನಿಯಮಗಳಿಗೆ ಅನುಗುಣವಾಗಿ ಪ್ರತಿಭೆಯನ್ನು ಆಧರಿಸಿ ನಡೆಯುತ್ತಿದೆ. ಈ ಬಗ್ಗೆ ಅಭ್ಯರ್ಥಿಗಳು ವದಂತಿಗಳನ್ನು ನಂಬಿ, ಮೋಸ ಹೋಗಬಾರದು, ಈ ಪ್ರಕ್ರಿಯೆಲ್ಲಿ ಭ್ರಷ್ಟಾಚಾರಕ್ಕಾಗಲಿ, ಅವ್ಯವಹಾರಕ್ಕಾಗಲಿ ಕಿಂಚಿತ್ತೂ ಆಸ್ಪದವಿಲ್ಲ ಎಂದು ಅವರು ಸ್ಪಷ್ಪಪಡಿಸಿದ್ದಾರೆ. ನೇಮಕಾತಿ ಪ್ರಕ್ರಿಯೆ ಅಂಗವಾಗಿ ಈಗಾಗಲೇ ಘೋಷಿಸಿರುವಂತೆ ಮಾರ್ಚ್ 12 ರಿಂದ 16ರವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಬರುವವರು ಸೂಚಿತ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಇದುವರೆಗೂ  ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳದೆ ಇರುವ ಅಭ್ಯರ್ಥಿಗಳು ಪ್ರಾಧಿಕಾರದ ಜಾಲತಾಣದ ಮೂಲಕ ಪ್ರವೇಶ ಪತ್ರ ಪಡೆಯಬೇಕು. 

click me!