ಒಂದೇ ದಿನ ಮೂರು ಸ್ಪರ್ಧಾತ್ಮಕ ಪರೀಕ್ಷೆ, ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ ದಿನಾಂಕ ಬದಲಿಸಲು ಖರ್ಗೆ ಮನವಿ

By Gowthami K  |  First Published Oct 25, 2023, 4:09 PM IST

ಒಂದೇ ದಿನ ಮೂರು ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಿಗದಿಯಾಗಿದ್ದು, ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕಗಳಲ್ಲಿ ನಿಗದಿ ಮಾಡಿ ಎಲ್ಲರಿಗೂ ಅವಕಾಶ ಮಾಡಿ ಕೊಡಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ  ಮನವಿ ಮಾಡಿದ್ದಾರೆ.


ಬೆಂಗಳೂರು (ಅ.25): ಒಂದೇ ದಿನ ಮೂರು ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಿಗದಿಯಾಗಿದ್ದು, ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕಗಳಲ್ಲಿ ನಿಗದಿ ಮಾಡಲು ಕ್ರಮ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ  ಮನವಿ ಮಾಡಿದ್ದಾರೆ.

ರಾಜ್ಯ ಲೋಕಸೇವಾ ಆಯೋಗವು ರಾಜ್ಯ ಲೆಕ್ಕ ಪರಿಶೋಧನಾ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ 242 ಲೆಕ್ಕ ಸಹಾಯಕರ ಹುದ್ದೆಗೆ, 47 ಸಹಕಾರ ಸಂಘಗಳ ನಿರೀಕ್ಷಕರ ಹುದ್ದೆಗಳಿಗೆ, ಮತ್ತು ರಾಜ್ಯ ಪೊಲೀಸ್‌ ಇಲಾಖೆಯು ಕೂಡ, ಖಾಲಿ ಇರುವ 454 ಸಿವಿಲ್ ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ದಿನಾಂಕ ನವೆಂಬರ್‌ 5, 2023 ರ ಭಾನುವಾರದಂದು ಒಂದೇ ದಿನ ಸ್ಪರ್ಧಾತ್ಮಕ ಪರೀಕ್ಷೆ ನಿಗದಿಗೊಳಿಸಲಾಗಿದೆ.

Tap to resize

Latest Videos

undefined

ರಾಜ್ಯ ಶಿಕ್ಷಣ ವ್ಯವಸ್ಥೆಯಲ್ಲಿ ಮತ್ತೊಂದು ಹೊಸ ರೂಲ್ಸ್, ಕಂಗಾಲಾದ ಪೋಷಕರು!

ಆದರೆ ಕಳೆದ 5 ವರ್ಷದಿಂದ ಹಲವಾರು ಸರ್ಕಾರಿ ಹುದ್ದೆಗಳಿಗೆ ನೇಮಕಾತಿಯಾಗದೇ ಸಾವಿರಾರು ಅಭ್ಯರ್ಥಿಗಳು ನಿರಾಸೆಗೊಂಡಿದ್ದಾರೆ. ತಮ್ಮ ವಿದ್ಯಾರ್ಹತೆಗೆ ಹಾಗೂ ವಯೋಮಿತಿಗೆ ತಕ್ಕಂತೆ ಸರಿಯಾಗಿ ಉದ್ಯೋಗ ಸಿಗದೇ ಈಗಾಗಲೇ ಅನ್ಯಾಯಕ್ಕೆ ಒಳಗಾಗಿದ್ದಾರೆ. 

ಸರ್ಕಾರಿ ನೌಕರಿ ಸೇರಬೇಕೆಂದು ಪ್ರತಿಯೊಂದು ನೇಮಕಾತಿಗೂ ಅರ್ಜಿ ಸಲ್ಲಿಸಿ ವರ್ಷಗಟ್ಟಲೇ ತಯಾರಿ ನಡೆಸಿದ ಅಭ್ಯರ್ಥಿಗಳಿಗೆ ಒಂದೇ ದಿನ ಮೂರು ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಿಗದಿಗೊಳಿಸಿರುವುದರಿಂದ ಗೊಂದಲ ಉಂಟಾಗಿದೆ. ಮಾತ್ರವಲ್ಲ  ಅಭ್ಯರ್ಥಿಗಳು ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕಗಳಲ್ಲಿ ನಿಗದಿ ಮಾಡಲು ಕ್ರಮ ವಹಿಸುವಂತೆ ನನಗೆ ಮನವಿ ಸಲ್ಲಿಸಿರುತ್ತಾರೆ.

ರೈಲ್ವೆಯಲ್ಲಿ ಲಕ್ಷಗಟ್ಟಲೆ ವೇತನದ ಉದ್ಯೋಗ, ಇಂದೇ ಅರ್ಜಿ ಸಲ್ಲಿಸಿ

ವಿಶೇಷವಾಗಿ ನಮ್ಮ ಕಲ್ಯಾಣ ಕರ್ನಾಟಕ ಭಾಗದ ಯುವಕರು ನವೆಂಬರ್ 3ರಂದು ಪೊಲೀಸ್ ಇಲಾಖೆ ಪರೀಕ್ಷೆಗಳನ್ನು ಬರೆದರೆ ಬೇರೆ ಸರ್ಕಾರಿ ಹುದ್ದೆಗಳ ನೇಮಕಾತಿಗಳ ಅವಕಾಶದಿಂದ ವಂಚಿತರಾಗುತ್ತಾರೆ. ಆದ್ದರಿಂದ ಈ ಕುರಿತು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಬೇರೆ ಬೇರೆ ಪರೀಕ್ಷೆಗಳಿಗೆ ಪ್ರತ್ಯೇಕವಾಗಿ ದಿನಾಂಕವನ್ನು ನಿಗದಿ ಪಡಿಸುವಂತೆ ಮನವಿ ಮಾಡಿದ್ದೇನೆ.

ಲಕ್ಷಾಂತರ ಪ್ರತಿಭಾನ್ವಿತ ಅಭ್ಯರ್ಥಿಗಳ ಭವಿಷ್ಯದ ಹಿತ ದೃಷ್ಟಿಯಿಂದ ಕರ್ನಾಟಕ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕಗಳಲ್ಲಿ ನಿಗದಿ ಮಾಡಲು ಕೋರಲಾಗಿದೆ ಎಂದು ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.

 

click me!